Advertisement

ಕೈ ಕಟ್‌ ಬಾಯ್‌ ಮುಚ್ಚು : ನಿಗಮ ಮಂಡಳಿ ಆಯ್ಕೆ  ಸದ್ಯಕ್ಕಿಲ್ಲ

12:46 AM Nov 02, 2023 | Team Udayavani |

ಬೆಂಗಳೂರು: ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹುದ್ದೆಯೂ ಸೇರಿದಂತೆ ಅಧಿಕಾರ ಹಂಚಿಕೆ ಹಾಗೂ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಸಚಿವರು ಹಾಗೂ ಶಾಸಕರು ನೀಡುತ್ತಿರುವ ಬಹಿರಂಗ ಹೇಳಿಕೆಗಳಿಂದ ಸರಕಾರ ಹಾಗೂ ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಮಧ್ಯಪ್ರವೇಶಿಸಿದೆ. ಪಕ್ಷದ ನಿಯಮ ಉಲ್ಲಂ ಸಿ ಬಾಯಿ ಬಿಟ್ಟರೆ ಶಿಸ್ತುಕ್ರಮ ತೆಗೆದುಕೊಳ್ಳುವುದಾಗಿ ಕಠಿನ ಸಂದೇಶ ರವಾನಿಸಿದೆ.

Advertisement

ಅಧಿಕಾರ ಹಂಚಿಕೆ ವಿಷಯ ಮುಂದಿಟ್ಟುಕೊಂಡು ಬಹಿರಂಗ ಹೇಳಿಕೆ ನೀಡುತ್ತಿದ್ದರೂ ತಮ್ಮ ಆಪ್ತ ಸಚಿವರು ಹಾಗೂ ಶಾಸಕರ ಬಾಯಿ ಮುಚ್ಚಿಸುವಲ್ಲಿ ವಿಫ‌ಲರಾಗಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರನ್ನೂ ತರಾಟೆಗೆ ತೆಗೆದುಕೊಂಡಿರುವ ಹೈಕಮಾಂಡ್‌ ಈಗ ಸ್ವತಃ ಹಾನಿ ನಿಯಂತ್ರಣಕ್ಕೆ ಮುಂದಾಗಿದೆ.

ರಾಜ್ಯದ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಠಿನ ನಿರ್ಧಾರ ಕೈಗೊಂಡಿದ್ದಾರೆ.

ರಾಜ್ಯದಲ್ಲಿ ಉಸ್ತುವಾರಿ ನೋಡಿಕೊಳ್ಳುತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುಜೇìವಾಲ ಹಾಗೂ ಮತ್ತೂಬ್ಬ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರನ್ನು ರಾಜ್ಯಕ್ಕೆ ದಿಢೀರನೇ ಕಳುಹಿಸಿ ಸಿಎಂ-ಡಿಸಿಎಂ ನಡುವೆ ತೇಪೆ ಹಾಕುವ ಕೆಲಸ ನಡೆಸಿದೆ.

ಮಧ್ಯರಾತ್ರಿ ಬಂದಿಳಿದ ನಾಯಕರು

Advertisement

ಮಂಗಳವಾರ ಮಧ್ಯರಾತ್ರಿ ಬೆಂಗಳೂರಿಗೆ ಬಂದಿಳಿದ ಸುಜೇì ವಾಲ ಹಾಗೂ ವೇಣುಗೋಪಾಲ್‌ ಅವರೊಂದಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಖಾಸಗಿ ಹೊಟೇಲ್‌ ಒಂದರಲ್ಲಿ ಅರ್ಧ ತಾಸು ಚರ್ಚೆ ನಡೆಸಿದರು. ಅನಂತರ ಕೆಪಿಸಿಸಿ ಕಚೇರಿಗೆ ತೆರಳಿ ಎರಡೂವರೆ ತಾಸುಗಳಿಗೂ ಹೆಚ್ಚು ಕಾಲ ರಾಜಕೀಯ ಬೆಳವಣಿಗೆಗಳ ಕುರಿತು ಸಮಾಲೋಚಿಸಿದರು. ಈ ಚರ್ಚೆಯಲ್ಲಿ ಸರಕಾರದ ಕಾರ್ಯ ವೈಖರಿ, ಸಚಿವರು, ಶಾಸಕರು ನಡವಳಿಕೆಗಳು, ಲೋಕಸಭಾ ಚುನಾವಣೆ ತಯಾರಿ, ಗ್ಯಾರಂಟಿ ಯೋಜನೆಗಳು ಹಾಗೂ ಪಕ್ಷ ಸಂಘಟನೆ ಕುರಿತ ವಿಷಯಗಳಿದ್ದವು.

