Advertisement

ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ

04:33 PM Feb 07, 2018 | Team Udayavani |

ಸಿಂಧನೂರು: ಬೀದರ ಜಿಲ್ಲೆ ಭಾಲ್ಕಿ ತಾಲೂಕಿನ ಕೋಸಂ ಗ್ರಾಮದ ಹಡಪದ ಸಮಾಜದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲು ಆಗ್ರಹಿಸಿ ತಾಲೂಕು ಹಡಪದ ಸಮಾಜ ನೇತೃತ್ವದಲ್ಲಿ ಸಮಾಜ ಬಾಂಧವರು ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.

Advertisement

ನಗರದ ಎಪಿಎಂಸಿ ಗಣೇಶ ಗುಡಿಯಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ ಮಿನಿ ವಿಧಾನಸೌಧಕ್ಕೆ ತೆರಳಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. ಸಮಾಜದ ಮುಖಂಡ ಎಚ್‌.ಜಿ. ಹಂಪಣ್ಣ ಮಾತನಾಡಿ, ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ಕೋಸಂ ಗ್ರಾಮದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ದುಷ್ಕರ್ಮಿಗಳು ಕ್ರೂರವಾಗಿ ಕೊಲೆ ಮಾಡಿದ್ದಾರೆ. ಆರೋಪಿ ಹಾಗೂ ಇದಕ್ಕೆ ಕುಮ್ಮಕ್ಕು ನೀಡಿದವರಿಗೆ ಮರಣದಂಡನೆ ಶಿಕ್ಷೆ ನೀಡಬೇಕು. ಪ್ರಕರಣವನ್ನು ಸಿಐಡಿಗೆ ವಹಿಸಬೇಕೆಂದು ಆಗ್ರಹಿಸಿದರು.

ಸಾಹಿತಿ ಎಂ.ಎಂ. ಕಲಬುರಗಿ, ಗೌರಿ ಲಂಕೇಶ ಸೇರಿದಂತೆ ಹಲವಾರು ಕೊಲೆಗಳಾಗಿದ್ದರೂ ಆರೋಪಿಗಳನ್ನು ಬಂಧಿಸುವಲ್ಲಿ ಸರ್ಕಾರ ವಿಫಲವಾಗಿದೆ. ಕೂಡಲೇ ಆರೋಪಿಗಳನ್ನು ಬಂಧಿ ಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. ಹಡಪದ ಸಮಾಜದ ದೊಡ್ಡಪ್ಪ ಕಳಮಳ್ಳಿ, ಈರಣ್ಣ ಅಲ್ಲೂರು, ಶಿವಪ್ಪ ಅರಳಹಳ್ಳಿ, ನಿಜಗುಣ ಹಡಪದ, ಕಾಶಿನಾಥ ಮೂಡಬೂಳ, ಶರಣಪ್ಪ, ಯರಿಯಪ್ಪ ತೊಂಡಿಹಾಳ, ತಿರುಪತಿ, ಮರಿಯಪ್ಪ, ಮುದುಕಪ್ಪ, ಪಂಪಣ್ಣ, ಚನ್ನಪ್ಪ, ಬಸವರಾಜ, ಶರಣಪ್ಪ, ವಿರುಪಣ್ಣ, ಎಂ. ಜಗದೀಶ, ರಾಜು ಚಂದ್ರಪ್ಪ ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನೊಂದ ಕುಟುಂಬಕ್ಕೆ ಪರಿಹಾರ ಕೊಡಿ
ಮಸ್ಕಿ: ಬೀದರ ಜಿಲ್ಲೆಯ ಭಾಲ್ಕಿ ತಾಲೂಕಿನ ಕೋಸಂ ಗ್ರಾಮದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ಇಲ್ಲಿನ ಹಡಪದ ಅಪ್ಪಣ್ಣ ಹಾಗೂ ಸವಿತಾ ಸಮಾಜ ಸೇವಾ ಸಂಘದ ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಿ ಪ್ರೊಬೇಶರಿ ತಹಶೀಲ್ದಾರ್‌ ತಿಮ್ಮಣ್ಣ ಉಜ್ಜಯಿನಿ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಅತ್ಯಾಚಾರ ಹಾಗೂ ಕೊಲೆಗಳಂತಹ ಪ್ರಕರಣಗಳು ಹೆಚ್ಚುತ್ತಿವೆ. ಇವುಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಬೇಕು.  ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಬೇಕು. ಈ ಹಿಂದೆ ವಿಜಯಪುರ ಹಾಗೂ ಮುದ್ದೇಬಿಹಾಳದಲ್ಲಿ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
ಕೊಲೆಯಾದ ಬಾಲಕಿ ಕುಟುಂಬಕ್ಕೆ ಸರ್ಕಾರ ಆರ್ಥಿಕ ನೆರವು ನೀಡಿ, ಸರ್ಕಾರಿ ಹುದ್ದೆ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ. ಹಡಪದ ಅಪ್ಪಣ್ಣ ಸಮಾಜದ ನೂರಾರು ಜನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು 

Advertisement
Advertisement

Udayavani is now on Telegram. Click here to join our channel and stay updated with the latest news.

Next