Advertisement
ಬೆಂಗಳೂರು ಪ್ರಸ್‌ಕ್ಲಬ್ ಹಾಗೂ ವರದಿಗಾರರ ಕೂಟ ಜಂಟಿಯಾಗಿ ಆಯೋಜಿಸಿದ್ದ ಪತ್ರಿಕಾ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾಂಗ್ರೆಸ್‌ನ ಯಾವೊಬ್ಬ ನಾಯಕರಿಗೂ ಸಾಧನೆ ಹೇಳಿಕೊಳ್ಳುವ ವಿಶ್ವಾಸವೇ ಇಲ್ಲ. ಯಾಕೆಂದರೆ ಅವರು ಏನೂ ಮಾಡಿಲ್ಲ ಎಂದು ತಿಳಿಸಿದರು.
Related Articles
Advertisement
ಕಳೆದ ಚುನಾವಣೆಗಳಿಗೆ ಹೋಲಿಸಿದರೆ ಹತ್ತು ಪಟ್ಟು ಹೆಚ್ಚು ಸಹಕಾರ ಕೇಂದ್ರ ನಾಯಕರಿಂದ ಸಿಗುತ್ತಿದೆ. ಜಿಲ್ಲಾ ಮಟ್ಟದಲ್ಲಿ ಆಗುತ್ತಿರುವ ಸಣ್ಣಪುಟ್ಟ ತಪ್ಪು ಪತ್ತೆ ಹಚ್ಚಿ ತಿದ್ದಿಕೊಳ್ಳಲು ಅವರೇ ಹೇಳುತ್ತಿದ್ದಾರೆ. ನಮ್ಮ ಸಲಹೆಗಳನ್ನೂ ಗಂಭೀರವಾಗಿ ಪರಿಗಣಿಸುತ್ತಿದ್ದಾರೆ,’ ಎಂದು ತಿಳಿಸಿದರು.
ಯಡಿಯೂರಪ್ಪಗೆ ಬೇಡಿಕೆ: ಬಿಜೆಪಿ ಕೇವಲ ನರೇಂದ್ರ ಮೋದಿ ಅಲೆ ಹಾಗೂ ಅಮಿತ್ ಶಾ ತಂತ್ರಗಾರಿಕೆ ನಂಬಿದೆ. ಅವರಿಬ್ಬರೇ ಹೆಚ್ಚು ಪ್ರಚಾರ ಮಾಡುತ್ತಿದ್ದಾರೆ ಯಾಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಶೋಭಾ, “ಯಡಿಯೂರಪ್ಪ ಅವರು ಪರಿವರ್ತನೆಯಾತ್ರೆ ಮೂಲಕ 224 ಕ್ಷೇತ್ರ ಸುತ್ತಾಡಿ ಇದೀಗ ಎರಡನೇ ಸುತ್ತಿನಲ್ಲಿ 125 ಕ್ಷೇತ್ರ ಪ್ರವಾಸ ಮಾಡಿದ್ದಾರೆ.
ಯಡಿಯೂರಪ್ಪ ಪ್ರಚಾರಕ್ಕೆ ಬರಬೇಕು ಎಂಬುದು ಎಲ್ಲ ಕ್ಷೇತ್ರಗಳ ಕಾರ್ಯಕರ್ತರ ಬೇಡಿಕೆಯಾಗಿದೆ. ಬಿಎಸ್‌ವೈ, ನರೇಂದ್ರಮೋದಿ, ಅಮಿತ್ ಶಾ ಸೇರಿ ರಾಜ್ಯ ಹಾಗೂ ಕೇಂದ್ರ ನಾಯಕರೆಲ್ಲರೂ ತಮ್ಮ ತಮ್ಮ ವ್ಯಾಪ್ತಿಯಲ್ಲಿ ಪಕ್ಷದ ಗೆಲುವಿಗೆ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ ಹೆಚ್ಚು ಸ್ಥಾನ ನೀಡದ ಬಗ್ಗೆ ಪ್ರತಿಕ್ರಿಯಿಸಿ, ಗೆಲ್ಲುವ ಮಾನದಂಡ ಹಾಗೂ ಅನಿವಾರ್ಯ ಕಾರಣಗಳಿಂದ ಕೊಟ್ಟಿಲ್ಲ. ಯಶವಂತಪುರ ಕ್ಷೇತ್ರದಲ್ಲಿ ನಿಲ್ಲುವಂತೆ ನನಗೆ ಒತ್ತಡ ಇತ್ತು. ಆದರೆ, ಪಕ್ಷದ ಚುನಾವಣೆ ನಿರ್ವಹಣೆ ಕೆಲಸದ ಹಿನ್ನೆಲೆಯಲ್ಲಿ ತ್ಯಾಗ ಮಾಡಬೇಕಾಯಿತು ಎಂದು ತಿಳಿಸಿದರು.
ನಾನು ಬಿಜೆಪಿ ಸರ್ಕಾರದಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ, ಇಂಧನ, ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್ ಖಾತೆ ನಿರ್ವಹಿಸಿ ಇಲಾಖೆಗೆ ಶಕ್ತಿ ತುಂಬುವ ಕೆಲಸ ಮಾಡಿದ್ದೇನೆ. ಆ ಸಂದರ್ಭದಲ್ಲಿ ಬೇರೆಯವರ ಖಾತೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದೆ ಎಂಬುದು ಕೇವಲ ಆರೋಪವೇ ಹೊರತು ನಿಜವಲ್ಲ. ಆರೋಪ ಮಾಡಿದವರು ಇದುವರೆಗೂ ಒಂದೇ ಒಂದು ಸಾಕ್ಷಿ ಕೊಟ್ಟಿಲ್ಲ.-ಶೋಭಾ ಕರಂದ್ಲಾಜೆ