Advertisement
ನಗರದ ಜಿಲ್ಲಾ ಕ್ರೀಡಾ ಭವನದಲ್ಲಿ ಜಿಲ್ಲಾ ಮಾದಿಗ ನೌಕರರ ಸಾಂಸ್ಕೃತಿಕ ಸಂಘದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ “ಭಾರತ ಸಂವಿಧಾನ ಮತ್ತು ಸಮಕಾಲೀನ ಸ್ಥಿತಿಗತಿಗಳು’ ಎಂಬ ವಿಷಯ ಕುರಿತ ವಿಚಾರಸಂಕಿರಣ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
Related Articles
Advertisement
ನಿವೃತ್ತ ಪ್ರಾಂಶುಪಾಲ ಬಿ.ಆರ್. ಶಿವಕುಮಾರ್ ಉದ್ಘಾಟಿಸಿ ಮಾತನಾಡಿ, ಅಂಬೇಡ್ಕರ್ ಈ ದೇಶಕ್ಕೆ ನೀಡಿರುವ ಸಂವಿಧಾನ ಹಾಗೂ ಅವರಲ್ಲಿನ ವಿಚಾರಧಾರೆಗಳನ್ನು ಅರ್ಥೈಸಿಕೊಳ್ಳುವಲ್ಲಿ ವಿಫಲರಾಗಿದ್ದೇವೆ. ಇದರಿಂದಾಗಿ ಅನಾಹುತಗಳು ಆಗುತ್ತಿವೆ ಎಂದು ಹೇಳಿದರು.
ಜಿಲ್ಲಾ ಮಾದಿಗ ನೌಕರರ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಚಂದ್ರಪ್ಪ, ಮಾಜಿ ಅಧ್ಯಕ್ಷ ಜಗನ್ನಾಥ, ಉಪನ್ಯಾಸಕ ತಿಪ್ಪೇಸ್ವಾಮಿ ಕೆರೆಯಾಗಳಹಳ್ಳಿ, ಸಂಘದ ಪ್ರಧಾನ ಕಾರ್ಯದರ್ಶಿ ಎನ್. ರಾಘವೇಂದ್ರ, ಸಂಘಟನಾ ಕಾರ್ಯದರ್ಶಿ ಟಿ. ಶ್ರೀನಿವಾಸ್, ಚಳ್ಳಕೆರೆ ತಾಲೂಕು ಘಟಕದ ಅಧ್ಯಕ್ಷ ದಯಾನಂದ, ಅಂಬೇಡ್ಕರ್ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಬಿ.ಪಿ. ತಿಪ್ಪೇಸ್ವಾಮಿ, ಡಾ| ಬಿ.ಎಂ. ಗುರುನಾಥ್ ಮತ್ತಿತರರು ಇದ್ದರು.
ಸಂವಿಧಾನ ಬದಲಾವಣೆ ಮಾಡುವುದು, ಸಂವಿಧಾನದಲ್ಲಿ ಪ್ರಾತಿನಿಧ್ಯ ನೀಡಿದ ಮೀಸಲಾತಿ ಬದಲಾವಣೆ ಮಾಡುವ ಮಾತುಗಳು ಕೇಳಿಬರುತ್ತಿರುವುದು ವಿಷಾದನೀಯ ಸಂಗತಿ. ದೇಶದ ಬಹುಸಂಖ್ಯಾತರ ಅಸ್ತಿತ್ವವನ್ನು ಅಲುಗಾಡಿಸುವ ಪ್ರಕ್ರಿಯೆಗಳು, ಪ್ರಕರಣಗಳು ನಡೆಯುತ್ತಿರುವುದು ಬಹುದೊಡ್ಡ ದುರಂತ.
ಅರಕಲವಾಡಿ ನಾಗೇಂದ್ರ, ಸಾಮಾಜಿಕ ಚಿಂತಕ.