Advertisement

ಕಾಂಗ್ರೆಸ್‌ ಮಹಿಳಾ ಯುವ ಘಟಕದ ಉಪಾಧ್ಯಕ್ಷರಾಗಿ ಸೌಮ್ಯ ಆಯ್ಕೆ ಸಂಭವ

11:53 AM May 15, 2017 | Team Udayavani |

ಬೆಂಗಳೂರು: ಸಾರಿಗೆ ಸಚಿವ ರಾಮ ಲಿಂಗಾರೆಡ್ಡಿಯವರ ಪುತ್ರಿ ಸೌಮ್ಯ ರಾಮಲಿಂಗಾರೆಡ್ಡಿಯವರು ಕಾಂಗ್ರೆಸ್‌ ಪಕ್ಷದ ಬೆಂಗಳೂರು ಮಹಿಳಾ ಯುವ ಘಟ ಕದ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಯಾಗುವುದು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.

Advertisement

ಆಂತರಿಕ ಚುನಾವಣೆಯಲ್ಲಿ ಬೆಂಗಳೂರು ಮಹಿಳಾ ಯುವ ಘಟಕದ ಉಪಾಧ್ಯಕ್ಷ ಸ್ಥಾನಕ್ಕೆ ಸೌಮ್ಯ ರಾಮಲಿಂಗಾರೆಡ್ಡಿ ಹೊರತುಪಡಿಸಿ ಬೇರಾರೂ ನಾಮಪತ್ರ ಸಲ್ಲಿಸಿಲ್ಲ. ಚುನಾವಣಾ ಪ್ರಕ್ರಿಯೆಯಲ್ಲಿ ಸೌಮ್ಯ ಅವರೊಬ್ಬರೇ ಮಹಿಳಾ ಅಭ್ಯರ್ಥಿ ಆಗಿರುವುದರಿಂದ ಮಹಿಳಾ ಮೀಸಲು ನಿಯಮದಡಿ ಅವರು ಅವಿರೋಧವಾಗಿ ಆಯ್ಕೆ ಯಾಗುವುದು ಬಹುತೇಕ ಖಚಿತವಾಗಿದೆ.

ಸೌಮ್ಯ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್‌ ವಲಯದಲ್ಲಿವೆ.

Advertisement

Udayavani is now on Telegram. Click here to join our channel and stay updated with the latest news.

Next