Advertisement
ಅವರು ಇತಿಹಾಸ, ಪುರಾಣ ಕಥೆಗಳನ್ನು ಆಧರಿಸಿ ಬರೆದ ನಾಟಕಗಳು ಇಂದಿನ ವಸ್ತುಸ್ಥತಿಯನ್ನು ವಿಶ್ಲೇಷಿಸುವ ರೀತಿ ಅಪೂರ್ವವಾದುದು. ಅವರ ನಾಟಕಗಳು ದೇಶ- ವಿದೇಶದ ಹಲವು ಭಾಷೆಗಳಿಗೆ ಅನುವಾದಗೊಂಡು ಪ್ರದರ್ಶನಗೊಂಡವು. ಆ ಮೂಲಕ ಕನ್ನಡ ಸಂಸ್ಕೃತಿಯ ಕಂಪನ್ನು ಜಗತ್ತಿನ ಉದ್ದಗಲಕ್ಕೂ ಪಸರಿಸಿದ ಕೀರ್ತಿ ಅವರದು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.
Related Articles
Advertisement
‘ಸಾಹಿತ್ಯ, ನಾಟಕ, ಚಲನಚಿತ್ರ ರಂಗದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಕಾರ್ನಾಡರು, ಈ ಮೂರು ರಂಗಗಳಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದರು. ಅವರು ಬರೆದ ಸಾಹಿತ್ಯಗಳು, ರಚಿಸಿದ ನಾಟಕಗಳು, ನಿರ್ದೇಶನ ಹಾಗೂ ನಟನೆಯ ಚಿತ್ರಗಳು ನಮ್ಮ ಸಮಾಜದಲ್ಲಿನ ಕೆಟ್ಟ, ಮೂಢ ಪದ್ಧತಿಗಳ ವಿರುದ್ಧದ ದನಿಯಾಗಿದ್ದವು. ಇತಿಹಾಸ ಹಾಗೂ ಕಲ್ಪನಿಕ ಕಥೆಗಳ ಜತೆಗೆ ಸಮಾಜದ ಪ್ರಸ್ತುತ ಪರಿಸ್ಥಿತಿಯನ್ನು ಆಧರಿಸಿ ಅವರು ಬರೆಯುತ್ತಿದ್ದ ನಾಟಕಗಳು ಹೆಚ್ಚು ಖ್ಯಾತಿ ಪಡೆದಿದ್ದವು. ಎಷ್ಟರಮಟ್ಟಿಗೆ ಎಂದರೆ ಇವರ ಅನೇಕ ನಾಟಕಗಳು ಬೇರೆ ಭಾಷೆಗಳಿಗೆ ಭಾಷಾಂತರವಾಗಿವೆ.’
‘ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆಯ ನೋವನ್ನು ಅಭಿಮಾನಿಗಳು, ಕುಟುಂಬ ಸದಸ್ಯರಿಗೆ ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಸಚಿವ ಡಿಕೆ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.