Advertisement

ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರ್ಣಗೊಳಿಸುತ್ತೆ: ದೇಶಪಾಂಡೆ

06:25 AM Jun 28, 2018 | Team Udayavani |

ಚಿಕ್ಕಮಗಳೂರು: ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ 5 ವರ್ಷಗಳ ಅವಧಿ ಪೂರ್ಣಗೊಳಿಸಲಿದೆ ಎಂದು ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಹೇಳಿದರು.

Advertisement

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌-ಜೆಡಿಎಸ್‌ ದೋಸ್ತಿ ಸರ್ಕಾರ ಸ್ಥಿರ ಹಾಗೂ
ಪ್ರಬಲವಾಗಿದ್ದು, ಐದು ವರ್ಷ ಉಳಿಯುತ್ತದೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಬಾರಿಯ ಬಜೆಟ್‌ನಲ್ಲಿ ಹೊಸ ವಿಚಾರಗಳನ್ನು ಪ್ರಸ್ತಾಪಿಸಲು ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರೂಪಿಸುವುದಕ್ಕಾಗಿ ಐವರ ಸಮಿತಿ ರಚಿಸಲಾಗಿದೆ. ಈಗಾಗಲೇ ಈ ಸಮಿತಿ ಎರಡು ಸಭೆಗಳನ್ನು ನಡೆಸಿದ್ದು, ಇನ್ನೊಂದು ಸಭೆ ಜೂ.29 ರಂದು ನಡೆಯಲಿದೆ.

ಸಮನ್ವಯ ಸಮಿತಿಯಲ್ಲಿ ಚರ್ಚಿಸಿ ವರದಿಯನ್ನು ಸರ್ಕಾರದ ಮುಂದಿಡಲಾಗುವುದು. ಸಮ್ಮಿಶ್ರ ಸರ್ಕಾರಕ್ಕೆ ಅದೇ ಭಗವದ್ಗೀತೆ, ಬೈಬಲ್‌ ಮಾರ್ಗದರ್ಶಿ ಎಂದು ಹೇಳಿದರು. ಬಜೆಟ್‌ ರೂಪಿಸುವ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ 
ನೀಡಿರುವ ಸಲಹೆಗಳನ್ನು ಗಮನದಲ್ಲಿಟ್ಟುಕೊಂಡಿದ್ದೇನೆ ಎಂದು ಸಿಎಂ ಕುಮಾರಸ್ವಾಮಿ ಈಗಾಗಲೇ ಹೇಳಿದ್ದಾರೆ. ಹೊಸದಾಗಿ ಬಜೆಟ್‌ ಮಂಡಿಸುವ ಬಗ್ಗೆ ಮುಖ್ಯಮಂತ್ರಿಗಳು ಈಗಾಗಲೇ ದಿನಾಂಕ ತಿಳಿಸಿದ್ದಾರೆ. ಸಿದ್ದರಾಮಯ್ಯ ಅವರು ಹಿಂದೆ ಮಂಡಿಸಿರುವ ಬಜೆಟ್‌ನಲ್ಲಿನ ಕಾರ್ಯಕ್ರಮಗಳಲ್ಲಿ ಯಾವ ಬದಲಾವಣೆಯೂ ಇರುವುದಿಲ್ಲ ಎಂದು ಮುಖ್ಯಮಂತ್ರಿಗಳೇ ತಿಳಿಸಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next