Advertisement

ಖಾಸಗಿ ಶಿಕ್ಷಣ ಸಂಸ್ಥೆಗಳ ಕೊಡುಗೆ ಅಪಾರ

09:36 AM Feb 03, 2019 | Team Udayavani |

ಮಾನ್ವಿ: ಹೈದರಾಬಾದ್‌ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಕ್ಷೇತ್ರದ ಪ್ರಗತಿಗೆ ಖಾಸಗಿ ಶಿಕ್ಷಣ ಸಂಸ್ಥೆಗಳ ಕೊಡುಗೆ ಅಪಾರವಾಗಿದೆ ಎಂದು ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿದರು.

Advertisement

ಪಟ್ಟಣದ ಪ್ರಗತಿ ಪಿಯು ಕಾಲೇಜ್‌ ಆವರಣದಲ್ಲಿ ಇತ್ತೀಚೆಗೆ ನಡೆದ 5ನೇ ವಾರ್ಷಿಕೋತ್ಸವ ಹಾಗೂ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶೈಕ್ಷಣಿಕವಾಗಿ ಹೈಕ ಭಾಗ ಪ್ರಗತಿ ಸಾಧಿಸುತ್ತಿದ್ದು, ಹಿಂದುಳಿದ ಪ್ರದೇಶ ಎನ್ನುವ ಹಣೆಪಟ್ಟಿ ನಿಧಾನವಾಗಿ ಕಳಚುತ್ತಿದೆ. ಇದು ಈ ಬಾಗದ ಶಿಕ್ಷಣ ಸಂಸ್ಥೆಗಳ ನಿರಂತರ ಪರಿಶ್ರಮದ ಫಲವಾಗಿದೆ ಎಂದರು.

ವಿದ್ಯಾರ್ಥಿಗಳು ಸಹ ಆಸಕ್ತಿ ಮತ್ತು ಪರಿಶ್ರಮದಿಂದ ಕಲಿಕೆಯಲ್ಲಿ ತೊಡಗಬೇಕು. ಅಂದಾಗ ಶ್ರಮಕ್ಕೆ ಫಲ ಸಿಕ್ಕೇ ಸಿಗುತ್ತದೆ. ನಿರಂತರ ಪರಿಶ್ರಮ, ಪ್ರಯತ್ನಗಳ ಮೂಲಕ ಗುರಿ ಸಾಧನೆಗೆ ಮುಂದಾಗಬೇಕು. ಇತರರಿಗೆ ಮಾದರಿಯಾಗಬೇಕು. ಶಿಕ್ಷಣದಲ್ಲಿ ಸಾಧನೆ ಮಾಡುವ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಂಡು ತಂದೆ-ತಾಯಿ ನಿಮ್ಮ ಮೇಲೆ ಇಟ್ಟಿರುವ ನಂಬಿಕೆ ಉಳಿಸಿಕೊಳ್ಳಬೇಕು. ಕನಸನ್ನು ನನಸಾಗಿಸಬೇಕು. ಪಾಲಕರು ಹಾಗೂ ಗುರುಗಳು ವಿದ್ಯಾರ್ಥಿಗಳಿಗೆ ಸರಿಯಾದ ಮಾರ್ಗದರ್ಶನ ಮಾಡಬೇಕು ಎಂದರು.

ಶಿಕ್ಷಣ ಸಂಸ್ಥೆ ಕಟ್ಟುವುದು ಸುಲಭದ ಕಾರ್ಯವಲ್ಲ. ಈ ನಿಟ್ಟಿನಲ್ಲಿ ಪ್ರಗತಿ ಕಾಲೇಜ್‌ನ್ನು ಪ್ರಾರಂಭಿಸುವ ಮೂಲಕ ಈ ಭಾಗದ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ತಿಪ್ಪಣ್ಣ ಎಂ.ಹೊಸಮನಿ ಹಾಗೂ ಪ್ರಾಚಾರ್ಯರಾದ ಬಸವರಾಜ ಭೋಗಾವತಿ ಕಾರ್ಯ ಶ್ಲಾಘನೀಯ ಎಂದರು.

ಬಸವರಡ್ಡಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಶಂಕರ ವಿ.ಬಸವರಡ್ಡಿ, ಜಂಟಿ ಕಾರ್ಯದರ್ಶಿ ತಿಪ್ಪಣ್ಣ ಎಂ.ಹೊಸಮನಿ, ಆಯುಷ್‌ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಡಾ| ಶಂಕರಗೌಡ ಎಸ್‌. ಪಾಟೀಲ, ಪ್ರಾಚಾರ್ಯ ಬಸವರಾಜ ಭೋಗಾವತಿ, ಪ್ರೌಢಶಾಲೆ ಶಿಕ್ಷಕರ ಸಂಘದ ರಾಜ್ಯ ಕಾರ್ಯದರ್ಶಿ ಮಹಾದೇವಪ್ಪ ಮಾತನಾಡಿದರು. ನಂತರ ವಿದ್ಯಾರ್ಥಿಗಳಿಂದ ಸಾಸ್ಕೃತಿಕ ಕಾರ್ಯಕ್ರಮ ನಡೆದವು.

Advertisement

ಪುರಸಭೆ ಮಾಜಿ ಅಧ್ಯಕ್ಷ ಇಸ್ಮಾಯಿಲ್‌, ಮುಖಂಡರಾದ ಸುಬ್ರಮಣ್ಯಂ, ಆಂಜನೇಯ, ಸರ್ಕಾರಿ ಬಾಲಕಿಯರ ಕಾಲೇಜ್‌ ಉಪನ್ಯಾಸಕ ಅಮರೇಗೌಡ ಚಾಗಬಾವಿ, ಗಾಂಧಿ ಕಾಲೇಜ್‌ ಪ್ರಾಚಾರ್ಯ ಈರಣ್ಣ ಮರ್ಲಟ್ಟಿ, ಉಪನ್ಯಾಸಕರಾದ ಸುಮಾ ಟಿ. ಹೊಸಮನಿ, ಪವನಕುಮಾರ, ರವಿ ಶರ್ಮಾ, ಶರಣಬಸವ, ರವಿಕುಮಾರ, ಬಂದೆಪ್ಪ, ಕಿರಣ, ಪ್ರಸಾದ, ಶೋಭಾ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next