Advertisement
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಸೇರಿದಂತೆ ಜನರು ಮಹಾರಾಷ್ಟ್ರ ಸರ್ಕಾರ ವಿರುದ್ಧ ರೊಚ್ಚಿಗೆದ್ದಿದ್ದಾರೆ.ಮುಂಬೈ ಸುತ್ತಮುತ್ತ ಹಾಗೂ ಮಹಾರಾಷ್ಟ್ರದಲ್ಲಿ 2200 ಉದ್ಯಮಗಳು ಮುಚ್ಚಿಹೋಗಿವೆ. ಹೀಗಾಗಿ ಸರ್ಕಾರದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಎನ್‌ಸಿಪಿ, ಕಾಂಗ್ರೆಸ್, ಸಿಪಿಎಂ ಎಲ್ಲರೂ ಒಗ್ಗೂಡಿ ಚುನಾವಣೆ ಎದುರಿಸುತ್ತಿದ್ದೇವೆ. ಈ ಬಾರಿ ಮೈತ್ರಿ ಸರ್ಕಾರ ಬರುವ ಸಾಧ್ಯತೆ ಹೆಚ್ಚಿದೆ ಎಂದರು.
Related Articles
Advertisement
ಹರಿಯಾಣದಲ್ಲೂ ಕಾಂಗ್ರೆಸ್ ಒಳ್ಳೆಯ ಪ್ರಯತ್ನ ಮಾಡುತ್ತಿದ್ದು, ಎಲ್ಲರೂ ಒಗ್ಗೂಡಿ ಕೆಲಸ ಮಾಡ್ತಿದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ವೀರ್ ಸಾವರ್ಕರ್ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗ, ಈಗ ಮಹಾರಾಷ್ಟ್ರ, ಹರಿಯಾಣ ವಿಧಾನಸಭೆ ಚುನಾವಣೆ ಇರೋದರಿಂದ ಈ ಬಗ್ಗೆ ಆಮೇಲೆ ಮಾತನಾಡುತ್ತೇನೆ ಎಂದರು.
ಮುಂಬೈನಲ್ಲಿ 1993ರ ಬಾಂಬ್ ಬ್ಲಾಸ್ಟ್ ಸಂತ್ರಸ್ತರನ್ನು ಅಂದಿನ ಕಾಂಗ್ರೆಸ್ ಸರ್ಕಾರ ಕಡೆಗಣಿಸಿತ್ತು ಎಂಬ ಪ್ರಧಾನಿ ಮೋದಿ ಹೇಳಿಕೆ ವಿಚಾರದಲ್ಲಿ ಮಾತನಾಡಿದ ಅವರು, ಈಗ ಐದು ವರ್ಷ ರಾಜ್ಯ ಹಾಗೂ ಕೇಂದ್ರದಲ್ಲಿ ಅವರದ್ದೇ ಸರ್ಕಾರ ಇತ್ತು ಅವರೇನು ಮಾಡಿದ್ರು? ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವುದು ಅವರ ಕೆಲಸವಾಗಿದೆ. 70 ವರ್ಷ ಏನು ಮಾಡಿದ್ದಾರೆ ಎಂದು ಅವರು ನಮ್ಮನ್ನ ಕೇಳ್ತಾರೆ. ಕಳೆದ ಐದು ವರ್ಷಗಳಲ್ಲಿ ಮಹಾರಾಷ್ಟ್ರದ ಫಡ್ನವೀಸ್ ಸರ್ಕಾರ ಕೇಂದ್ರದ ಮೋದಿ ಸರ್ಕಾರ ಏನು ಮಾಡಿದೆ ಎಂದು ಖರ್ಗೆ ಪ್ರಶ್ನಿಸಿದರು.
ಮಹಾರಾಷ್ಟ್ರಕ್ಕೆ ನೀರು ಬಿಡುಗಡೆ ಬಗ್ಗೆ ಸಿಎಂ ಬಿಎಸ್‌ವೈ ಹೇಳಿಕೆ ವಿಚಾರವಾಗಿ ಮಾತನಾಡಿದ ಖರ್ಗೆ, ಮುಖ್ಯಮಂತ್ರಿ ಬಿಎಸ್‌ವೈ ಈ ಬಗ್ಗೆ ಏನು ಮಾತನಾಡಿದ್ದಾರೆ ಎಂದು ಗೊತ್ತಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.