Advertisement

ಕೇಂದ್ರದಲ್ಲಿ ಸಾಲಮನ್ನಾ ಮಾಡಿದ್ದು ಕಾಂಗ್ರೆಸ್‌

10:05 PM Apr 08, 2019 | Lakshmi GovindaRaju |

ಚಾಮರಾಜನಗರ: ಕೇಂದ್ರದಲ್ಲಿ ಆಡಳಿತ ನಡೆಸಿದ ಯುಪಿಎ ಸರ್ಕಾರ ಅಧಿಕಾರದಲ್ಲಿ ಪ್ರಧಾನಿಯಾಗಿದ್ದ ಮನಮೋಹನ್‌ಸಿಂಗ್‌ ಅವರು 72 ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಮಾಡಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿಯವರು ರೈತರ ಸಾಲ ಮನ್ನಾ ಮಾಡಲು ನಿರ್ಲಕ್ಷ್ಯ ತೋರಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಆರೋಪಿಸಿದರು.

Advertisement

ತಾಲೂಕಿನ ಬಂಡಿಗೆರೆ ಗ್ರಾಮದಲ್ಲಿ ನಡೆದ ಕಾಂಗ್ರೆಸ್‌ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ, ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಸಹಕಾರ ಸಂಘದ ರೈತರು ಪಡೆದಿದ್ದ ತಲಾ 50 ಸಾವಿರ ರೂ. ಸಾಲ ಮನ್ನಾ ಮಾಡಿದರು. ಅಲ್ಲದೆ ಕಾಂಗ್ರೆಸ್‌, ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಮುಖ್ಯಮಂತ್ರಿಯಾದ ಎಚ್‌.ಡಿ.ಕುಮಾರಸ್ವಾಮಿ ರೈತರ ಸಾಲ ಮನ್ನಾ ಮಾಡುವ ಮೂಲಕ ಬಡವರ, ರೈತರ ಪರ ಎಂದು ಸಾಬೀತು ಪಡಿಸಿದೆ ಎಂದರು.

ಮೋದಿ ವಿಫ‌ಲ: ಪ್ರಧಾನಿ ನರೇಂದ್ರ ಮೋದಿಯವರು ರೈತರ ಸಾಲ ಮನ್ನಾ ಮಾಡುವಲ್ಲಿ ವಿಫ‌ಲರಾಗಿದ್ದಾರೆ. ಮೋದಿಯವರು 5 ವರ್ಷದ ಅವಧಿಯಲ್ಲಿ ಸುಳ್ಳು ಹೇಳುವುದನ್ನೇ ಬಂಡವಾಳ ಮಾಡಿಕೊಂಡು ಜನತೆಯದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಯಾವುದೇ ಅಭಿವೃದ್ದಿ ಕೆಲಸ ಆಗಿಲ್ಲ. ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದೆ. ತೈಲ ಬೆಲೆ ಹೆಚ್ಚಳವಾಗಿದೆ. ಚುನಾವಣಾ ಪೂರ್ವದಲ್ಲಿ ವಿದೇಶದಲ್ಲಿರುವ ಕಪ್ಪುಹಣವನ್ನು ತಂದು ಎಲ್ಲರ ಖಾತೆಗೂ 15 ಲಕ್ಷ ರೂ. ಹಾಕುವುದಾಗಿ ಭರವಸೆ ನೀಡಿ 5 ವರ್ಷಗಳೇ ಕಳೆದಿದೆ. ಆದರೂ 15 ಪೈಸೆಯನ್ನು ಹಾಕಿಲ್ಲ ಎಂದು ಟೀಕೆ ಮಾಡಿದರು.

ಧ್ರುವಗೆ ಅತ್ಯಧಿಕ ಮತ ನೀಡಿ: ಪಕ್ಷದ ಅಭ್ಯರ್ಥಿ ಆರ್‌.ಧ್ರುವನಾರಾಯಣ ಎರಡು ಬಾರಿ ಶಾಸಕ ಹಾಗೂ ಎರಡು ಬಾರಿ ಸಂಸದರಾಗಿದ್ದಾರೆ. ಜಿಲ್ಲೆಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಪಕ್ಷದ ಕಾರ್ಯಕರ್ತರು, ಮುಖಂಡರು ಕಾಂಗ್ರೆಸ್‌ ಸಾಧನೆ, ಕಾರ್ಯಕ್ರಮಗಳು, ಕೊಡುಗೆಗಳನ್ನು ಹಾಗೂ ನರೇಂದ್ರಮೋದಿಯವರ ಸುಳ್ಳಿನ ಭರವಸೆಗಳನ್ನು ಮತದಾರರಿಗೆ ತಿಳಿಸಿಕೊಡುವ ಮೂಲಕ ಪಕ್ಷದ ಅಭ್ಯರ್ಥಿ ಆರ್‌.ಧ್ರುವನಾರಾಯಣ ಅವರನ್ನು ಅತ್ಯಧಿಕ ಮತದಿಂದ ಗೆಲ್ಲಿಸಿಕೊಡುವಂತೆ ಮನವಿ ಮಾಡಿದರು.

