Advertisement

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಖಚಿತ

07:08 AM Jun 06, 2019 | Lakshmi GovindaRaj |

ಬಳ್ಳಾರಿ: “ಅಯೋಧ್ಯೆಯಲ್ಲಿ ಈ ಬಾರಿ ರಾಮ ಮಂದಿರ ನಿರ್ಮಾಣ ಖಚಿತವಾಗಿ ಆಗಲಿದೆ’ ಎಂದು ಉಡುಪಿ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಪಾದಂಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಇಷ್ಟು ವರ್ಷ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಬಿಜೆಪಿಗೆ ಬಹುಮತ ಇರಲಿಲ್ಲ. ಮುಂದಿನ ವರ್ಷ ಬಿಜೆಪಿಗೆ ರಾಜ್ಯಸಭೆ, ಲೋಕಸಭೆಗಳೆರಡರಲ್ಲೂ ಬೆಂಬಲ ದೊರೆಯಲಿದ್ದು, ಅಯೋಧ್ಯೆಯಲ್ಲಿ ರಾಮ ಮಂದಿರ ಖಚಿತವಾಗಿ ನಿರ್ಮಾಣವಾಗಲಿದೆ ಎಂದರು.

ಪ್ರಧಾನಿ ಮೋದಿಯವರಿಗೆ ದೇಶದ ಜನ ಸ್ಪಷ್ಟ ಜನಾದೇಶ ನೀಡಿದ್ದಾರೆ. ಹಾಗಾಗಿ ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಅವರು ಮುಂದಾಗಬೇಕು. ಇದು ಕೇವಲ ನನ್ನದೊಂದೇ ಅಭಿಪ್ರಾಯವಲ್ಲ. ಉಡುಪಿಯ ಅಷ್ಟಮಠಗಳ ಅಭಿಪ್ರಾಯವಾಗಿದೆ ಎಂದು ತಿಳಿಸಿದರು.

ಮಮತಾ ಬ್ಯಾನರ್ಜಿ ವಿರುದ್ಧ ಅಸಮಾಧಾನ: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಯವರು “ಜೈ ಶ್ರೀರಾಮ’ ಎಂಬ ಘೋಷಣೆ ಕೂಗಿದವರ ವಿರುದ್ಧ ನೇರವಾಗಿ ಧಮ್ಕಿ ಹಾಕಿರೋದು ತರವಲ್ಲ. ಅವರೊಬ್ಬ ಜವಾಬ್ದಾರಿಯುತ ಸ್ಥಾನದಲ್ಲಿರುವವರು.

ಅಂಥವರಿಗೆ ಅಷ್ಟೊಂದು ಕೋಪ ಒಳ್ಳೆಯದಲ್ಲ. ಅವರು ತಾಳ್ಮೆಯಿಂದ ವರ್ತಿಸಬೇಕು. ಬಾಂಗ್ಲಾ ದೇಶದಿಂದ ವಲಸೆ ಬಂದಿರುವವರಿಗೆ ಈ ದೇಶದ ನಾಗರಿಕ ಹಕ್ಕನ್ನು ಕೊಟ್ಟಿದ್ದಾರೆ. ಕೇವಲ ಚುನಾವಣೆಯಲ್ಲಿ ಗೆಲ್ಲಲು ಅವರು ಹೀಗೆ ಮಾಡಿದ್ದಾರೆ. ಅವರ ಬಗ್ಗೆ ಅಪಾರ ಗೌರವವಿತ್ತು. ಆದರೆ ಈಗ ಎಲ್ಲ ಹೋಗಿದೆ ಎಂದರು.

Advertisement

ರಾಜ್ಯ ಸರ್ಕಾರ ಗೊಂದಲದಲ್ಲಿದೆ: ರಾಜ್ಯ ಸರ್ಕಾರದಲ್ಲಿ ಗೊಂದಲ ಉಂಟಾಗಿದೆ. ಎರಡೂ ಪಕ್ಷಗಳು ಸೇರಿ ಸರ್ಕಾರ ನಡೆಸಲು ತೊಂದರೆಯಾಗುತ್ತದೆ ಎಂದು ನಾನು ಮೊದಲೇ ಹೇಳಿದ್ದೆ. ಬಿಜೆಪಿಯನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರ ಮಾಡಬಹುದು. ಬಿಜೆಪಿ ಕೂಡ ಸಂವಿಧಾನವನ್ನು ಒಪ್ಪಿಕೊಂಡಿದೆ. ಬಿಜೆಪಿ ಕೂಡ ಜಾತ್ಯತೀತ ಪಕ್ಷ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next