Advertisement

ಸರ್ಕಾರಿ ಜಾಗೆ ನಿವಾಸಿಗಳಿಗೆ ಹಕ್ಕು ಪತ್ರ ಕಾಗೋಡು ಹೋರಾಟದ ಫಲ

04:28 PM Mar 08, 2018 | Team Udayavani |

ಸಿಂಧನೂರು: 40-50 ವರ್ಷಗಳಿಂದ ಸರಕಾರಿ ಜಾಗೆಯಲ್ಲಿ ಮನೆ ಕಟ್ಟಿಕೊಂಡಿದ್ದವರಿಗೆ ಕಂದಾಯ ಮಂತ್ರಿ ಕಾಗೋಡು ತಿಮ್ಮಪ್ಪ ಅವರ ದಕ್ಷತೆಯಿಂದಾಗಿ ಇಂದು ಹಕ್ಕುಪತ್ರ ವಿತರಿಸಲು ಸಾಧ್ಯವಾಗುತ್ತಿದೆ ಎಂದು ಶಾಸಕ ಹಾಗೂ
ಎಂ.ಎಸ್‌.ಐ.ಎಲ್‌. ಅಧ್ಯಕ್ಷ ಹಂಪನಗೌಡ ಬಾದರ್ಲಿ ಹೇಳಿದರು.

Advertisement

ಸಿಂಧನೂರು ತಾಲೂಕು ಆಡಳಿತ ವತಿಯಿಂದ ನಗರದ ಸ್ತ್ರೀ ಶಕ್ತಿ ಭವನದಲ್ಲಿ ನಡೆದ ಕರ್ನಾಟಕ ಭೂ ಕಂದಾಯ ಕಾಯ್ದೆ 1964 (ಸಿ) ಅಡಿಯಲ್ಲಿ ಸರ್ಕಾರಿ ಜಾಗೆಯಲ್ಲಿ ಮನೆ ಕಟ್ಟಿಕೊಂಡವರಿಗೆ ಹಕ್ಕುಪತ್ರ ವಿತರಣೆ ಹಾಗೂ ಎಂ.ಎಸ್‌.ಐ.ಎಲ್‌. ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ಕಿಟ್‌ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸರಕಾರಿ ಜಾಗೆಯಲ್ಲಿ ವಾಸಿಸುತ್ತಿರುವವರಿಗೆ ಹಕ್ಕು ಕೊಡಿಸುವ ಸಲುವಾಗಿ ಹೋರಾಟ ಮಾಡಿದವರಲ್ಲಿ ಕಾಗೋಡು ತಿಮ್ಮಪ್ಪನವರು ಪ್ರಮುಖರು. ಅವರೇ ಕಂದಾಯ ಮಂತ್ರಿಯಾಗಿದ್ದರಿಂದ ಕಂದಾಯ ಇಲಾಖೆ ಭೂ ಸಮಸ್ಯೆಯ ಪರಿಹಾರಕ್ಕಾಗಿ ಅನೇಕ ಕಾನೂನುಗಳಿಗೆ ತಿದ್ದುಪಡಿ ಮಾಡಿ ಹಾಗೂ ಅಗತ್ಯ ಕಾನೂನು ರಚಿಸಿ ಬಡ ಜನರಿಗೆ
ಅನುಕೂಲ ಮಾಡಿಕೊಟ್ಟಿದ್ದಾರೆ. ಇಂದು 411 ಜನರಿಗೆ ಹಕ್ಕು ಪತ್ರ ವಿತರಿಸಲಾಗುತ್ತಿದೆ.

ಹಕ್ಕುಪತ್ರ ಪಡೆದವರು ಅದನ್ನು ಜೋಪಾನ ಮಾಡಿಟ್ಟುಕೊಳ್ಳಬೇಕು. ಇಲ್ಲದೆ ಹೋದರೆ ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದು ಕಿವಿಮಾತು ಹೇಳಿದರು.

ಎಂಎಸ್‌ಐಎಲ್‌ ಅಧ್ಯಕ್ಷನಾದ ಮೇಲೆ ಆಡಳಿತ ಮಂಡಳಿ ಸಹಕಾರದೊಂದಿಗೆ ನಿಗಮದಲ್ಲಿ ಅನೇಕ ಹೊಸ ಯೋಜನೆಗಳಿಗೆ ಚಾಲನೆ ನೀಡಿದ್ದೇನೆ. ಅದರಲ್ಲಿ ಮರಳು ಮಾರಾಟವು ಒಂದು. ನಮ್ಮ ಪ್ರಾಕೃತಿಕ ಸಂಪತ್ತನ್ನು ಕಾಪಾಡಿ ಯೋಗ್ಯ ಬೆಲೆಯಲ್ಲಿ ಉಸುಕು ಮಾರಾಟ ಮಾಡಲಾಗುತ್ತಿದೆ. ಈಗಾಗಲೇ ಮೊದಲ ಹಂತದಲ್ಲಿ ಸಾವಿರ ಮೆಟ್ರಿಕ್‌ ಟನ್‌ ಮರಳು ಮಾರಾಟವಾಗಿದ್ದು, ಎರಡನೇ ಕಂತಿನ ಮರಳು ಬಂದಿದೆ ಎಂದರು.

Advertisement

ಎಂಎಸ್‌ಐಎಲ್‌ನಿಂದ ಇತ್ತೀಚಿಗೆಯಷ್ಟೇ 15,400 ವಿದ್ಯಾರ್ಥಿಗಳಿಗೆ ಕಿಟ್‌ ವಿತರಿಸಲಾಗಿತ್ತು. ಇದೀಗ 400-500 ಆಶಾ ಕಾರ್ಯಕರ್ತೆಯರಿಗೆ ಕಿಟ್‌ ವಿತರಿಸಲಾಗುತ್ತಿದೆ ಎಂದು ಹೇಳಿದರು. ತಹಶೀಲ್ದಾರ ವೆಂಕನಗೌಡ ಪಾಟೀಲ ಪ್ರಾಸ್ತಾವಿಕ
ಮಾತನಾಡಿದರು. ತಾಪಂ ಅಧ್ಯಕ್ಷೆ ಜೈನಾಬಿ ನವಲಿ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ, ಜಿಪಂ ಸದಸ್ಯ ಎನ್‌. ಶಿವನಗೌಡ ಗೊರೇಬಾಳ, ನಗರಸಭೆ ಅಧ್ಯಕ್ಷೆ ಮಂಜುಳಾ ಪಾಟೀಲ, ಸ್ತ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷೆ ಶ್ರೀದೇವಿ ಶ್ರೀನಿವಾಸ, ನಗರಸಭೆ ಸದಸ್ಯರಾದ ಸೈಯ್ಯದ್‌ ಜಾಫರ್‌ಅಲಿ ಜಾಗೀರದಾರ, ತಾಪಂ ಸದಸ್ಯ ಈಶಪ್ಪ ಸಾಹುಕಾರ ಇತರರು ಉಪಸ್ಥಿತರಿದ್ದರು. 

ಇದೇ ವೇಳೆ ಫಲಾನುಭವಿಗಳಿಗೆ ಹಕ್ಕುಪತ್ರ ಹಾಗೂ ಆಶಾ ಕಾರ್ಯಕರ್ತೆಯರಿಗೆ ಕಿಟ್‌ಗಳನ್ನು ವಿತರಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next