Advertisement

ಸಮ್ಮಿಶ್ರ ಸರ್ಕಾರದ ಆಯಸ್ಸು ಕೆಲವೇ ದಿನ: ಶ್ರೀರಾಮುಲು

06:35 AM Jun 08, 2018 | Team Udayavani |

ಚಿತ್ರದುರ್ಗ: ಸಚಿವ ಸಂಪುಟ ವಿಸ್ತರಣೆ ನಂತರ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮಧ್ಯೆ ಕಚ್ಚಾಟ ಮಿತಿ ಮೀರಿದೆ. ಹಾಗಾಗಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸಮ್ಮಿಶ್ರ ಸರ್ಕಾರಕ್ಕೆ ಹೆಚ್ಚು ಆಯಸ್ಸು ಇಲ್ಲ. ರಾಜ್ಯದಲ್ಲಿ ಈಗಲೇ ಚುನಾವಣೆ ನಡೆದರೂ ಬಿಜೆಪಿ 150 ಸ್ಥಾನ ಗೆದ್ದು ಅಧಿ ಕಾರಕ್ಕೆ ಬರುವುದು ನಿಶ್ಚಿತ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮೊಳಕಾಲ್ಮೂರು ಶಾಸಕ ಬಿ. ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ರಚನೆ ಬಳಿಕ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಬೇಸರಗೊಂಡಿರುವ ಕಾಂಗ್ರೆಸ್ಸಿನ ಹಿರಿಯ ನಾಯಕರು ಯಡಿಯೂರಪ್ಪ ಹಾಗೂ ಅಮಿತ್‌ ಶಾ ಜತೆ ಚರ್ಚಿಸಿದರೂ ಅಚ್ಚರಿ ಇಲ್ಲ. ಇದುವರೆಗೆ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಎಂದರು.

ಜೆಡಿಎಸ್‌-ಕಾಂಗ್ರೆಸ್‌ ಪಕ್ಷದಲ್ಲಿ ನಡೆಯುತ್ತಿರುವ ವಿದ್ಯಮಾನ ಮತ್ತು ಸಚಿವ ಸಂಪುಟದಲ್ಲಿ ಅವಕಾಶ ಸಿಗಲಿಲ್ಲ ಎನ್ನುವ ಶಾಸಕರ ಗಲಾಟೆ, ಗೊಂದಲವನ್ನು ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದರು. ರಾಜ್ಯದ ರೈತರ ಎಲ್ಲಾ ಸಾಲಮನ್ನಾ ಮಾಡುವಂತೆ ಹೋರಾಟ ಮುಂದುವರೆಸುತ್ತೇವೆ. 

ಏಕೆಂದರೆ, ರೈತರ ಸಾಲಮನ್ನಾ ವಿಚಾರದಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಜನರ ಕಿವಿಗೆ ಹೂವು ಇಡುತ್ತಿದ್ದಾರೆ ಎಂದು ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next