ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಅವರ ಸಚಿವ ಸಂಪುಟದ ಸದಸ್ಯರ ವಿರುದ್ಧ ಎಸಿಬಿಯಲ್ಲಿ 36 ದೂರುಗಳು ದಾಖಲಾಗಿವೆ. ಆದರೂ, ಯಾವುದೇ ಕ್ರಮ ಕೈಗೊಳ್ಳದೆ ಅವುಗಳನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.
ನಿವೃತ್ತ ಐಎಎಸ್ ಅಧಿಕಾರಿ ಎಸ್.ಟಿ.ಅಂಜನ್‌ಕುಮಾರ್ ಸೇರಿ ಲಿಂಗಾಯತ ರೆಡ್ಡಿ ಸಮುದಾಯ ಮತ್ತು ಕೊರಚ-ಕೊರಮ ಸಮುದಾಯದ 200ಕ್ಕೂ ಹೆಚ್ಚು ಮಂದಿಯನ್ನು ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಪಕ್ಷಕ್ಕೆ ಬರಮಾಡಿಕೊಂಡು ಅವರು ಮಾತನಾಡಿದರು. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ರತಿಪಕ್ಷದವರ ವಿರುದ್ಧ ಸೇಡಿನ ರಾಜಕಾರಣ ಮಾಡುತ್ತಿದೆ. ಆದರೆ, ಮುಖ್ಯಮಂತ್ರಿ ಸೇರಿ ಅವರ ಸಂಪುಟ ಸದಸ್ಯರ
ವಿರುದ್ಧ ಎಸಿಬಿಯಲ್ಲಿ 36 ದೂರು ದಾಖಲಾಗಿದ್ದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ದೂರಿದರು. ಇದೀಗ ಮೈಸೂರಿನಲ್ಲಿ ಮಹಾರಾಜರಿಗೆ ಸೇರಿದ ಭೂಮಿಯನ್ನು ಈ ಸರ್ಕಾರ ಅಕ್ರಮವಾಗಿ ಗಣಿಗಾರಿಕೆಗೆ ಕೊಟ್ಟಿರುವ ಹಗರಣ ಬಯಲಾಗಿದೆ. ಈ ರೀತಿ ಪ್ರತಿನಿತ್ಯ ಒಂದಲ್ಲ ಒಂದು ಹಗರಣಗಳು ನಡೆಯುತ್ತಿದ್ದು, ಅಭಿವೃದ್ಧಿಗೆ ಬೆಲೆಯೇ ಇಲ್ಲದಂತಾಗಿದೆ ಎಂದು ಹೇಳಿದರು.
ಇದೇ ವೇಳೆ, ನಿವೃತ್ತ ಪೊಲೀಸ್ ಅಧಿಕಾರಿ ಪಾಪಯ್ಯ, ಲಿಂಗಾಯತ ರೆಡ್ಡಿ ಸಮುದಾಯದ ಮುಖಂಡ ಮೋಹನ್ ಕೆ.ಹಿರೇಗೌಡರ್, ಕೊರಮ-ಕೊರಚ ಸಮುದಾಯದ ನೂರಾರು ಮಂದಿ ಬಿಜೆಪಿಗೆ ಸೇರ್ಪಡೆಯಾದರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ಹಾಜರಿದ್ದರು.
ಬಿಜೆಪಿ ಆರೋಪಪಟ್ಟಿಗೆ ಹೆದರಿ ಗೌಪ್ಯ ಸ್ಥಳಕ್ಕೆ ಕಡತಗಳ ರವಾನೆ ಬೆಂಗಳೂರು: ಕಾಂಗ್ರೆಸ್ ಶಾಸಕರು ನಡೆಸಿರುವ ಭ್ರಷ್ಟಾಚಾರ, ಹಗರಣಗಳ ಕುರಿತ ಆರೋಪಪಟ್ಟಿ ಬಿಡುಗಡೆ ಮಾಡುವುದಾಗಿ ಬಿಜೆಪಿ ಘೋಷಿಸಿದ ಬಳಿಕ ಅವುಗಳಿಗೆ ಸಂಬಂಧಿಸಿದ ಮಾಹಿತಿ ನೀಡದಂತೆ ಅಧಿಕಾರಿಗಳಿಗೆ ಸರ್ಕಾರ ಒತ್ತಡ ಹಾಕುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಂಪುಟದ ಸಹೋದ್ಯೋಗಿಗಳು ಸಾಕಷ್ಟು ಕಡತಗಳನ್ನು ರಾತ್ರೋರಾತ್ರಿ ಗೌಪ್ಯ ಸ್ಥಳಕ್ಕೆ ರವಾನೆ ಮಾಡಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಮಗ್ರ ದಾಖಲೆಗಳೊಂದಿಗೆ ಆರೋಪಪಟ್ಟಿ ಬಿಡುಗಡೆ ಮಾಡಲು ಬಿಜೆಪಿ ನಿರ್ಧರಿಸಿತ್ತು. ಆದರೆ, ಭ್ರಷ್ಟಾಚಾರ, ಹಗರಣಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಕೊಡದಂತೆ ಮತ್ತು ಯಾವುದೇ ರೀತಿಯ ಮಾಹಿತಿ ನೀಡದಂತೆ ಮುಖ್ಯಮಂತ್ರಿ ಕಚೇರಿಯಿಂದ ಅಧಿಕಾರಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ. ಆದರೂ, ಸಾಕಷ್ಟು ಮಾಹಿತಿ ಕಲೆ ಹಾಕಿದ್ದು, ಸೆ.24ರ ಬಳಿಕ ಆರೋಪ ಪಟ್ಟಿ ಬಿಡುಗಡೆ ಮಾಡಲಾಗುವುದು. ಒಂದೆಡೆ ಬಿಜೆಪಿಯವರಿಗೆ ಮಾಹಿತಿ ಒದಗಿಸದಂತೆ ಮುಖ್ಯಮಂತ್ರಿಯವರ ಕಚೇರಿಯಿಂದ ಅಧಿಕಾರಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ. ಜೊತೆಗೆ, ಭ್ರಷ್ಟಾಚಾರ, ಹಗರಣಗಳಿಗೆ ಸಂಬಂಧಿಸಿದ ಕಡತಗಳನ್ನು ರಾತ್ರೋ ರಾತ್ರಿ ಗೌಪ್ಯ ಸ್ಥಳಕ್ಕೆ ರವಾನೆ ಮಾಡಲಾಗಿದೆ ಎಂದು ದೂರಿದರು.
ಲೋಕಸಭೆಯಲ್ಲಿ 400 ಸೀಟುಗಳನ್ನು ಹೊಂದಿದ್ದ ಕಾಂಗ್ರೆಸ್, ತಾನು ಮಾಡಿದ ತಪ್ಪುಗಳಿಂದ 45 ಸೀಟುಗಳನ್ನೂ ಗೆಲ್ಲಲಾಗದೆ ದಯನೀಯ ಸೋಲು ಅನುಭವಿಸಿದೆ. ಅಂತಹ ಪಕ್ಷದ ಉಪಾಧ್ಯಕ್ಷ ರಾಹುಲ್‌ಗಾಂಧಿ ಅವರು ಅಮೆರಿಕದಲ್ಲಿ ಮಾತನಾಡಿ, “ಮುಂದಿನ ಪ್ರಧಾನಿ ನಾನೇ’ ಎಂದು ಹೇಳಿರುವುದು ನಗೆಪಾಟಲಿನ ವಿಷಯ.
ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