ದಾವಣಗೆರೆ : ಸಿಎಂ ಬಸವಾರಾಜ ಬೊಮ್ಮಾಯಿ ಅವರು ಶನಿವಾರ ‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮಕ್ಕೆ ಪುನಃರ್ ಚಾಲನೆ ನೀಡಿದ್ದಾರೆ.
ಸುರಹೊನ್ನೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಿಎಂ ಬಸವಾರಾಜ ಬೊಮ್ಮಾಯಿ ಅವರು ಕಾರ್ಯಕ್ರಮ ಉದ್ಘಾಟನೆ ಮಾಡಿದರು.ಕಂದಾಯ ಸಚಿವ ಆರ್.ಅಶೋಕ್ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಕಂದಾಯ ಸಚಿವ ಆರ್.ಅಶೋಕ್ ಅವರು ಆರಂಭಿಸಿದ್ದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸುರಹೊನ್ನೆ ಹಾಗೂ ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ರಾತ್ರಿ ಕಸ್ತೂರಬಾ ವಸತಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಎಚ್ ಕಡದಕಟ್ಟೆ ಹೆಲಿಪ್ಯಾಡ್ ಗೆ ಆಗಮಿಸಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಇದಕ್ಕೂ ಮುನ್ನ ಸೂರಹೊನ್ನೆ ಗ್ರಾಮಕ್ಕೆ ಆಗಮಿಸಿದ ಕಂದಾಯ ಸಚಿವರಾದ ಆರ್.ಅಶೋಕ್ ಅವ ರನ್ನು ಪೂರ್ಣಕುಂಭ ಹಾಗೂ ಎತ್ತಿನ ಬಂಡಿ ಗಾಡಿಯಲ್ಲಿ ಮೆರವಣಿಗೆ ಮೂಲಕ ವೇದಿಕೆಗೆ ಸ್ವಾಗತಿಸಲಾಯಿತು.
ಕೋವಿಡ್ ನಿಯಮ ಸರಳೀಕರಣ
ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ತಜ್ಞರ ಜತೆ ಚರ್ಚಿಸಿ ಎರಡು ದಿನಗಳಲ್ಲಿ ಕೋವಿಡ್ ನಿಯಮ ಸರಳೀಕರಣ ಮಾಡಲಾಗುವುದು. ಶಾಲೆ ಸೇರಿದಂತೆ ನಾನಾ ವಿಚಾರಗಳ ಬಗ್ಗೆ ಚಿಂತನೆ ಮಾಡಿ ಕೋವಿಡ್ ಮಾರ್ಗಸೂಚಿ ಸರಳ ಗೊಳಿಸಲಾಗುವುದು ಎಂದರು.
ಬೆಂಗಳೂರು ವಿಕ್ಟೋರಿಯ ಆಸ್ಪತ್ರೆ ಯಲ್ಲಿ ಬೆಡ್ ಸಮಸ್ಯೆ ವಿಚಾರದ ಬಗ್ಗೆ ಸಂಬಂಧಿಸಿದವರ ಜೊತೆ ಮಾತಾಡಿದ್ದೇನೆ. ಸರಿ ಆಗುತ್ತದೆ ಎಂದರು.