Advertisement

ಒಂದೂವರೆ ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ಪೊಲೀಸ್ ಕಾನ್ಸ್ಟೇಬಲ್ ಪತ್ನಿ ನೇಣಿಗೆ ಶರಣು

06:41 PM Jan 30, 2022 | Team Udayavani |

ತುಮಕೂರು : ಕಳೆದ ಒಂದೂವರೆ ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ಪೊಲೀಸ್ ಕಾನ್ಸ್ಟೇಬಲ್ ಯೊಬ್ಬರ ಪತ್ನಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.

Advertisement

ಜಿಲ್ಲೆಯ  ಚಿಕ್ಕನಾಯಕನಹಳ್ಳಿ  ಪಟ್ಟಣದ ಪೊಲೀಸ್ ವಸತಿ ಗೃಹದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಶಶಿಧರ್ ಪತ್ನಿ ಲಾವಣ್ಯ (21) ನೇಣಿಗೆ ಶರಣಾಗಿದ್ದಾರೆ.

ಒಂದೂವರೆ ವರ್ಷದ ಹಿಂದೆ ಇವರು ಮದುವೆಯಾಗಿದ್ದು ಇವರಿಗೆ ಆರು ತಿಂಗಳ ಗಂಡು ಮಗುವಿದೆ. ಆತ್ಮಹತ್ಯೆಗೆ ಕಾರಣ  ತಿಳಿದು ಬಂದಿಲ್ಲ.

ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ  ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next