ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆ ನಂತರ ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದೇ ಬರಲಿದೆ. ಕಳೆದ ಐದು ವರ್ಷಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕೈಗೊಂಡ ಯೋಜನೆಗಳು, ಮೋದಿ ಅವರು ತೆಗೆದುಕೊಂಡ ನಿರ್ಧಾರಗಳು ದೇಶದ ಚಿತ್ರಣವನ್ನೇ ಬದಲಿಸಿವೆ. ಕೇಂದ್ರ ಸರಕಾರ ಸೈನಿಕರಿಗೆ ಹೆಚ್ಚಿನ ಸ್ವಾತಂತ್ರ್ಯ ಕೊಡುವ ಮೂಲಕ ಭಯೋತ್ಪಾದಕರನ್ನು ಹತ್ತಿಕ್ಕುವಲ್ಲಿ ಯಶಸ್ವಿಯಾಗಿದೆ.
Advertisement
ಮೋದಿಯವರನ್ನು ಯುವಕರು ಸಿಂಹದಂತೆ ಭಾವಿಸಿದ್ದಾರೆ. ಹೀಗಾಗಿ, ಮತ್ತೂಮ್ಮೆ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡಲು ಜನರು ಉತ್ಸುಕರಾಗಿದ್ದಾರೆ ಎಂದರು.ರಾಜ್ಯ ಸರಕಾರದಿಂದ ಯಾವುದೇ ಕೆಲಸ ಆಗುತ್ತಿಲ್ಲ. ಸರ್ಕಾರ ಹಾಸನ, ಮಂಡ್ಯ, ರಾಮನಗರ ಈ ಮೂರು ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದೆ. ಈ ಜಿಲ್ಲೆಗಳಿಗೆ 12 ಸಾವಿರ ಕೋಟಿ ರೂ.ಅನುದಾನ ನೀಡಿ, ಇತರ ಜಿಲ್ಲೆಗಳಿಗೆ ತಾರತಮ್ಯ ಎಸಗಿದೆ. ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ರಚನೆಗೊಂಡ ನಂಜುಂಡಸ್ವಾಮಿ
ವರದಿ ಜಾರಿಗೆ ತರುವ ಪ್ರಯತ್ನ ಮಾಡಿಲ್ಲ ಎಂದು ಟೀಕಿಸಿದರು.