ಮಸ್ಕಿ : ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಪ್ರತಾಪ್ ಗೌಡ ಪಾಟೀಲ್ ಅವರು, ಬಸನಗೌಡ ತುರುವಿನಹಾಳ ವಿರುದ್ಧ ಮಸ್ಕಿ ಉಪ ಚುನವಣೆಯಲ್ಲಿ ಸೋತು ಮುಖಭಂಗ ಅನುಭವಿಸಿದ್ದಾರೆ. ಈ ಮೂಲಕ ಬಸನಗೌಡ ತುರುವಿನಹಾಳ ಗೆಲುವು ಸಾಧಿಸಿದ್ದಾರೆ.
ಈ ಹಿಂದೆ ಪ್ರತಾಪ್ ಗೌಡ ‘ದೋಸ್ತಿ ಕೂಟ’ ದೊಂದಿಗೆ ಸೇರಿ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈಗ ನಡೆದ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಗೆದ್ದು ಗದ್ದುಗೆ ಏರಬೇಕು ಎಂದುಕೊಂಡಿದ್ದ ಅವರು ಸೋಲಿನತ್ತ ಮುಖ ಮಾಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಆರ್.ಬಸನಗೌಡ ತುರುವಿನಹಾಳ 30,641 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ತುರುವಿನಹಾಳ ಒಟ್ಟು 86,222 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಪಡೆದ ಮತಗಳು 55,581 ಮತಗಳನ್ನು ಪಡೆದು ಸೋಲುನ್ನು ಅನುಭವಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಪಡೆದ ಮತಗಳು 55,581ಕಳೆದ ಬಾರಿಯ ಚುನಾವಣೆಯಲ್ಲಿ ಸುಮಾರು 213 ಮತಗಳ ಅಂತರದಲ್ಲಿ ಪ್ರತಾಪಗೌಡ ಪಾಟೀಲ್ ಗೆಲವು ಸಾಧಿಸಿದ್ದರು. ಆದರೆ ಈ ಬಾರಿ ಭಾರೀ ಅಂತರದಲ್ಲಿ ಸೋಲನ್ನು ಅನುಭವಿಸುವುದು ಖಚಿತವಾಗಿದೆ.
ಇನ್ನು ಮಸ್ಕಿ ಕ್ಷೇತ್ರದಲ್ಲಿ ಪ್ರತಾಪ್ ಗೌಡರ ವಿರುದ್ಧ ಜನಾಕ್ರೋಶವಿತ್ತು ಎನ್ನಲಾಗಿದೆ. ಕಾಂಗ್ರೆಸ್ ನಿಂದ ಗೆದ್ದು ಬಿಜೆಪಿಯ ಕೈ ಹಿಡಿದಿದ್ದು ಕ್ಷೇತ್ರದ ಜನರಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು ಎಂದು ಹೇಳಲಾಗಿತ್ತಿದೆ. ಈ ಕಾರಣದಿಂದಲೇ ಸೋಲನ್ನು ಅನುಭವಿಸಿದ್ದಾರೆ ಎಂದು ಹೇಳಲಾಗುತ್ತಿದೆ.