Advertisement

ವಿಜ್ಞಾನ, ತಂತ್ರಜ್ಞಾನದಲ್ಲಿ ನಗರ ಮುಂದಿದೆ

12:47 PM Oct 11, 2018 | Team Udayavani |

ಬೆಂಗಳೂರು: ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದ ಸ್ಪರ್ಧೆಯಲ್ಲಿ ರಾಜ್ಯ ಸಾಕಷ್ಟು ಮುಂದಿರುವ ಕಾರಣದಿಂದಲೇ ರಾಜಧಾನಿ ಬೆಂಗಳೂರು ಸಿಲಿಕಾನ್‌ ಸಿಟಿ , ಉದ್ಯಾನ ನಗರಿ ಎಂಬ ಹೆಗ್ಗಳಿಕೆ ಪಡೆದಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಕೆ.ಜೆ.ಜಾರ್ಜ್‌ ಅಭಿಪ್ರಾಯ ವ್ಯಕ್ತಪಡಿಸಿದರು.

Advertisement

ನಗರದ ತೋಟಗಾರಿಕಾ ವಿಜ್ಞಾನಗಳ ಕಾಲೇಜು ಆವರಣದಲ್ಲಿ ಬುಧವಾರ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ನೂತನ ಯು.ಆರ್‌.ರಾವ್‌ ವಿಜ್ಞಾನ ಭವನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ವಿಜ್ಞಾನ, ತಂತ್ರಜ್ಞಾನ ಕ್ಷೇತ್ರ ಶರವೇಗದಲ್ಲಿ ಬೆಳೆಯುತ್ತಿದೆ. ಇದರ ಕಾರಣರಾದ ವಿಜ್ಞಾನಿಗಳ ಸಾಧನೆಗೆ ಕೃತಜ್ಞತೆ ಸಲ್ಲಿಸಬೇಕು. ರಾಜ್ಯದ ವಿಜ್ಞಾನ ಕ್ಷೇತ್ರವನ್ನು ಮತ್ತಷ್ಟು ಉತ್ತೇಜಿಸಲು ಅಂತಾರಾಷ್ಟ್ರೀಯ ಐಟಿ ಟೆಕ್ನಾಲಜಿ ಸಮ್ಮೇಳನ ಹಮ್ಮಿಕೊಳ್ಳಲು ರೂಪುರೇಷೆ ಸಿದ್ಧಪಡಿಸುತ್ತಿದ್ದೇವೆ ಎಂದರು.
 
ರಾಜ್ಯದಲ್ಲಿ 22 ಉಪ ಪ್ರಾದೇಶಿಕ ಕೇಂದ್ರ, ಜಿಲ್ಲೆಗೊಂದು ಜಿಲ್ಲಾ ವಿಜ್ಞಾನ ಕೇಂದ್ರ ಆರಂಭಿಸಲಾಗುವುದು. ಆರು ಪ್ರಾದೇಶಿಕ ವಿಜ್ಞಾನ ಕೇಂದ್ರಗಳನ್ನು ಆರಂಭಿಸಿ, ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆಯ್ದ ಕೇಂದ್ರಗಳಲ್ಲಿ ತಾರಾಲಯ ನಿರ್ಮಾಣ ಮಾಡಲಿದ್ದೇವೆ. ಇದರಿಂದ ವಿದ್ಯಾರ್ಥಿಗಳು ಶಾಲೆ ಅಂಗಳದಲ್ಲೇ ತಾರಾಲಯ ಯೋಜನೆಯ ಫ‌ಲ ಪಡೆಯಬಹುದು ಎಂದು ಹೇಳಿದರು.

ಅತಿ ಶೀಘ್ರದಲ್ಲಿ ಆರು ಸಂಚಾರಿ ತಾರಾಲಯಗಳು ಕಾರ್ಯಾರಂಭ ಮಾಡಲಿವೆ. ಈಗ ಇರುವ ಮೂರು ಸಂಚಾರಿ ತಾರಾಲಯ ಸೇರಿದಂತೆ ದೇಶದಲ್ಲಿ ಮೊದಲ ಬಾರಿಗೆ ಒಂಬತ್ತು ಸಂಚಾರಿ ತಾರಾಲಯಗಳನ್ನು ಹೊಂದಿರುವ ಏಕೈಕ ರಾಜ್ಯ ನಮ್ಮದಾಗಲಿದೆ. ವಿಜ್ಞಾನ ಕ್ಷೇತ್ರಕ್ಕೆ ಯು.ಆರ್‌.ರಾವ್‌ ಅವರ ಕೊಡುಗೆ ಅಪಾರ. ಹೀಗಾಗಿ ಅವರ ಸ್ಮರಣಾರ್ಥ ನೂತನ ಕಟ್ಟಡ ಉದ್ಘಾಟಿಸಿ, ನೂತನ ಕಟ್ಟಡಕ್ಕೆ ಅವರ ಹೆಸರು ನಾಮಕರಣ ಮಾಡಿದ್ದೇವೆ ಎಂದರು.

ಶಾಸಕ ಎಸ್‌.ಆರ್‌.ವಿಶ್ವನಾಥ್‌, ಕರ್ನಾಟಕ ವಿಜ್ಞಾನ, ತಂತ್ರಜ್ಞಾನ ಅಕಾಡೆಮಿ ಅಧ್ಯಕ್ಷ ಪದ್ಮಶ್ರೀ ಡಾ.ಎಸ್‌.
ಕೆ.ಶಿವಕುಮಾರ್‌, ಪಾಲಿಕೆ ಸದಸ್ಯರಾದ ಎಂ.ನೇತ್ರಪಲ್ಲವಿ, ಎಚ್‌.ಕುಸುಮಾ, ಡಾ.ಕೆ.ಎಂ.ಇಂದ್ರೇಶ್‌, ಡಾ.ಎಚ್‌. ಹೊನ್ನೇಗೌಡ ಮೊದಲಾದವರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next