Advertisement

ಮೋದಿ ಭೇಟಿ: ಹ್ಯಾಲಿಪ್ಯಾಡ್‌ ನಿರ್ಮಾಣ ಚುರುಕು

02:44 PM Apr 06, 2023 | Team Udayavani |

ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶಕ್ಕೆ ಏ.9ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡುವುದು ಅಧಿಕೃತವಾದ ಹಿನ್ನೆಲೆ ಮೇಲುಕಾಮನಹಳ್ಳಿ ಬಳಿಯ ಸಫಾರಿ ಕೇಂದ್ರ ಬಳಿ ಹ್ಯಾಲಿಪ್ಯಾಡ್‌ ನಿರ್ಮಾಣ ಕಾರ್ಯ ಚುರುಕುಗೊಂಡಿದೆ.

Advertisement

ಮೋದಿ ಭೇಟಿ ಹಿನ್ನೆಲೆ ಎಚ್ಚೆತ್ತ ಅರಣ್ಯ ಇಲಾಖೆ ಹಾಗೂ ಜಿಲ್ಲಾ ಮತ್ತು ತಾಲೂಕು ಆಡಳಿತ ಬಂಡೀಪುರ ರಾಷ್ಟ್ರೀಯ ಹೆದ್ದಾರಿಯ ಸ್ವತ್ಛತಾ ಕಾರ್ಯಕ್ಕೆ ಮುಂದಾಗಿದ್ದು, ವರ್ಷಗಳಿಂದ ಹೆದ್ದಾರಿ ರಸ್ತೆಯ ಎರಡು ಬದಿಯಲ್ಲಿ ಬೆಳೆದಿದ್ದ ಕಳೆ ಗಿಡಗಳನ್ನು ತೆರವುಗೊಳಿಸಲಾಗುತ್ತಿದೆ. ರಸ್ತೆ ಬದಿಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್‌ ವಸ್ತುಗಳನ್ನು ಹಾಯಿಸಲಾಗುತ್ತಿದ್ದು, ಕಾಡು ಪ್ರಾಣಿಗಳ ಮೇಲು ಕೂಡು ರಸ್ತೆ ದಾಟದಂತೆ ನಿಗಾ ವಹಿಸಲಾಗುತ್ತಿದೆ.

ಹೊರಗಿನವರ ಮಾಹಿತಿ ನೀಡಿ: ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿ ಕೊಳ್ಳಬೇಕಾಗಿದ್ದು ಬಂಡೀಪುರ ಅಭಯಾರಣ್ಯ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಿಗೆ ಹೊರಗಿನಿಂದ ಬರುವ ಅಪರಿ ಚಿತರ ಮಾಹಿತಿ ನೀಡುವಂತೆ ಗ್ರಾಮಸ್ಥರಿಗೆ ಈಗಾಗಲೇ ಅಧಿ ಕಾರಿಗಳು ಸೂಚನೆ ನೀಡಲಾಗಿದ್ದು, ಅನುಮಾನಾಸ್ಪದವಾಗಿ ಸಂಚಾರ ಮಾಡುವವರು ಹಾಗೂ ವಾಹನಗಳ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ ಎಂದು ತಿಳಿದುಬಂದಿದೆ.

ಅಧಿಕಾರಿಗಳ ಭೇಟಿ-ಪರಿಶೀಲನೆ: ಏ.9ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ಅಧಿಕೃತವಾದ ಹಿನ್ನೆಲೆ ಜಿಲ್ಲಾಧಿಕಾರಿ ಡಿ.ಎಸ್‌.ರಮೇಶ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪದ್ಮಿನಿ ಸಾಹೋ, ಎಡಿಸಿ ಕಾತ್ಯಾಯಿಸಿ ಸೇರಿದಂತೆ ಹಲವು ಇಲಾಖೆ ಅಧಿಕಾರಿಗಳು ಬಂಡೀಪುರಕ್ಕೆ ಭೇಟಿ ಹ್ಯಾಲಿ ಪ್ಯಾಡ್‌ ನಿರ್ಮಾಣ ಸೇರಿದಂತೆ ಸೂಕ್ತ ಭದ್ರತೆ ಒದಗಿಸುವ ಸಂಬಂಧ ಪರಿಶೀಲನೆ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next