Advertisement

ಸದೃಢ ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಕರ ಕೊಡುಗೆ ಅನನ್ಯ

04:16 PM Sep 08, 2022 | Team Udayavani |

ಜೇವರ್ಗಿ: ಶಿಕ್ಷಕರು ವಿದ್ಯಾರ್ಥಿಗಳಿಗೆ ಶ್ರೇಷ್ಠ ಜ್ಞಾನ, ಬುದ್ಧಿ, ಸಂಸ್ಕಾರ, ಮಾನವೀಯ ಮೌಲ್ಯಗಳು ಮತ್ತು ಸೂಕ್ತ ಮಾರ್ಗದರ್ಶನ ಮಾಡಿ, ಅವರನ್ನು ರಾಷ್ಟ್ರದ ಶ್ರೇಷ್ಠ ಸಂಪನ್ಮೂಲಗಳನ್ನಾಗಿಸುವ ಮೂಲಕ ಸದೃಢ ರಾಷ್ಟ್ರದ ನಿರ್ಮಾಣಕ್ಕೆ ಅನನ್ಯವಾದ ಕೊಡುಗೆ ನೀಡುತ್ತಿದ್ದಾರೆ ಎಂದು ಪಟ್ಟಣದ ಸರ್ಕಾರಿ ಸ್ವತಂತ್ರ ಪಪೂ ಕಾಲೇಜಿನ ಪ್ರಾಚಾರ್ಯ ಬಸವರಾಜ ಬಿರಾದಾರ ಹೇಳಿದರು.

Advertisement

ಪಟ್ಟಣದ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಸರ್ಕಾರಿ ಪಿಯು ಕಾಲೇಜಿನಲ್ಲಿ ಜರುಗಿದ “ಶಿಕ್ಷಕರ ದಿನಾಚರಣೆ’ಯ ಕಾರ್ಯಕ್ರಮವನ್ನು ಡಾ| ಸರ್ವಪಲ್ಲಿ ರಾಧಾಕೃಷ್ಣನ್‌ರ ಭಾವಚಿತ್ರಕ್ಕೆ ನಮನಗಳನ್ನು ಸಲ್ಲಿಸಿ, ಕೇಕ್‌ ಕತ್ತರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ದೇಶಕ್ಕೆ ಡಾ| ಸರ್ವಪಲ್ಲಿ ರಾಧಾಕೃಷ್ಣನ್‌ ಕೊಡುಗೆ ಅಪಾರವಾಗಿದೆ. ನಮ್ಮ ಪ್ರದೇಶ ಹಿಂದುಳಿದಿಲ್ಲ. ಅನೇಕ ಪ್ರತಿಭೆಗಳು ಉನ್ನತವಾದ ಸಾಧನೆ ಮಾಡುತ್ತಿದ್ದಾರೆ ಎಂದರೆ, ಅದಕ್ಕೆ ಈ ಭಾಗದ ಶಿಕ್ಷಕರ ಪರಿಶ್ರಮವೇ ಕಾರಣವಾಗಿದೆ. ಶಿಕ್ಷಕರು ಪಠ್ಯದ ಜೊತೆಗೆ ವಿದ್ಯಾರ್ಥಿಗಳಲ್ಲಿ ಸಂಸ್ಕಾರ, ಮಾನವೀಯ ಮೌಲ್ಯಗಳ ಗುಣಗಳನ್ನು ಬೆಳೆಸುವ ಕಾರ್ಯ ನಿರಂತರವಾಗಿ ಮಾಡಬೇಕಾಗಿದೆ ಎಂದರು.

ಕಾಲೇಜಿನ ಪ್ರಾಚಾರ್ಯ ಮಹಮ್ಮದ್‌ ಅಲ್ಲಾವುದ್ದೀನ್‌ ಸಾಗರ ಮಾತನಾಡಿದರು. ಎನ್‌.ಎಸ್‌. ಎಸ್‌ ಅ ಧಿಕಾರಿ, ಎಚ್‌.ಬಿ. ಪಾಟೀಲ, ಉಪನ್ಯಾಸಕರಾದ ಚಂದ್ರಪ್ರಭ ಕಮಲಾಪೂರಕರ್‌, ರವೀಂದ್ರಕುಮಾರ ಬಟಗೇರಿ, ಶಂಕ್ರೆಪ್ಪ ಹೊಸದೊಡ್ಡಿ, ರೇಣುಕಾ ಚಿಕ್ಕಮೇಟಿ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next