Advertisement

ಸಮ್ಮಿಶ್ರ ಸರ್ಕಾರ ಶೀಘ್ರ ಪತನ: ಕೆ.ಎಸ್‌.ಈಶ್ವರಪ್ಪ

06:00 AM Oct 08, 2018 | Team Udayavani |

ಶಿವಮೊಗ್ಗ: ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಬಹಳ ದಿನ ಉಳಿಯುವುದಿಲ್ಲ. ಪರಮೇಶ್ವರ್‌ ಮತ್ತು ಸಿದ್ದರಾಮಯ್ಯ ನಡುವೆ ಹೊಂದಾಣಿಕೆ ಇಲ್ಲ. ಶೀಘ್ರದಲ್ಲೇ ಸಮ್ಮಿಶ್ರ ಸರಕಾರ ಪತನವಾಗಲಿದೆ. ಮತ್ತೆ ವಿಧಾನಸಭೆ ಚುನಾವಣೆ ನಡೆಯುವುದು ಗ್ಯಾರಂಟಿ ಎಂದು ಶಾಸಕ ಕೆ.ಎಸ್‌.ಈಶ್ವರಪ್ಪ ಭವಿಷ್ಯ ನುಡಿದರು.

Advertisement

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪರ ಅಲೆಯಿದೆ. ಬಿಜೆಪಿಯ ಎಲ್ಲ ನಾಯಕರು ಒಗ್ಗಟ್ಟಾಗಿದ್ದೇವೆ ಎಂದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ವರುಣ ಕ್ಷೇತ್ರದಿಂದ ಸೋತಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅತ್ತಿದ್ದಾರೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌ ಸೋತಿತ್ತು. ಸೋತರೂ ಮತ್ತೆ ಸಿಎಂ ಆಗುತ್ತೇನೆಂದು ಹೇಳಿಕೆ ನೀಡಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಸಿದ್ದರಾಮಯ್ಯ ಮಾಡಿರುವ ದ್ರೋಹ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next