ಸೊರಬ: ಮಾಜಿ ಮುಖ್ಯಮಂತ್ರಿ ದಿ| ಎಸ್. ಬಂಗಾರಪ್ಪನವರ ರಾಜ್ಯದ ಮೊಟ್ಟ ಮೊದಲ ಪುತ್ಥಳಿ ಅವರ ತವರು ಸೊರಬದಲ್ಲಿ ನಿರ್ಮಾಣಗೊಳ್ಳಲಿದೆ.
ಸೊರಬ ಪಟ್ಟಣ ಪಂಚಾಯತ್ ಮುಂಭಾಗದಲ್ಲಿರುವ ವೃತ್ತದಲ್ಲಿ ಪುತ್ಥಳಿ ಸ್ಥಾಪನೆಗೆ ನಿರ್ಧರಿಸಲಾಗಿದ್ದು, ಸೋಮವಾರ ಈ
ಕಾಮಗಾರಿಯ ಗುದ್ದಲಿ ಪೂಜೆ ನಡೆಯಿತು.
ಸುಮಾರು 9 ಅಡಿ ಎತ್ತರದ ಪುತ್ಥಳಿ ಸ್ಥಾಪನೆಯಾಗಲಿದೆಯಲ್ಲದೆ ಇದೇ ಸ್ಥಳದಲ್ಲಿ ಸುಂದರ ಉದ್ಯಾನವನ ನಿರ್ಮಾಣಕ್ಕೂ ನಿರ್ಣಯಿಸಲಾ ಗಿದೆ.
1 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿ ನಡೆಯಲಿದೆ. ಬಂಗಾರಪ್ಪನವರ ಪುತ್ರ, ಸೊರಬ ಕ್ಷೇತ್ರದ ಶಾಸಕ ಕುಮಾರ ಬಂಗಾರಪ್ಪ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿದರು. ಜನರ ಬಹುದಿನಗಳ ಅಪೇಕ್ಷೆಯಂತೆ ರಾಜ್ಯದಲ್ಲಿಯೇ ಪ್ರಥಮವಾಗಿ ಬಂಗಾರಪ್ಪನವರ ಪುತ್ಥಳಿ ನಿರ್ಮಾಣ ಮಾಡಲಾಗುತ್ತಿದೆ.
ಸಾಮಾನ್ಯ ಕುಟುಂಬದಲ್ಲಿ ಜನಿಸಿ ಈ ನಾಡಿನ ಬಡವರ, ಶೋಷಿತರ ಧ್ವನಿಯಾಗಿ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದ ಅವರ ಪುತ್ಥಳಿ ಆಗುತ್ತಿರುವುದು ಸಂತಸದ ವಿಷಯ ಎಂದರು. ಸಂಸದ ಬಿ.ವೈ. ರಾಘವೇಂದ್ರ, ವಿ.ಪ. ಸದಸ್ಯ ರುದ್ರೇಗೌಡ, ಕುಮಾರ್ ಬಂಗಾರಪ್ಪ ಪತ್ನಿ ಹಾಗೂ ಇತರರಿದ್ದರು.