ಜಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಜನಸಾಮಾನ್ಯರ ಪರವಾಗಿದೆ. ಇದೊಂದು ಉತ್ತಮ ಬಜೆಟ್ ಎಂದು ಶಾಸಕ ಎಚ್.ಪಿ.ರಾಜೇಶ್ ಬಣ್ಣಿಸಿದ್ದಾರೆ. ಶನಿವಾರ ಸುದ್ದಿಗೋಷ್ಠಿಯಲ್ಲಿಮಾತನಾಡಿದ ಅವರು ತಾಂತ್ರಿಕ ಮತ್ತು ವೈದ್ಯಕೀಯ ಪಡೆಯುವ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಸೇರಿದಂತೆ ಇತರೇ ಜನಪರವಾದಂತಹ ಯೋಜನೆಗಳನ್ನು ಜಾರಿಗೊಳಿಸಿದ್ದಾರೆ.
ಜಗಳೂರು ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಅರಸಿಕೆರೆ ವ್ಯಾಪ್ತಿಯ ಹತ್ತು ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಪೂರಕ ಬಜೆಟ್‌ನಲ್ಲಿ ಪ್ರಸ್ತಾಪವಾಗಲಿದೆ. ತಾಲೂಕಿನ ಬಹು ಬೇಡಿಕೆಯಾದ 157 ಹಳ್ಳಿಗಳ ಕುಡಿಯುವ ನೀರಿನ ಯೋಜನೆ ಮಂಜೂರಾತಿ ಕಮಿಟಿಯ ಮುಂದಿದೆ. ಮುಂದಿನ ತಿಂಗಳ ಅನುಮೋದನೆ ಸಿಗಲಿದೆ. ನಂತರ ಸಚಿವ ಸಂಪುಟದಲ್ಲಿ ಅನಮೋದನೆ ತೆಗೆದುಕೊಳ್ಳಲಾಗುತ್ತದೆ ಎಂದರು.
ಮಾಜಿ ಶಾಸಕರಿಗೆ ಸವಾಲ್: ನನ್ನ ನಾಲ್ಕು ವರ್ಷದ ಅವಧಿಯಲ್ಲಿ ಜಗಳೂರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆದಿವೆ. ಒಟ್ಟು 12ಸಾವಿರ ಮನೆಗಳನ್ನು ನಿರ್ಮಿಸಲಾಗಿದೆ. ಸಣ್ಣ ನೀರಾವರಿ ಇಲಾಖೆಯಿಂದ ಮೂರು ಕೆರೆಗಳನ್ನು ನಿರ್ಮಿಸಲಾಗಿದೆ.
ಮಾಜಿ ಶಾಸಕ ಎಸ್.ವಿ.ರಾಮಚಂದ್ರ ಅವರ ಅವಧಿಧಿಯಲ್ಲಿ ಒಂದೇ ಒಂದು ಚೆಕ್ ಡ್ಯಾಂ ನಿರ್ಮಿಸಿದ್ದನ್ನು ತೋರಿಸಲಿ ಎಂದರು ಸವಾಲು ಹಾಕಿದರು. ಜನತೆ ನೀಡಿದ ನಿರ್ಣಯವನ್ನು ಧಿಕ್ಕರಿಸಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರಿದ ಮಾಜಿ ಶಾಸಕರಾದ ಎಸ್.ವಿ.ರಾಮಚಂದ್ರ, ಮನೆಗಳನ್ನು ನಿರ್ಮಿಸದೇ 14 ಸಾವಿರ ಮನೆಗಳನ್ನು ನಿರ್ಮಿಸಲಾಗಿದೆ ಎಂದು ಪ್ಲೇಕ್ಸ್ ಹಾಕಿ ಪುಕ್ಕಟೆ ಪ್ರಚಾರ ಪಡೆದುಕೊಂಡಿದ್ದರು.
ನನ್ನ ಅವಧಿಯಲ್ಲಿ ನಿರ್ಮಿಸಿದ ಮನೆಗಳನ್ನು ತೋರಿಸುತ್ತೇನೆ. ಅವರ ಕಾಲದಲ್ಲಿ ನಿರ್ಮಾಣವಾಗಿರುವ ಮನೆಗಳನ್ನು ತೋರಿಸಲಿ ಸಾಬೀತು ಪಡಿಸಲಿ ಎಂದರು. ಜಿಪಂ ಮಾಜಿ ಸದಸ್ಯ ಕೆ.ಪಿ.ಪಾಲಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಿಪ್ಪೇಸ್ವಾಮಿಗೌಡ, ಎಪಿಎಂಸಿ ಸದಸ್ಯ ರಾಮರೆಡ್ಡಿ,ಸೂರಲಿಂಗಪ್ಪ, ಶೇಖರಪ್ಪ ಸೇರಿದಂತೆ ಮತ್ತಿತರರಿದ್ದರು.