ಅನಂತರ ಪಕ್ಷದ ಕಚೇರಿಯಲ್ಲಿಯೇ ಸಿಎಂ-ಡಿಸಿಎಂ ಸಮ್ಮುಖದಲ್ಲಿ ರಣದೀಪ್‌ ಸಿಂಗ್‌ ಸುಜೇìವಾಲ ಹಾಗೂ ವೇಣುಗೋಪಾಲ್‌ ಅವರು ಪತ್ರಿಕಾಗೋಷ್ಠಿ ನಡೆಸಿ ಎಲ್ಲರಿಗೂ ಯಾವ ಸಂದೇಶ ರವಾನಿಸಬೇಕಾಗಿತ್ತೋ ಆ ಸಂದೇಶ ರವಾನಿಸುವಲ್ಲಿ ಯಶಸ್ವಿಯಾದರು.

ಚುನಾವಣೆ ತಯಾರಿ

ಮುಂಬರುವ ಲೋಕಸಭೆ ಚುನಾವಣೆ ತಯಾರಿ ಕುರಿತು ಕೂಡ ಚರ್ಚಿಸಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ತಂತ್ರಗಾರಿಕೆಯ ಕೇಂದ್ರ ಕರ್ನಾಟಕವೇ ಆಗಿದೆ. ಸಂಸತ್‌ ಚುನಾವಣೆಯಲ್ಲಿ ರಾಜ್ಯದ ಜನ 20ಕ್ಕೂ ಹೆಚ್ಚು ಸಂಸದರನ್ನು ಆಯ್ಕೆ ಮಾಡುವ ವಿಶ್ವಾಸವಿದೆ. ನಾವು 25ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಶ್ರಮಿಸುವುದಾಗಿ ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರು ನಮಗೆ ಭರವಸೆ ನೀಡಿ¨ªಾರೆ ಎಂದು ಸುಜೇìವಾಲ ಹೇಳಿದ್ದಾರೆ.

ಕಾಂಗ್ರೆಸ್‌ ಸರಕಾರ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಜನರು ಸಂತೋಷ ವಾಗಿ¨ªಾರೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ನಮಗೆ ಗೆಲವು ನಿಶ್ಚಿತವಾಗಿದೆ. ಇಂದು ಕರ್ನಾಟಕ ರಾಜ್ಯೋತ್ಸವ ದಿನವಾಗಿದ್ದು, ಈ ಪವಿತ್ರ ದಿನ ಎಲ್ಲ ಕನ್ನಡಿಗರಿಗೂ ಶುಭ ಕೋರುತ್ತೇನೆ. ಈ ರಾಜ್ಯವನ್ನು ನಾವೆಲ್ಲ ಒಟ್ಟಾಗಿ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯೋಣ ಎಂದು ಹೇಳಿದರು.

