Advertisement

Congress ಸರಕಾರ ವರ್ಚಸ್ಸು ಕಳೆದುಕೊಂದು ಆಪರೇಷನ್ ಗೆ ಮುಂದಾಗಿದೆ: ಬೊಮ್ಮಾಯಿ ಕಿಡಿ

05:30 PM Sep 28, 2023 | Team Udayavani |

ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ವರ್ಚಸ್ಸು ಕಳೆದುಕೊಂಡಿದೆ. ಹೀಗಾಗಿ ಮತ್ತೆ ಆಪರೇಷನ್ ಗೆ ಮುಂದಾಗಿದೆ. ಬಿಜೆಪಿಯ ಮಾಜಿ ಶಾಸಕರಿಗೆ ಅದು ಗಾಳ‌ ಹಾಕುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ‌ಬೊಮ್ಮಾಯಿ ಕುಟುಕಿದರು.

Advertisement

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಆಪರೇಶನ್ ಮಾಡುತ್ತಿರುವುದು ಕಾಂಗ್ರೆಸ್ ನ ದುರ್ಬಲತೆ. ಟಿಕೆಟ್ ಸಿಗದೇ ಇದ್ದ ಕೆಲವರು ಆ ಪಕ್ಷಕ್ಕೆ ಹೋಗುತ್ತಾರೆ. ಅದರಿಂದ ಕಾಂಗ್ರೆಸ್ ಗೆ ಯಾವುದೇ ಲಾಭವಿಲ್ಲ. ಟಿಕೆಟ್ ಸಿಗದಿದ್ದವರು ಹೋಗುವುದು ಸಹಜ. ಅದರ ಬಗ್ಗೆ ನಾವೇನು ಹೆಚ್ಚು ತಲೆಕೆಡಿಸಿಕೊಳ್ಳಲ್ಲ. ಕಾಂಗ್ರೆಸ್ ನ‌ ಈ‌ ಆಪರೇಷನ್ ನಿಂದ ರಾಜಕೀಯವಾಗಿ ಯಾವುದೇ ಲಾಭವಾಗುವುದಿಲ್ಲ ಎಂದರು.

ಕಾವೇರಿ ನೀರಿಗಾಗಿ ಮುಖ್ಯಮಂತ್ರಿಯವರು ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ಹೇಳಿದ್ದಾರೆ. ಈಗ 3ಸಾವಿರ ಕ್ಯೂಸೆಕ್ ನೀರು ಬಿಡಲು ಆದೇಶ ಬಂದಿದೆ. 10ಸಾವಿರ ಕ್ಯೂಸೆಕ್ ಆದೇಶ ಬಂದಾಗ ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡನೆ ಮಾಡಿದ್ದರೆ, ಅಷ್ಟು ದೊಡ್ಡ ಪ್ರಮಾಣದ ನೀರು ಬಿಡುವ ಪ್ರಮೇಯ ಬರುತ್ತಿರಲಿಲ್ಲ. ತಡವಾಗಿಯಾದರೂ ಸರ್ಕಾರಕ್ಕೆ ಬುದ್ಧಿ ಬಂದಿದೆ. ಜನ‌ ಬೀದಿಗಿಳಿದು ಹೋರಾಟ ಮಾಡುವ ಸಂದರ್ಭ ಬಂದಿದ್ದು, ಸರ್ಕಾರ ಈಗ ಎಚ್ಚೆತ್ತುಕೊಂಡಿದೆ ಎಂದರು.

ಈಗಾಗಲೇ ಸಾಕಷ್ಟು ನೀರು ಹರಿದು ಹೋಗಿದೆ. ತಮಿಳುನಾಡು‌ ಪ್ರಾಧಿಕಾರದ ಆದೇಶ ಉಲ್ಲಂಘನೆ ಮಾಡಿದೆ. ಕುಡಿಯುವ ನೀರಿಗೆ ಬಹುದೊಡ್ಡ ಹಾಹಾಕಾರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಸರ್ಕಾರ ಕಾಳಜಿ ವಹಿಸಬೇಕು. ಕಾವೇರಿ ಅಷ್ಟೇ ಅಲ್ಲ. ಕೃಷ್ಣೆಯ ಹಿತರಕ್ಷಣೆಗೂ ಸರ್ಕಾರ ಮುಂದಾಗಬೇಕು. ಈ‌ ವಿಚಾರದಲ್ಲಿ‌ ನಾವೆಲ್ಲ ಒಂದಾಗಿದ್ದೇವೆ. ಒಂದು ವೇಳೆ ಸರ್ಕಾರ ಎಡವಿದರೆ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದರು.

ಶುಕ್ರವಾರದ ರಾಜ್ಯ ಬಂದ್ ಗೆ ಸಂಘಟನೆಗಳ ಜೊತೆಗೆ ವಿಪಕ್ಷದ ಬೆಂಬಲವೂ ಇದೆ. ಕಾವೇರಿಗಾಗಿ ಎಲ್ಲಿಯವರೆಗೂ ಹೋರಾಟ ಇರುತ್ತದೋ ಅಲ್ಲಿಯವರೆಗೂ ನಮ್ಮ ಹೋರಾಟ ಇದ್ದೇ ಇರುತ್ತದೆ. ಉತ್ತರ ಕರ್ನಾಟಕ‌ ಭಾಗದಲ್ಲಿ ಸಾಕಷ್ಟು ಬರಗಾಲ‌ ಇದೆ. ಈಗಾಗಲೇ ಮುಂಗಾರು ಮುಗಿದಿದೆ. ಈ ವೇಳೆ ಬೆಳೆ ನಾಶವಾಗಿರುವ ರೈತರು ಕಂಗಾಲಾಗಿದ್ದಾರೆ. ಆದರೆ ಬೆಳೆ ಪರಿಹಾರಕ್ಕೆ ಸರ್ಕಾರ ಮುಂದಾಗಿಲ್ಲ. ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಈ ಹಿಂದೆ ಪ್ರವಾಹ ಬಂದಾಗ ರೈತರಿಗೆ ಎರಡು ಪಟ್ಟು ಪರಿಹಾರ ನೀಡಿದ್ದೇವೆ. ಬಹುತೇಕ‌ ಸಂದರ್ಭಗಳಲ್ಲಿ‌ ರಾಜ್ಯದ ರೈತರಿಗೆ ನಾವು ಪರಿಹಾರ ಒದಗಿಸಿದ್ದೇವೆ. ರಾಜ್ಯ ಸರ್ಕಾರ ಈ‌ ನಿಟ್ಟಿನಲ್ಲಿ‌ ಕೆಲಸ‌ ಮಾಡುತ್ತಿಲ್ಲ ಎಂದು ಕಿಡಿಕಾರಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next