Advertisement

ಬಜೆಟ್ ಘೋಷಣೆಗಳ ಶೀಘ್ರ ಅನುಷ್ಠಾನಕ್ಕೆ ಸಮಿತಿ ರಚಿಸಲಾಗಿದೆ : ಸಿಎಂ

07:00 PM Mar 26, 2022 | Team Udayavani |

ಹುಬ್ಬಳ್ಳಿ: ಬಜೆಟ್ ನಲ್ಲಿ ಘೋಷಣೆ ಯಾದ ಪ್ರಮುಖ ಯೋಜನೆಗಳ ಶೀಘ್ರ ಅನುಷ್ಠಾನಕ್ಕಾಗಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ ನಲ್ಲಿ‌ ಕೈಗಾರಿಕಾ ಸಚಿವರ ನೇತೃತ್ವದಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಆ ಹಿನ್ನೆಲೆಯಲ್ಲಿ ಭರದ ಸಿದ್ಧತೆ ನಡೆದಿದೆ. ವಿದೇಶಿ ಬಂಡವಾಳ ಆಕರ್ಷಣೆಯಲ್ಲಿ ರಾಜ್ಯ ಕಳೆದ ಮೂರು ತ್ರೈಮಾಸಿಕ ಅವಧಿಯಲ್ಲಿ ನಂಬರ್ ಒನ್ ಇದೆ ಎಂದರು.

ಏಪ್ರಿಲ್ 1ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ವೇಳೆ ಕ್ಷೀರ ಬ್ಯಾಂಕ್, ಯಶಸ್ವಿನಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ಏಪ್ರಿಲ್ 5ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ‌ ಬರುವ ನಿರೀಕ್ಷೆ ಇದೆ. ಅದು ಅಧಿಕೃತ ಗೊಳ್ಳಬೇಕಿದೆ ಎಂದರು.

Koo App

ಹಾಲು ಉತ್ಪಾದಕರಿಗೆಂದೇ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆ ಮಾಡಲಾಗಿದೆ. ಸರ್ಕಾರ ಈ ಬ್ಯಾಂಕ್ ಗೆಂದು 100 ಕೋಟಿ ರೂ ನೀಡಲಿದೆ. ಏಪ್ರಿಲ್ 1 ರಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ರವರು ಉದ್ಘಾಟಿಸಲಿದ್ದಾರೆ.

Advertisement

Basavaraj Bommai (@bsbommai) 26 Mar 2022

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next