Advertisement

ಮೈತ್ರಿಧರ್ಮವನ್ನೂ ಧರ್ಮವೆಂದು ಒಪ್ಪದ ಕಾಂಗ್ರೆಸ್ ಜೊತೆ ಎಂದೂ ಮೈತ್ರಿ ಇಲ್ಲ: ಕುಮಾರಸ್ವಾಮಿ

04:44 PM Oct 01, 2020 | keerthan |

ಬೆಂಗಳೂರು: ಉಪಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಮಾತುಗಳಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರತಿಕ್ರಯಿಸಿದ್ದು, ಮೈತ್ರಿಧರ್ಮವನ್ನೂ ಧರ್ಮವೆಂದು ಒಪ್ಪದ ಕಾಂಗ್ರೆಸ್ ಜೊತೆ ಎಂದೂ ಮೈತ್ರಿ ಇಲ್ಲ. ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ ಎಂದಿದ್ದಾರೆ.

Advertisement

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಜೆಡಿಎಸ್ ಜೊತೆ ಮೈತ್ರಿ ಇಲ್ಲ ಎಂದು ಕಾಂಗ್ರೆಸ್ ನಾಯಕರು ಹೇಳಿರುವ ಪತ್ರಿಕೆ, ವಾಹಿನಿಗಳ ವರದಿಯನ್ನು ಗಮನಿಸಿದೆ. ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಪ್ರಸ್ತಾವವನ್ನು ಜೆಡಿಎಸ್ ನಿಂದ ಮುಂದಿಟ್ಟಿರುವುದಾದರೂ ಯಾರು? 2018ರ ಫಲಿತಾಂಶದ ಬಳಿಕ ದೇವೇಗೌಡರ ಮನೆ ಬಾಗಿಲಿಗೆ ಕಾಂಗ್ರೆಸ್ ಬಂದಂತೆ ನಾವ್ಯಾರೂ ಕಾಂಗ್ರೆಸ್ ಬಾಗಿಲಿಗೆ ಹೋಗಿಲ್ಲ ಎಂದಿದ್ದಾರೆ.

ಇದನ್ನೂ ಓದಿ:ಆರ್.ಆರ್. ನಗರ: ಮಾಗಡಿ ಬಾಲಕೃಷ್ಣ, ರಕ್ಷಾ ರಾಮಯ್ಯ, ಕೃಷ್ಣಪ್ಪ ಹೆಸರು ಪ್ರಸ್ತಾಪ: DK ಸುರೇಶ್

ಕಾಂಗ್ರೆಸ್ ಮೈತ್ರಿಗೆ ಯೋಗ್ಯ ಪಕ್ಷವಲ್ಲ. ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಿದ, ರಾಜಸ್ಥಾನದಲ್ಲಿ ಬೆಂಬಲ ನೀಡಿದ್ದ ಬಿಎಸ್ ಪಿ ಶಾಸಕರನ್ನೇ ಸೆಳೆದ, ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ದಿನವೂ ಅಲುಗಾಡಿಸುತ್ತಿರುವ ಅದರ ವರ್ತನೆಯು, ಮೈತ್ರಿಗೆ ತಾನು ಯೋಗ್ಯವಲ್ಲ ಎಂಬುದರ ಸಂದೇಶ. ಅಷ್ಟಕ್ಕೂ ಕಾಂಗ್ರೆಸ್ ಮಿತ್ರ ಪಕ್ಷಗಳು ಬೇರೆಯೇ ಇವೆ ಎಂದು ಕಿಡಿಕಾರಿದ್ದಾರೆ.

ಮೈತ್ರಿಧರ್ಮವನ್ನೂ ಧರ್ಮವೆಂದು ಒಪ್ಪದ ಕಾಂಗ್ರೆಸ್ ಜೊತೆ ಎಂದೂ ಮೈತ್ರಿ ಇಲ್ಲ. ಮೈತ್ರಿ ವಿಷಯವಾಗಿ ಕಾಂಗ್ರೆಸ್ ಎದುರು ಜೆಡಿಎಸ್ ನ ಅವಕಾಶವನ್ನು ಯಾರೂ ಮುಂದಿಡುವುದೂ ಬೇಡ. ರಾಜ್ಯದಲ್ಲಿ ಮೈತ್ರಿ ಎಂದರೆ ಕಾಂಗ್ರೆಸ್-ಜೆಡಿಎಸ್ ಎಂಬ ಭಾವನೆಯೂ ಬೇಡ. ಹಾಗೇ, ಜೆಡಿಎಸ್, ದೇವೇಗೌಡರ ಹೆಸರು ಬಳಸಿ ಆ ಪಕ್ಷದ ‘ನಾಯಕ’ರು ಲಾಭ ಮಾಡಿಕೊಳ್ಳುವುದೂ ಬೇಡ‌ ಎಂದು ಎಚ್ ಡಿಕೆ ಕಾಂಗ್ರೆಸ್ ನಾಯಕರಿಗೆ ಚಾಟಿ ಬೀಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next