Advertisement
ಶುಕ್ರವಾರ ಜಿಲ್ಲೆಯ ನೂತನ ತಾಲೂಕು ಕಾಳಗಿ ಪಟ್ಟಣದಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಿದ ಅವರು, ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಸರ್ಕಾರ ಸಹಕಾರಿ ಸಂಘಗಳಲ್ಲಿ ಸಾಲ ಮನ್ನಾ ಮಾಡಿದೆ. ಕೇಂದ್ರದಲ್ಲೂ ಕಾಂಗ್ರೆಸ್ ಸರ್ಕಾರ ಬಂದ್ರೆ ಸರ್ಕಾರ ರಚನೆಯಾದ 10 ದಿನದೊಳಗೆ ಎಲ್ಲ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಮನ್ನಾ ಮಾಡಲಾಗುವುದು ಎಂದು ಪ್ರಕಟಿಸಿದರು.
Related Articles
Advertisement
ಮೋದಿ ನನಗೆ ಭಾಷಣ ಮಾಡಲು ಬರೋದಿಲ್ಲ ಅಂತಾರೆ. ಅದೇ ರೀತಿ ಖರ್ಗೆ ಕುರಿತಾಗಿ ವೈಯಕ್ತಿಕ ಟೀಕೆ ಮಾಡ್ತಾರೆ. ಆದರೆ ತಾವೆಂದು ಮೋದಿ ಬಗ್ಗೆ ವೈಯಕ್ತಿವಾಗಿ ಒಮ್ಮೆಯೂ ಟೀಕಿಸಿಲ್ಲ, ಜತೆಗೆ ವೈಯಕ್ತಿಕ ದಾಳಿ ಮಾಡೋದಿಲ್ಲ. ಆದ್ರೆದೇಶದ ಸಮಸ್ಯೆಗಳ ಬಗ್ಗೆ ಪ್ರಶ್ನೆ ಮಾಡಿಯೇ ಮಾಡುತ್ತೇನೆ. ಭ್ರಷ್ಟಾಚಾರ ಆರೋಪದ ಮೇರೆಗೆ ಜೈಲಿಗೆ ಹೋಗಿಬಂದ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಮಾಡಿದ್ದರ ಬಗ್ಗೆ ಪ್ರಶ್ನೆ ಮಾಡುತ್ತೇನೆ. ದೇಶದಲ್ಲಿ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ಪ್ರಶ್ನೆ ಮಾಡುತ್ತೇನೆ. ಉದ್ಯೋಗ ಕೊಡುವುದಾಗಿ ಹೇಳಿ ಕೊಡದ ಬಗ್ಗೆ ಪ್ರಶ್ನೆ ಮಾಡುತ್ತೇನೆ ಎಂದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ, ಸಚಿವರಾದ ಡಾ| ಶರಣಪ್ರಕಾಶ ಪಾಟೀಲ, ಪ್ರಿಯಾಂಕ್ ಖರ್ಗೆ, ಶಾಸಕ ಡಾ| ಉಮೇಶ ಜಾಧವ್, ಡಾ| ಅಜಯಸಿಂಗ್, ಚುನಾವಣೆ ವೀಕ್ಷಕ ಹಾಗೂ ಅಕ್ಕಲಕೋಟ ಶಾಸಕ ಸಿದ್ದರಾಮ ಮೆØàತ್ರೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ, ಕಲಬುರಗಿ ಉತ್ತರ ಮತಕ್ಷೇತ್ರದ ಖನಿಜಾ ಫಾತೀಮಾ, ಕಲಬುರಗಿ ದಕ್ಷಿಣ ಮತಕ್ಷೇತ್ರದ ಅಲ್ಲಂಪ್ರಭು ಪಾಟೀಲ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ, ಮುಖಂಡರಾದ ಜಗನ್ನಾಥ ಗೋಧಿ, ತಿಪ್ಪಣ್ಣಪ್ಪ ಕಮಕನೂರ, ರವಿರಾಜ ಕೊರವಿ, ಮಲ್ಲಿಕಾರ್ಜುನ ಪಾಟೀಲ ಹುಳಗೇರಾ, ರೇವಣ ಸಿದ್ದಪ್ಪ ಸಾತನೂರ, ಪ್ರವೀಣ ಹರವಾಳ, ಕಿರಣ ದೇಶಮುಖ, ಡಾ| ಸಾಕೆ ಶೈಲೇಜನಾಥ ಇದ್ದರು. ಕಾಂಗ್ರೆಸ್ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಮುಂತಾದವರಿದ್ದರು. ಚುನಾವಣೆ ಪ್ರಚಾರದ ವೇಳೆಯಲ್ಲಿ ಆ ಪುಣ್ಯಾತ್ಮ ತಮ್ಮ ಸರ್ಕಾರ ಏನು ಮಾಡಿದೆ ಅಂತ ಒಂದೇ ಒಂದು ಮಾತು ಹೇಳಲಿಲ್ಲ. ಕೇವಲ ನನ್ನ ಸೇರಿದಂತೆ ಕಾಂಗ್ರೆಸ್ ನಾಯಕರ ಬಗ್ಗೆ ಮಾತನಾಡುವುದರಲ್ಲೇ ಕಾಲಹರಣ ಮಾಡಿದ್ರು. ನಾವು ನುಡಿದಂತೆ ನಡೆದಿದ್ದೇವೆ. 165 ಭರವಸೆಗಳಲ್ಲಿ 155 ಈಡೇರಿಸಿದ್ದೇವೆ. ಅಭಿವೃದ್ಧಿ ಮೇಲೆ ಮತ ಕೇಳ್ತೇವೆ. ಆದ್ರೆ ಬಿಜೆಪಿ ಒಂದೇ ಒಂದು ಒಳ್ಳೆ ಕೆಲಸ ಮಾಡಿಲ್ಲ. ಹೀಗಾಗಿ ಬರೀ ಟೀಕಿಸುತ್ತಾ ಮತ ಕೇಳಲಾಗುತ್ತಿದೆ. ಅಭಿವೃದ್ಧಿಯನ್ನೇ ಮಾಡದ ನೀವು ಯಾವ ಮುಖ ಇಟ್ಟುಕೊಂಡು ಮತ ಕೇಳ್ತಿರಿ.
●ಡಾ| ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ನಾಯಕ