Advertisement
ಕಾಂಗ್ರೆಸ್ ಭವನದಲ್ಲಿ ಗುರುವಾರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಈ ಹಿಂದಿನ ಸೋಲಿಗೆಕಾರಣ ಏನೆಂಬುದನ್ನು ತಿಳಿದುಕೊಂಡು ಬರಲಿರುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮ ವಹಿಸಬೇಕಿದೆ. ಪಕ್ಷದ ಅಭ್ಯರ್ಥಿಗೆ ಬೆಂಬಲಿಸುವಂತೆ ಮತದಾರರ ಮನವೊಲಿಸಬೇಕು ಎಂದರು.
ದಿನೇಶ್ ಪರವಾಗಿ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ಪಕ್ಷದ ಅಭ್ಯರ್ಥಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್ ಮಾತನಾಡಿ, ಕಳೆದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿದ್ದ ಎಸ್.ಪಿ. ದಿನೇಶ್, ತಮ್ಮ ಪ್ರತಿಸ್ಪರ್ಧಿ ವಿರುದ್ಧ ಅತ್ಯಂತ ಕಡಿಮೆ ಮತಗಳ ಅಂತರದಲ್ಲಿ ಸೋಲು ಕಂಡಿದ್ದರು. ಆದರೆ ಈ
ಬಾರಿ ಅದಕ್ಕೆ ಅವಕಾಶ ಕೊಡಬಾರದು. ಕಾಂಗ್ರೆಸ್ಗೆ ಮತ ಹಾಕುವಂತೆ ಪಕ್ಷದ ಕಾರ್ಯಕರ್ತರು ಮತದಾರರನ್ನು
ಪ್ರೇರೇಪಿಸಬೇಕು. ಕೋಮುವಾದಿ ಪಕ್ಷವನ್ನು ದೂರವಿಡಲು ಕಾರ್ಯಪ್ರವೃತ್ತರಾಗಬೇಕೆಂದು ಕರೆ ನೀಡಿದರು.
Related Articles
ಸೋನಿಯಾ ಗಾಂಧಿ ಈಗಾಗಲೇ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಎಲ್ಲೆಡೆ ಕಾಂಗ್ರೆಸ್ ಪರವಾದ ವಾತಾವರಣ
ಇದೆ. ಎಲ್ಲರೂ ಸಂಘಟಿತರಾಗಿ ಪ್ರಯತ್ನ ಪಟ್ಟಲ್ಲಿ ಫಲಿತಾಂಶ ನಮ್ಮ ಪರವಾಗಿರುತ್ತದೆ ಎಂದರು.
Advertisement
ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ದಿನೇಶ್ ಮಾತನಾಡಿ, ಕಳೆದ ಚುನಾವಣೆ ಸಂದರ್ಭದಲ್ಲಿ ಸರ್ಕಾರಿ ಯಂತ್ರವನ್ನು ಕೆಲವರು ದುರುಪಯೋಗಪಡಿಸಿಕೊಂಡಿದ್ದರು. ಇದರಿಂದಾಗಿ ತಾವು ಅನುಭವಿಸುವಂತಾಯಿತು. ಇದರ ಜೊತೆಗೆ ಕುಲಗೆಟ್ಟ ಮತಗಳ ಸಂಖ್ಯೆ ಜಾಸ್ತಿಯಾಗಿತ್ತು. ಜೆಡಿಎಸ್ ಅಭ್ಯರ್ಥಿ6,875 ಮತ ಪಡೆದಿದ್ದು ಕೂಡ ಕಾಂಗ್ರೆಸ್ ಮತ ವಿಭಜನೆಗೆ ಕಾರಣವಾಗಿತ್ತು. ಈ ಬಾರಿ ಸಂಘಟಿತ ಪ್ರಯತ್ನ ನಡೆಸಬೇಕು. ಆಗ ಗೆಲವು ನಮ್ಮದಾಗುತ್ತದೆ ಎಂದರು. ಸಭೆಯಲ್ಲಿ ಪಕ್ಷದ ಪ್ರಮುಖರಾದ ಇಸ್ಮಾಯಿಲ್ ಖಾನ್, ಪಿ.ವಿ. ವಿಶ್ವನಾಥ್ ಕಾಶಿ, ವಿಜಯಲಕ್ಷ್ಮೀ ಪಾಟೀಲ್, ಎಸ್.ಪಿ.
ಶೇಷಾದ್ರಿ, ಎಚ್.ಸಿ. ಯೋಗೀಶ್, ನಾಗರಾಜ್, ಮಮತಾ ಸಿಂಗ್ ಮತ್ತಿತರರು ಇದ್ದರು.