Advertisement
ಆದರೆ, ತಜ್ಞರ ಸಮಿತಿ ಕೈಗೊಳ್ಳುವ ಯಾವುದೇ ನಿರ್ಧಾರಗಳು ನ್ಯಾಯಾಲಯದ ಅಂತಿಮ ಆದೇಶದ ವ್ಯಾಪ್ತಿಗೆ ಒಳಪಟ್ಟಿರುತ್ತದೆ ಎಂದು ಹೇಳಿದೆ. ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಅಲ್ಪಸಂಖ್ಯಾತ ಆಯೋಗಕ್ಕೆ ವರ್ಗಾಯಿಸಿದ ರಾಜ್ಯ ಸರ್ಕಾರದ ಕ್ರಮ ಮತ್ತು ಮಾನ್ಯತೆ ನೀಡುವ ವಿಚಾರದ ಬಗ್ಗೆ ವರದಿ ನೀಡಲು ನಿವೃತ್ತ ನ್ಯಾ. ಎಚ್.ಎನ್ .ನಾಗಮೋಹನ ದಾಸ್ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿದ ರಾಜ್ಯ ಅಲ್ಪಸಂಖ್ಯಾತ ಆಯೋಗದ ಕಾರ್ಯದರ್ಶಿ ಆದೇಶ ಪ್ರಶ್ನಿಸಿ ಹೈ ಕೋರ್ಟ್‌ಗೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸೇರಿ 2 ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯನ್ಯಾಯಮೂರ್ತಿ ಎಚ್.ಜಿ. ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ಮಧ್ಯಂತರ ಆದೇಶ ನೀಡಿತು.
ಮಾಡಿಕೊಂಡಿರುವ ಮನವಿಗಳ ಆಧರಿಸಿಯೇ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆಯಿದೆ.