Advertisement
ನಗರದ ತಾಪಂ ಆವರಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಆಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಕಾನೂನು ರೀತಿ ಆಡಳಿತವೇ ಇಲ್ಲ. ಎಲ್ಲ ಇಲಾಖೆಗಳು, ನಿಗಮಗಳಲ್ಲಿಭ್ರಷ್ಟಾಚಾರ ನಡೆದಿದೆ. ದೀನ ದಲಿತರ ಅನುದಾನದಲ್ಲೇ ಭ್ರಷ್ಟಾಚಾರ ಮಾಡಿದ್ದಾರೆ. ಗಾಂಧಿಯವರ ಸ್ವರಾಜ್ಯಕ್ಕೆ ತದ್ವಿರುದ್ಧವಾಗಿ
ನಡೆದುಕೊಳ್ಳುತ್ತಿದ್ದಾರೆ.
Related Articles
Advertisement
ಶಾಸಕ ಮುನಿರತ್ನ ನಾಟಕ ಮಾಡುತ್ತಿದ್ದಾರೆಂಬ ಕಾಂಗ್ರೆಸ್ ನಾಯಕರು ಮಾಡುತ್ತಿರುವ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾರಾದರೂ ಉಂಟಾ? ನಮ್ಮ ಮೇಲೆ ನಾವೇ ಮೊಟ್ಟೆ ಹಾಕಿಸಿಕೊಂಡು ಅವಮಾನಮಾಡಿಸಿಕೊಳ್ಳೋಕೆ ಆಗುತ್ತಾ? ಎಂದು ಮರು ಪ್ರಶ್ನಿಸಿದರು. ಸಿಟಿ ರವಿ ದೂರಿಗೆ ಕ್ರಮವಿಲ್ಲ: ವಿಪ ಸದಸ್ಯ ಸಿ.ಟಿ. ರವಿಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಬರಲಿ ಎಂಬ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಅದು ಅವರವರಿಗೆ ಬಿಟ್ಟಿದ್ದು ದೇವರು ನಂಬಿಕೆ ಅವರವರ ವೈಯಕ್ತಿಕ ವಿಚಾರ. ಸಿ.ಟಿ. ರವಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಇಬ್ಬರೂ ದೂರು ಕೊಟ್ಟಿದ್ದಾರೆ. ಒಂದು ಕಡೆ ಕಂಪ್ಲೇಂಟ್
ಗೆ ಕೂಡಲೇ ಕ್ರಮ ಕೈಗೊಳ್ಳುತ್ತಾರೆ. ಆದರೆ, ಸಿ.ಟಿ.ರವಿ ದೂರು ಕೊಟ್ಟಿರುವುದನ್ನು ಎಫ್ ಐಆರ್ ಮಾಡೇ ಇಲ್ಲ. ಹೈಕೋರ್ಟ್
ಮಧ್ಯಪ್ರವೇಶ ಮಾಡದಿದ್ದರೆ ಸಿ.ಟಿ. ರವಿ ಅವರ ಪರಿಸ್ಥಿತಿ ಏನು ಆಗ್ತಿತ್ತೋ ಗೊತ್ತಿಲ್ಲ ಎಂದರು. ಈ ವೇಳೆ ಮಾಜಿ ಶಾಸಕರಾದ ಶಿವರಾಜ ಸಜ್ಜನರ, ವಿರೂಪಾಕ್ಷಪ್ಪ ಬಳ್ಳಾರಿ ಇದ್ದರು. ರಾಜ್ಯ ಸರ್ಕಾರದಿಂದ ದರ ಏರಿಕೆ ಪರ್ವ. .
ರಾಜ್ಯ ಸರ್ಕಾರದಿಂದ ಬೆಲೆ ಏರಿಕೆ ಪರ್ವ ನಡೆದಿದೆ. ಸ್ಟಾಂಪ್ ಡ್ಯೂಟಿ, ಅಬಕಾರಿ ತೆರಿಗೆ ಸೇರಿದಂತೆ ಎಲ್ಲದರ ತೆರಿಗೆ ಹೆಚ್ಚಿಸಿದ್ದಾರೆ. 15 ಸಾವಿರ ಕೋಟಿ ರೂ. ಹೊಸ ತೆರಿಗೆ ಹಾಕಿದ್ದಾರೆ. ಹಾಲಿನ ದರ, ನೀರಿನ ದರ ಎಲ್ಲದರಲ್ಲೂ ತೆರಿಗೆ ಹೆಚ್ಚಿಗೆ ಮಾಡಿದ್ದಾರೆ. ಜನ ಸಾಮಾನ್ಯರು ಬಳಕೆ ಮಾಡುವಂತ ಎಲ್ಲ ವಸ್ತುಗಳ ದರ ಹೆಚ್ಚಳ ಮಾಡಿದ್ದಾರೆ. ಮುಂಬರುವ ದಿನಗಳಲ್ಲಿ ಮರಳು, ಜಲ್ಲಿ ಕೂಡ ಇನ್ನಷ್ಟು ತುಟ್ಟಿ ಆಗಲಿದೆ. ಪ್ರತಿ ಆರ್ಥಿಕ ಚಟುವಟಿಕೆ ಮೇಲೆ ತೆರಿಗೆ ಹಾಕುತ್ತಿದ್ದಾರೆ. ಮುಂದೆ ಇವರು ಗಾಳಿಗೂ ತೆರಿಗೆ ಹಾಕುವ ಕಾಲ ದೂರ ಇಲ್ಲ ಎಂದು ಹೇಳಿದರು. ಕಾಮಗಾರಿ ಅರ್ಧಕ್ಕೆ ಬಿಟ್ಟ ಗುತ್ತಿಗೆದಾರ. .
ಹಾವೇರಿ ನಗರದ ಕುಡಿಯುವ ನೀರು ಪೂರೈಕೆಗಾಗಿ 2014ರಲ್ಲಿ 30 ಕೋಟಿ ರೂ. ಬಿಡುಗಡೆ ಮಾಡಲಾಗಿತ್ತು. ಗುತ್ತಿಗೆದಾರ ಕಾಮಗಾರಿ ಅರ್ಧಕ್ಕೆ ಬಿಟ್ಟಿದ್ದಾರೆ. ಹಾವೇರಿಯಲ್ಲಿ ಯಾಕೆ ಹೀಗಾಗುತ್ತಿದೆ ಎಂಬ ಯಕ್ಷಪ್ರಶ್ನೆ ಕಾಡುತ್ತಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ಕೇಂದ್ರ ಸರ್ಕಾರದ ಅಮೃತ ಯೋಜನೆಗೆ ಹಾವೇರಿ ಆಯ್ಕೆಯಾಗಿದೆ. ಎಲ್ಲೆಲ್ಲಿ ಕೆಲಸ ಅರ್ಧ ಆಗಿದೆ? ಬಾಕಿ ಏನೇನು ಆಗಬೇಕಿದೆ ಎಂಬ ಕುರಿತು ಅಂದಾಜು ವೆಚ್ಚದ ಡಿಪಿಆರ್ ಸಿದ್ಧಪಡಿಸಿ ಕೆಲಸ ಪ್ರಾರಂಭಿಸಿ ಎಂದು ಹಿಂದಿನ ದಿಶಾ ಸಭೆಯಲ್ಲಿ ಅ ಧಿಕಾರಿಗಳಿಗೆ ಸೂಚಿಸಿದ್ದೆ. ಈ ಕುರಿತು ಮತ್ತೆ ಪರಿಶೀಲಿಸುತ್ತೇನೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.