Advertisement

ಸಮನ್ವಯ ಸಮಿತಿ ಸಭೆ ಇಂದು

06:30 AM Aug 31, 2018 | Team Udayavani |

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಸಭೆ ಶುಕ್ರವಾರ ಸಂಜೆ ನಡೆಯಲಿದ್ದು, ಈ
ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ನಗರಕ್ಕೆ ಆಗಮಿಸಲಿದ್ದಾರೆ. 

Advertisement

ಸಂಜೆ 6 ಗಂಟೆಗೆ ಕುಮಾರಕೃಪಾ ಅತಿಥಿಗೃಹದಲ್ಲಿ ಸಮನ್ವಯ ಸಮಿತಿ ಸಭೆ ನಡೆಯಲಿದ್ದು, ಅದಕ್ಕೂ ಮೊದಲು
ಕೆ.ಸಿ.ವೇಣುಗೋಪಾಲ್‌ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುವ ಸಾಧ್ಯತೆ ಇದೆ. 

ಇತ್ತೀಚೆಗೆ ಸಮ್ಮಿಶ್ರ ಸರ್ಕಾರದ ಬಗ್ಗೆ ಕಾಂಗ್ರೆಸ್‌ನಲ್ಲಿ ಎದ್ದಿರುವ ಅಪಸ್ವರ, ತಾವೇ ಮತ್ತೆ ಮುಖ್ಯಮಂತ್ರಿಯಾಗುತ್ತೇನೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ, ಅಧಿಕಾರಿಗಳ ವರ್ಗಾವಣೆ, ಲೋಕೋಪಯೋಗಿ ಸಚಿವ ಎಚ್‌.ಡಿ. ರೇವಣ್ಣ ಹಸ್ತಕ್ಷೇಪ ಹಾಗೂ ಸಮನ್ವಯ ಸಮಿತಿಗೆ ಎರಡೂ ಪಕ್ಷಗಳ ರಾಜ್ಯಾಧ್ಯಕ್ಷರನ್ನು ಸೇರಿಸುವ ಕುರಿತಂತೆಯೂ ಸಭೆಯಲ್ಲಿ
ಚರ್ಚೆ ನಡೆಯುವ ಸಾಧ್ಯತೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next