ಸೇವೆ ಮಾಡಲು ಮತ್ತೂಂದು ಅವಕಾಶ ನೀಡಿ: ಕಾಂಗ್ರೆಸ್‌ ಅಭ್ಯರ್ಥಿ ಹಾಗೂ ಸಂಸದ ಆರ್‌. ಧ್ರುವನಾರಾಯಣ ಮಾತನಾಡಿ, ಕಾಂಗ್ರೆಸ್‌ ಪಕ್ಷ ಉಪ್ಪಾರ ಸಮುದಾಯಕ್ಕೆ ರಾಜಕೀಯ ಸ್ಥಾನಮಾನ ಕೊಟ್ಟು ಪುಟ್ಟರಂಗಶೆಟ್ಟರನ್ನು 3 ಬಾರಿ ಶಾಸಕರಾಗಿ ಮಾಡಿದೆ. ಅಲ್ಲದೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಿದ್ದು, ಈ ಚುನಾವಣೆಯ ನೇತೃತ್ವ ವಹಿಸಿದೆ. ಆದ್ದರಿಂದ ಪುಟ್ಟರಂಗಶೆಟ್ಟರ ಕೈ ಬಲಪಡಿಸಲು ಈ ಚುನಾವಣೆಯಲ್ಲಿ ಹರದನಹಳ್ಳಿ ಭಾಗದ ಜನತೆ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾದ ನನಗೆ ಹೆಚ್ಚಿನ ಮತಗಳನ್ನು ಹಾಕುವ ಮೂಲಕ ಮತ್ತೂಮ್ಮೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದರು.

Advertisement

ಮಾಜಿ ಶಾಸಕ ಎ. ಆರ್‌. ಕೃಷ್ಣಮೂರ್ತಿ, ಮಾಜಿ ಸಂಸದ ಕಾಗಲವಾಡಿ ಶಿವಣ್ಣ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಪಿ.ಮರಿಸ್ವಾಮಿ, ಉಪಾಧ್ಯಕ್ಷ ಬಿ.ಕೆ.ರವಿಕುಮಾರ್‌, ಪ್ರಧಾನ ಕಾರ್ಯದರ್ಶಿ ಆರ್‌.ಮಹದೇವು, ಬ್ಲಾಕ್‌ ಅಧ್ಯಕ್ಷರಾದ ಗುರುಸ್ವಾಮಿ, ಮಹಮದ್‌ಅಸರ್‌, ಜಿಪಂ ಸದಸ್ಯರಾದ ಶಶಿಕಲಾ ಸೋಮಲಿಂಗಪ್ಪ, ಕೆ.ಪಿ.ಸದಾಶಿವಮೂರ್ತಿ, ನಗರಸಭೆ ಮಾಜಿ ಅಧ್ಯಕ್ಷ ನಂಜುಂಡಸ್ವಾಮಿ, ಜಿಪಂ ಮಾಜಿ ಅಧ್ಯಕ್ಷ ಸಿ.ಎ ಮಹದೇವಶೆಟ್ಟಿ, ಚೂಡಾ ಮಾಜಿ ಅಧ್ಯಕ್ಷ ಸೈಯದ್‌ರಫಿ, ಜಿಪಂ ಮಾಜಿ ಸದಸ್ಯರಾದ ಎಸ್‌.ಸೋಮನಾಯಕ, ಕಾವೇರಿ ಶಿವಕುಮಾರ್‌, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷೆ ಲತಾ ಜಯಣ್ಣ, ಕಾಗಲವಾಡಿ ಚಂದ್ರು, ತಾಪಂ ಸದಸ್ಯರಾದ ಮಹದೇವಶೆಟ್ಟಿ, ಪುಟ್ಟಸ್ವಾಮಿ, ಮುಖಂಡರಾದ ಚೆಂಗುಮಣಿ, ಕಂದಹಳ್ಳಿನಂಜುಂಡಸ್ವಾಮಿ, ಎಂ.ಶಿವಮೂರ್ತಿ, ಬೂದಿತಿಟ್ಟುಲಿಂಗರಾಜು, ನಾಗಬಸವಣ್ಣ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next