Advertisement
ಕಲ್ಲುಗಳು ಸಮುದ್ರ ಪಾಲುಬೇಲಿಕೇರಿ ಪ್ರದೇಶದಲ್ಲಿ ನಿರ್ಮಿಸಲಾಗಿ ರುವ ತಾತ್ಕಾಲಿಕ ತಡೆಗೋಡೆ ಅಪಾಯಕ್ಕೆ ಸಿಲುಕಿದೆ. ಸಮುದ್ರದ ಅಬ್ಬರಕ್ಕೆ , ಅಲೆಗಳ ಹೊಡೆತಕ್ಕೆ ತಡೆಗೋಡೆ ಕುಸಿಯುತ್ತಿದ್ದು, ಕಲ್ಲುಗಳು ಸಮುದ್ರ ಪಾಲಾಗುತ್ತಿವೆ.
ಬೇಲಿಕೇರಿ ಪ್ರದೇಶದಲ್ಲಿ ತಾತ್ಕಾಲಿಕ ತಡೆಗೋಡೆ ಸಮುದ್ರದ ಅಬ್ಬರಕ್ಕೆ ಕುಸಿಯುತ್ತಿದ್ದು ಈ ಪ್ರದೇಶದಲ್ಲಿ ಶಾಶ್ವತ ತಡೆಗೋಡೆ ರಚನೆ ಮಾಡುವ ಬಗ್ಗೆ ಈಗಾಗಲೇ ಟೆಂಡರ್ ಕರೆಯಲಾಗಿದ್ದು ಕಾಮಗಾರಿ ನಡೆಯಲಿದೆ. ಇದಕ್ಕೂ ಮುನ್ನ ಅಪಾಯದ ಸೂಚನೆ ಇರುವ ಪ್ರದೇಶದಲ್ಲಿ ತಾತ್ಕಾಲಿಕ ತಡೆಗೋಡೆಯನ್ನು ರಚಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಕೆ. ಗೋಪಾಲ ಪೂಜಾರಿ ತಿಳಿಸಿದ್ದಾರೆ.
Related Articles
Advertisement