Advertisement
ನಗರದ ಝೀರಾ ಕನ್ವೆನ್ಶನ್ ಹಾಲ್‌ನಲ್ಲಿ ಸೋಮವಾರ (ನ.18) ರಾಜ್ಯ ಸಹಕಾರ ಮಹಾ ಮಂಡಳ, ವಿವಿಧ ಸಹಕಾರ ಮಹಾ ಮಂಡಳ ಮತ್ತು ಸಂಘಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 71ನೇ ಆಖಿಲ ಭಾರತ ಸಹಕಾರ ಸಪ್ತಾಹ-2224ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸ್ವಾತಂತ್ರ್ಯ ಪೂರ್ವದಲ್ಲಿ ಆರಂಭಗೊಂಡಿದ್ದ ಸಹಕಾರಿ ಚಳುವಳಿಯು ಇಂದು ಕ್ರಾಂತಿಯ ರೀತಿಯಲ್ಲಿ ಬೆಳೆದು ನಿಂತಿದೆ. ಸ್ವಾತಂತ್ರ್ಯ ನಂತರದ ಅನಕ್ಷರತೆ, ಬಡತನದ ಮಧ್ಯ ಸಹಕಾರ ಕ್ಷೇತ್ರ ಬೆಳವಣಿಗೆ ಸಾಧಿಸಿದ್ದು, ಪ್ರಗತಿಯಲ್ಲಿ ಕರ್ನಾಟಕದ ದೇಶದಲ್ಲಿ ಮೂರನೇ ಸ್ಥಾನದಲ್ಲಿ ಎಂದು ನುಡಿದರು.
Related Articles
Advertisement
ಲೋಪಗಳು, ಸೋರಿಕೆ ತಡೆಗಟ್ಟಿದರೆ ಸಹಕಾರ ಸಂಘಗಳು ಮತ್ತಷ್ಟು ಬಲವರ್ಧನೆಗೊಂಡು ಜಿಲ್ಲೆಯ ಪ್ರಗತಿಗೆ ಸಹಕಾರ ಸಿಗುತ್ತದೆ. ಸಹಕಾರ ಕ್ಷೇತ್ರ ಗಟ್ಟಿಯಾಗಿ ಬೆಳೆಯಬೇಕಾಗಿದ್ದು, ಈ ದಿಸೆಯಲ್ಲಿ ಸರ್ಕಾರ ಸಹಕಾರಿಗಳ ಪರವಾಗಿ ಇರಲಿದೆ ಎಂದು ಸಚಿವ ಖಂಡ್ರೆ ಭರವಸೆ ನೀಡಿದರು.
ಸಹಕಾರ ಸಕ್ಕರೆ ಕಾರ್ಖಾನೆಗಳ ಪುನಶ್ಚೇತನ ಮತ್ತು ಡಿಸಿಸಿ ಬ್ಯಾಂಕ್‌ಗಳಿಗೆ ಇನ್ನಷ್ಟು ಶಕ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದ್ದು, ಈ ದಿಸೆಯಲ್ಲಿ ಸಿಎಂ, ಸಹಕಾರ ಸಚಿವರ ಗಮನ ಸೆಳೆಯುವುದಾಗಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಸಹಕಾರ ಸಪ್ತಾಹದಲ್ಲಿ ಮಾತನಾಡಿದ ಅವರು, ಬಿಎಸ್‌ಎಸ್‌ಕೆ ಕಾರ್ಖಾನೆ ಮೇಲಿನ ಸಾಲ 350 ಕೋಟಿ ರೂ.ಗೆ ತಲುಪಿದ್ದು, ಸಾಲ ಮರು ಪಾವತಿ ಸ್ಥಿತಿಯಲ್ಲಿ ಕಾರ್ಖಾನೆಯಿಲ್ಲ. ಆದರೆ, ಡಿಸಿಸಿ ಬ್ಯಾಂಕ್ ಉಳಿಯಬೇಕಾದರೆ ತಾನು ಕೊಟ್ಟ ಸಾಲವನ್ನು ಮರು ಪಾವತಿ ಮಾಡಿಕೊಳ್ಳುವುದು ಮತ್ತು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದರು.
ಪೌರಾಡಳಿತ ಸಚಿವ ರಹೀಮ್ ಖಾನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ, ಡಾ. ಸಿದ್ದು ಪಾಟೀಲ, ನಗರಸಭೆ ಅಧ್ಯಕ್ಷ ಮಹ್ಮದ್ ಗೌಸ್, ಡಿಸಿಸಿ ಬ್ಯಾಂಕ್ ಅದ್ಯಕ್ಷ ಅಮರಕುಮಾರ ಖಂಡ್ರೆ, ಉಪಾಧ್ಯಕ್ಷ ಅಭಿಷೇಕ ಪಾಟೀಲ, ಸಹಕಾರ ಮಹಾಮಂಡಳ ಅಧ್ಯಕ್ಷೆ ಶಕುಂತಲಾ ಬೆಲ್ದಾಳೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಸಿಇಒ ಡಾ. ಗಿರೀಶ್ ಬದೋಲೆ, ಸಹಕಾರ ಸಂಘಗಳ ಉಪ ನಿಬಂಧಕಿ ಮಂಜುಳಾ ಎಸ್. ಗುರುನಾಥ ಜ್ಯಾಂತಿಕರ್, ವಿಜಯಕುಮಾರ ಪಾಟೀಲ ಗಾದಗಿ ಮತ್ತಿತರರಿದ್ದರು.