Advertisement

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ

12:13 PM Oct 24, 2021 | Team Udayavani |

ಬೆಂಗಳೂರು: ಸಾರ್ವಜನಿಕರ ಮೇಲೆ ದೌರ್ಜನ್ಯ, ಡ್ರಗ್ಸ್‌ ಮಾರಾಟ, ವ್ಯಸನಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುತ್ತೇವೆ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ಪಂತ್‌ ಎಚ್ಚರಿಕೆ ನೀಡಿದರು. ಮಾಸಿಕ ಜನಸಂಪರ್ಕ ದಿವಸ್‌ ಹಿನ್ನೆಲೆಯಲ್ಲಿ ಶನಿವಾರ ವೈಯಾಲಿಕಾವಲ್‌ ಪೊಲೀಸ್‌ ಠಾಣೆ ಆವರಣದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಪಾಲ್ಗೊಂಡಿದ್ದ ಅವರು, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿ ಮಾತನಾಡಿದರು.

Advertisement

ಸಾರ್ವಜನಿಕರು ವೈಯಾಲಿಕಾವಲ್‌, ಗುಟ್ಟಹಳ್ಳಿ ಸುತ್ತ ಮುತ್ತಲ ನಿರ್ಜನ ಪ್ರದೇಶದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ. ಡ್ರಗ್ಸ್‌ ಸೇವಿಸಿ ಸಾರ್ವಜನಿಕರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಜತೆಗೆ ಅಸಭ್ಯವಾಗಿ ವರ್ತಿಸುತ್ತಿ ದ್ದಾರೆ. ಮುಖ್ಯವಾಗಿ ಗುಟ್ಟಹಳ್ಳಿ ಬಸ್‌ ನಿಲ್ದಾಣದಲ್ಲಿ ಕಾಲೇಜು ಯುವಕ- ಯುವತಿಯರು ಕಾಲೇಜು ಅಥವಾ ಮನೆಗೆ ತೆರಳದೆ ಬಹು ಸಮಯ ಬಸ್‌ ನಿಲ್ದಾಣದಲ್ಲೇ ಹರಟೆ ಹೊಡೆಯುತ್ತಾ ನಿಲ್ಲುವುದರ ಜತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸುತ್ತಾರೆ.

ಅದರಿಂದ ಈ ಮಾರ್ಗವಾಗಿ ಓಡಾಡುವ ಮಹಿಳೆಯರು ಮತ್ತು ಮಕ್ಕಳಿಗೆ ಇರಿಸು ಮುರಿಸಾಗುತ್ತಿದೆ ಎಂದು ಸ್ಥಳೀಯರೊಬ್ಬರು ದೂರಿದರು. ಅದಕ್ಕೆ ಪ್ರತಿಕ್ರಿಯೆ ನೀಡಿದ ಪೊಲೀಸ್‌ ಆಯುಕ್ತರು, ಅಪ ರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾರ್ವ ಜನಿಕರ ಶಾಂತಿಗೆ ಭಂಗ ತರುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು.

ಕಾಲೇಜಿಗೆ ತೆರಳುವ ಸಮಯದಲ್ಲಿ ಹಾಗೂ ಬಿಡುವ ಸಮಯದಲ್ಲಿ ಹೆಚ್ಚಿನ ಪೊಲೀಸ್‌ ಗಸ್ತು ಓಡಾ ಡುವಂತೆ ಸೂಚಿಸಲಾಗು ವುದು. ಅಲ್ಲದೆ, ಪೋಷಕರು ಕೂಡ ತಮ್ಮ ಮಕ್ಕಳಿಗೆ ಅಸಭ್ಯ ವರ್ತನೆ ಮಾಡದಂತೆ ತಿಳಿಹೇಳಿ ಸರಿ ದಾರಿಗೆ ತರಬೇಕು ಎಂದು ಇದೇ ವೇಳೆ ಸಲಹೆ ಕೂಡ ನೀಡಿದರು. ವೈಯಾಲಿ ಕಾವಲ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಬಾರ್‌ ಗಳಲ್ಲಿ ಮದ್ಯಪ್ರಿಯರು, ಬಾರ್‌ನಿಂದ ಹೊರಗೆ ಬಂದು ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಸೇವಿಸುತ್ತಾರೆ. ಮದ್ಯದ ಅಮಲಿನಲ್ಲಿ ಸಾರ್ವಜನಿಕರ ಜತೆ ಕಾದಾಟ ಕ್ಕಿಳಿಯುತ್ತಾರೆ ಎಂದು ಮತ್ತೂಬ್ಬ ಸಾರ್ವಜನಿಕರು ದೂರು ನೀಡಿದರು. ಅದಕ್ಕೆ ಪ್ರತಿಕ್ರಿಯೆಸಿದ ಆಯುಕ್ತರು, ಬಾರ್‌ ಮಾಲೀಕರ ಜತೆ ಮಾತುಕತೆ ನಡೆಸಿ ಪರಿಹಾರ ಕಲ್ಪಿಸುವುದಾಗಿ ಭರವಸೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next