Advertisement

2018ರ ಚುನಾವಣೆಗೆ ಸಾಮೂಹಿಕ ನಾಯಕತ್ವ

03:45 AM Feb 17, 2017 | Team Udayavani |

ಕಲಬುರಗಿ: 2018ರ ಚುನಾವಣೆ ಯಾರದೇ ನೇತೃತ್ವದಲ್ಲಿ ನಡೆಯೋದಿಲ್ಲ. ಸಾಮೂಹಿಕ ನಾಯಕತ್ವದಲ್ಲಿ ಕಾಂಗ್ರೆಸ್‌ ಚುನಾವಣೆ ಎದುರಿಸಲಿದೆಯೆಂದು ಕೆಪಿಸಿಸಿ ಅಧ್ಯಕ್ಷ ಮತ್ತು ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ತಿಳಿಸಿದರು.

Advertisement

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ಗೆ ಸಾಮೂಹಿಕ ನಾಯಕತ್ವದಲ್ಲಿ ನಂಬಿಕೆಯಿದೆ. 2018ರ ಚುನಾವಣೆಯಲ್ಲಿ ಪಕ್ಷ ಪುನಃ ಅಧಿಕಾರಕ್ಕೆ ಬಂದ ನಂತರ ಸಿಎಂ ಅಭ್ಯರ್ಥಿಯನ್ನು ಹೈಕಮಾಂಡ್‌ ಆಯ್ಕೆ ಮಾಡುತ್ತದೆ. 2013ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಸಿಎಂ ಅಭ್ಯರ್ಥಿ ಎಂದು ಹೇಳಿದ ನಂತರ ಯಾರೊಬ್ಬರೂ ಸೊಲ್ಲೆತ್ತದೆ ಒಪ್ಪಿಕೊಂಡಿದ್ದೇವೆ. ಕಾಂಗ್ರೆಸ್‌ನಲ್ಲಿ ಹೈಕಮಾಂಡ್‌ ನಿರ್ಧಾರವೇ ಅಂತಿಮ ಎಂದು ಪುನರುಚ್ಚರಿಸಿದರು.

ಬಿ.ಎಸ್‌.ಯಡಿಯೂರಪ್ಪ ಹಾಗೂ ಇತರರು ಕಾಂಗ್ರೆಸ್‌ನಿಂದ ಅನೇಕರು ಬಿಜೆಪಿಗೆ ಬರಲಿದ್ದಾರೆ ಎನ್ನುತ್ತಿದ್ದಾರೆ. ಬಿಜೆಪಿ ಮಿಷನ್‌ -150 ಶಕ್ತವಾಗಿದ್ದರೆ ಕಾಂಗ್ರೆಸ್‌ನವರನ್ನು ಯಾಕೆ ಪಕ್ಷಕ್ಕೆ ಕರೆದುಕೊಳ್ಳುತ್ತಾರೆ? ಬಿಜೆಪಿಯ ವಿ. ಸೋಮಣ್ಣ ಕಾಂಗ್ರೆಸ್‌ಗೆ ಬರುವ ಕುರಿತು ತಾವೂ ಸೇರಿ ಯಾರೊಂದಿಗೂ ಚರ್ಚಿಸಿಲ್ಲ ಎಂದು ತಿಳಿಸಿದರು.

ಕುಮಾರ್‌ ಬಂಗಾರಪ್ಪ ಜತೆ ಮಾತುಕತೆ
ಮಾಜಿ ಸಚಿವ ಕುಮಾರ್‌ ಬಂಗಾರಪ್ಪ ಕಾಂಗ್ರೆಸ್‌ ಬಗ್ಗೆ ಅಸಮಾಧಾನ ಹೊಂದಿರುವುದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಕುಮಾರ್‌ ಬಂಗಾರಪ್ಪ ಅವರ ತಂದೆಯವರ ಸ್ಥಾನ ತುಂಬುತ್ತಾರೆಂಬ ನಿರೀಕ್ಷೆಯಿತ್ತು. ಇದೇ ಕಾರಣಕ್ಕೆ ಮಂತ್ರಿ ಸ್ಥಾನವನ್ನೂ ನೀಡಲಾಗಿತ್ತು. ಅವರ ತಂದೆ ಹಾದಿ ತುಳಿದರೆ ಏನು ಮಾಡಬೇಕು? ಆದರೂ ಅವರೊಂದಿಗೆ ಮಾತುಕತೆ ನಡೆಸಲಾಗುವುದೆಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next