ನಿಗಮ ಮಂಡಳಿ ಆಯ್ಕೆ  ಸದ್ಯಕ್ಕಿಲ್ಲ

ದೀಪಾವಳಿ ಹಬ್ಬಕ್ಕೂ ಮುನ್ನ ಪಕ್ಷದ ಶಾಸಕರು, ಮೇಲ್ಮನೆ ಸದಸ್ಯರು, ಮುಖಂಡರು ಹಾಗೂ ಕಾರ್ಯಕರ್ತರಿಗೆ ನಿಗಮ, ಮಂಡಳಿಗಳ ಅಧ್ಯಕ್ಷ ಸ್ಥಾನ ಒಲಿಯಲಿದೆ ಎಂಬ ನಿರೀಕ್ಷೆ ಹುಸಿಯಾಗಿದೆ. ಬಹುತೇಕ ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬಳಿಕವೇ ಈ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆಗಳಿವೆ.

ಪಂಚರಾಜ್ಯಗಳ ಚುನಾವಣೆ ಜತೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವ ಕುಮಾರ್‌ ನಡುವೆ ಶಾಸಕರಿಗೆ ನಿಗಮ, ಮಂಡಳಿಗಳ ಅಧ್ಯಕ್ಷ ಸ್ಥಾನ ಕಲ್ಪಿಸುವ ಬಗ್ಗೆ ಉಂಟಾಗಿರುವ ಭಿನ್ನಾಭಿಪ್ರಾಯವೂ ವಿಳಂಬಕ್ಕೆ ಕಾರಣವಾಗಿದೆ. ಶಾಸಕರಿಗೆ ಹೆಚ್ಚಿನ ಸ್ಥಾನ ಕೊಡ ಬೇಕೆಂಬುದು ಸಿಎಂ ವಾದ.

ಟಿಕೆಟ್‌ ಸಿಗದೆ ಇದ್ದವರು, ಹಿರಿಯ ಕಾರ್ಯಕರ್ತರು, ಸೋತವರು ಹಾಗೂ ಪಕ್ಷದ ಕಾರ್ಯಕರ್ತರಿಗೆ ಆದ್ಯತೆ ಕೊಡಬೇಕೆಂಬುದು ಡಿಸಿಎಂ ಪ್ರತಿವಾದವಾಗಿದೆ. ಹೀಗಾಗಿ ಈ ವಿಷಯದಲ್ಲಿ ಕಗ್ಗಂಟು ಉಂಟಾಗಿದೆ.

ಕೆಪಿಸಿಸಿ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಶಿವಕುಮಾರ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್‌ ಸಿಂಗ್‌ ಸುಜೇìವಾಲ, ಕೆ.ಸಿ.ವೇಣುಗೋಪಾಲ್‌ ಅವರು ಬುಧವಾರ ನಡೆಸಿದ ಸುದೀರ್ಘ‌ ಸಭೆಯಲ್ಲಿ ನಿಗಮ, ಮಂಡಳಿಗಳ ನೇಮಕದ ವಿಚಾರವೂ ಚರ್ಚೆ ಬಂದರೂ ಈ ವಿಷಯದಲ್ಲಿ ಒಮ್ಮತ ಮೂಡದ ಕಾರಣ ಮುಂದಕ್ಕೆ ಹೋಗಿದೆ.

ಈ ವಿಚಾರವಾಗಿ ಇನ್ನು ನಾಲ್ಕೈದು ಸುತ್ತಿನ ಚರ್ಚೆ ನಡೆಯಬೇಕಿದೆ. ಸದ್ಯ ತಮಗೆ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯ ಜವಾಬ್ದಾರಿ ಇದೆ. ಇದೇ ತಿಂಗಳು 17ರಂದು ಚುನಾವಣೆ ಪೂರ್ಣಗೊಂಡ ತತ್‌ಕ್ಷಣವೇ ಕರ್ನಾಟಕಕ್ಕೆ ಆಗಮಿಸಿ ನಿಗಮ ಮಂಡಳಿಗಳ ನೇಮಕ ಪ್ರಕ್ರಿಯೆ ಪೂರ್ಣಗೊಳಿಸುತ್ತೇವೆ ಎಂದು ಸುಜೇìವಾಲ ಭರವಸೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next