Advertisement
ನಗರದಲ್ಲಿ ಶನಿವಾರ ನಡೆದ ಪಕ್ಷದ “ಜನಾಶೀರ್ವಾದ ಯಾತ್ರೆ’ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ|ಜಿ. ಪರಮೇಶ್ವರ್ ಸೇರಿ ಹಲವು ಮುಖಂಡರು, ಬಿಜೆಪಿ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ ರಲ್ಲದೆ, ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿದರು.
Related Articles
Advertisement
ಕೆಪಿಸಿಸಿ ಕಾರ್ಯಾಧ್ಯಕ್ಷರಾದ ದಿನೇಶ್ ಗುಂಡೂ ರಾವ್, ಎಸ್.ಆರ್.ಪಾಟೀಲ್,ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿ ಪ್ರಸಾದ್, ಸಚಿವ ಎಚ್.ಆಂಜನೇಯ, ಮಾಜಿ ಸಚಿವ ಅಂಬರೀಶ್ ಇತರರು ಮಾತನಾಡಿದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣು ಗೋಪಾಲ್, ಎಐಸಿಸಿ ಕಾರ್ಯದರ್ಶಿಗಳಾದ ಸಾಕೇತ್ ಶೈಲೇಶ್‌ನಾಥ್, ಸತೀಶ್ ಜಾರಕಿಹೊಳಿ,ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಚಿವರಾದ ಎಚ್.ಕೆ.ಪಾಟೀಲ್,ಸಂತೋಷ್ ಲಾಡ್ ಇನ್ನಿತರರು ಉಪಸ್ಥಿತರಿದ್ದರು.
ಮಹದಾಯಿ ವಿವಾದಕ್ಕೆ ಸಂಬಂಧಿಸಿ ಸೌಹಾರ್ದ ಇತ್ಯರ್ಥಕ್ಕೆ ಒತ್ತಾಯಿಸಿ ಸರ್ವಪಕ್ಷದ ನಿಯೋಗದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮನವಿ ಮಾಡಿದರೂ ಮಧ್ಯ ಸ್ಥಿ ಕೆಗೆ ಒಪ್ಪಲಿಲ್ಲ. ರೈತರು ಸಂಕಷ್ಟ ಪಡುತ್ತಿದ್ದರೂ ಬೆಂಗಳೂರಿಗೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ತುಟಿ ಬಿಚ್ಚಲಿಲ್ಲ.– ಸಿದ್ದರಾಮಯ್ಯ,ಮುಖ್ಯಮಂತ್ರಿ. ಹುಲಿಗೆಮ್ಮ, ಗವಿಮಠಕ್ಕೆ ರಾಹುಲ್ ಭೇಟಿ
ಕೊಪ್ಪಳ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಶನಿವಾರ ತಾಲೂಕಿನ ಹುಲಿಗಿಯ ಹುಲಿಗೆಮ್ಮ ದೇವಸ್ಥಾನ ಸೇರಿ ಕೊಪ್ಪಳದ ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದು ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ವಿಶೇಷ ಭದ್ರತಾ ಪಡೆಯೊಂದಿಗೆ ಭಾರಿ ಬಂದೋಬಸ್ತ್ನಲ್ಲಿ ಆಗಮಿಸಿದ ರಾಹುಲ್, ನೇರ ಗರ್ಭಗುಡಿಗೆ ತೆರಳಿ ದರ್ಶನ ಪಡೆದರು. ರಾಹುಲ್ ಸ್ವಾಗತಕ್ಕೆ ಡೊಳ್ಳಿನ ಸ್ವಾಗತ ಕೋರಲಾಯಿತು. ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಸೇರಿ ಇತರರು ಡೊಳ್ಳು ಭಾರಿಸುವ ಮೂಲಕ ಹೆಜ್ಜೆ ಹಾಕಿದರು. ರಾಹುಲ್ ದೇವಸ್ಥಾನದಿಂದ ಹಿಂದಿರುಗುವ ವೇಳೆ ಚಪ್ಪಲಿ ಕಳೆದವು ಎನ್ನುವ ಮಾತು ಹರಿದಾಡಿತು. ನಂತರ, ಕೊಪ್ಪಳದ ಗವಿಮಠಕ್ಕೆ ತೆರಳಿದ ರಾಹುಲ್ ಗದ್ದುಗೆಯಲ್ಲಿ ದರ್ಶನ ಪಡೆದು ನಂತರ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದರು. ಈ ವೇಳೆ, ಗವಿಸಿದ್ದೇಶ್ವರ ಸ್ವಾಮೀಜಿ ಅವರು ಗವಿಮಠದ ಇತಿಹಾಸ, ಪರಂಪರೆ ಸೇರಿ ಜಾತ್ರೆಯ ಕುರಿತು ಫೋಟೋ ಅಲ್ಬಂಗಳನ್ನೂ ತೋರಿಸಿ ಸಂಕ್ಷಿಪ್ತ ಮಾಹಿತಿ ನೀಡಿದರು. ನಂತರ ಮಠದ ವಿದ್ಯಾರ್ಥಿಗಳ ಕುಶಲೋಪರಿ ನಡೆಸಿ, ರಾಹುಲ್ ಜನಾಶೀರ್ವಾದ ಸಮಾವೇಶದಲ್ಲಿ ಪಾಲ್ಗೊಂಡರು. ಈ ವೇಳೆ ಸಿಎಂ ಸಿದ್ದರಾಮಯ್ಯ, ರಾಜ್ಯ ಉಸ್ತುವಾರಿ ಕೆ ಸಿ ವೇಣುಗೋಪಾಲ, ಕೆಪಿಸಿಸಿ ಅಧ್ಯಕ್ಷ ಡಾ ಜಿ ಪರಮೇಶ್ವರ, ಡಿ ಕೆ ಶಿವಕುಮಾರ್, ಬಸವರಾಜ ರಾಯರಡ್ಡಿ ಸೇರಿದಂತೆ ಇತರರು ಸಾಥ್ ನೀಡಿದರು.