Advertisement

ಪಾಲಿಕೆ ಆಡಳಿತ ಕಸರತ್ತು ಮತ್ತೆ ಶುರು

10:29 AM Aug 12, 2017 | Team Udayavani |

ಬೆಂಗಳೂರು: ಬಿಬಿಎಂಪಿ ಮೇಯರ್‌ ಹಾಗೂ ಉಪಮೇಯರ್‌ ಅವಧಿ ಮುಗಿಯಲು ಒಂದು ತಿಂಗಳು ಬಾಕಿಯಿದ್ದು ನೂತನ ಮೇಯರ್‌ ಹಾಗೂ ಉಪಮೇಯರ್‌ ಸ್ಥಾನದ ಆಕಾಂಕ್ಷಿಗಳು ತೆರೆಮರೆಯಲ್ಲಿ ಕಸರತ್ತು ಆರಂಭಿಸಿದ್ದಾರೆ. ಈ ನಡುವೆ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಮಾಡಿಕೊಂಡು ಪಾಲಿಕೆಯಲ್ಲಿ ಅಧಿಕಾರ ಹಿಡಿದು ಎರಡು ಅವಧಿ ಪೂರ್ಣಗೊಳ್ಳುತ್ತಿದೆ. ಮತ್ತೂಂದು ಅವಧಿಗೆ ಮೈತ್ರಿ ಮುಂದುವರಿಯುವುದೋ ಇಲ್ಲವೋ ಎಂಬ ಚರ್ಚೆಗಳೂ ನಡೆಯುತ್ತಿದೆ. ರಾಜಧಾನಿಯ ಬಿಬಿಎಂಪಿ ಆಡಳಿತ ಚುಕ್ಕಾಣಿ ಹಿಡಿಯಲು ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಪಾಲಿಕೆಯಲ್ಲಿ ಸಂಖ್ಯಾಬಲ ಹೆಚ್ಚಿರುವ ಬಿಜೆಪಿ ಮೂರನೇ ಅವಧಿಯಲ್ಲಾದರೂ ತನ್ನ ಆಸೆ
ಕೈಗೂಡುವುದೇ ಎಂಬ ಲೆಕ್ಕಾಚಾರದಲ್ಲಿ ತಂತ್ರಗಾರಿಕೆ ರೂಪಿಸುತ್ತಿದೆ. ಈ ಅವಧಿಗೆ ಮೇಯರ್‌ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದು, ಉಪಮೇಯರ್‌ ಸ್ಥಾನಸಾಮಾನ್ಯ ಮಹಿಳೆಗೆ ಮೀಸಲಿಡಲಾಗಿದೆ. ಮೇಯರ್‌ ಜಿ.ಪದ್ಮಾವತಿ ಹಾಗೂ ಉಪಮೇಯರ್‌
ಎಂ.ಆನಂದ್‌ ಅವರ ಅವಧಿ ಸೆಪ್ಟಂಬರ್‌ 28ಕ್ಕೆ ಪೂರ್ಣಗೊಳ್ಳಲಿದೆ. ಆ ಹಿನ್ನೆಲೆಯಲ್ಲಿ ನೂತನ ಮೇಯರ್‌ ಹಾಗೂ ಉಪಮೇಯರ್‌ ಸ್ಥಾನ ಚುನಾವಣೆಯ ದಿನಾಂಕವನ್ನು ನಿಗದಿಪಡಿಸುವಂತೆ ಪ್ರಾದೇಶಿಕ ಆಯುಕ್ತರಿಗೆ ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ ಪ್ರಸಾದ್‌ ಅವರು ಪತ್ರ ಬರೆದಿದ್ದಾರೆ. ಪ್ರಾದೇಶಿಕ ಆಯುಕ್ತರು ಸರ್ಕಾರದೊಂದಿಗೆ ಚರ್ಚೆ ನಡೆಸಿದ ನಂತರ ಹೊಸ ಮೇಯರ್‌ ಸ್ಥಾನ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡಲಿದ್ದಾರೆ. ಚುನಾವಣಾ ವರ್ಷವಾದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದವರು ಮೇಯರ್‌ ಹುದ್ದೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಒಂದು ವೇಳೆ ಮೇಯರ್‌ ಹುದ್ದೆ ಪಡೆದರೆ ಸರ್ಕಾರ ತನ್ನ ಪ್ರಭಾವ ಬೀರಿ ಕಾಮಗಾರಿಗಳ ಪ್ರಗತಿ ಕುಂಠಿತವಾಗಿಸಲಿದೆ. ಅದರಿಂದ ಬಿಜೆಪಿಗೆ ಕೆಟ್ಟ ಹೆಸರು ಬರಲಿದ್ದು, ವಿಧಾನ ಸಭಾ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಬೇಕಾಗುತ್ತದೆ ಎಂಬ ಉದ್ದೇಶದಿಂದ ಮೇಯರ್‌ ಸ್ಥಾನ ಬೇಡ ಲೆಕ್ಕಾಚಾರವನ್ನು ಹೊಂದಿದೆ ಎಂದು ಹೇಳಲಾಗಿದೆ. ಕಾಂಗ್ರೆಸ್‌ಗೆ ಮತ್ತೆ ಅಧಿಕಾರ ಪಡೆಯಲು ಜೆಡಿಎಸ್‌ ಬೆಂಬಲ ಕೋರಬೇಕಿದ್ದು, ಈಗಾಗಲೇ 8 ವಿಧಾನಪರಿಷತ್‌ ಸದಸ್ಯರು ತಮ್ಮ ಮತದಾನದ ಹಕ್ಕನ್ನು ಬೇರೆಡೆಗೆ ವರ್ಗಾಯಿಸಿ ಕೊಂಡಿರುವುದರಿಂದ ಮತಗಳ ಕೊರತೆಯಾಗಲಿದೆ. ಆ ಹಿನ್ನೆಲೆಯಲ್ಲಿ ಮೇಯರ್‌ ಹುದ್ದೆಗಾಗಿ ಮತ್ತೆ ಕಸರತ್ತು ನಡೆಸಬೇಕಿದೆ. ಆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಏನು ಮಾಡುತ್ತದೆ ಎಂಬುದೂ ಕುತೂಹಲ ಕೆರಳಿಸಿ¨ ಮತದಾರರ ಪಟ್ಟಿ ನೀಡುವಂತೆ ಸೂಚನೆ ಮೇಯರ್‌ ಚುನಾವಣೆಗೆ ದಿನಾಂಕ ನಿಗದಿಪಡಿಸುವಂತೆ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿರುವ ಹಿನ್ನೆಲೆಯಲ್ಲಿ, ಬಿಬಿಎಂಪಿ ಸಹಾಯಕ ಕಂದಾಯ ಅಧಿಕಾರಿಗಳಿಗೆ ತಮ್ಮ ವ್ಯಾಪ್ತಿಯಲ್ಲಿ ಮೇಯರ್‌ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಿರುವ ಶಾಸಕರು,
ವಿಧಾನ ಪರಿಷತ್ತು ಸದಸ್ಯರು ಹಾಗೂ ಸಂಸದರ ಪಟ್ಟಿ ಸಿದ್ಧಪಡಿಸಿ ಸಲ್ಲಿಸುವಂತೆ ಬಿಬಿಎಂಪಿಯಿಂದ ಸೂಚನೆ ನೀಡಲಾಗಿದೆ. 

Advertisement
Advertisement

Udayavani is now on Telegram. Click here to join our channel and stay updated with the latest news.

Next