Advertisement
ಮೋದಿ ಜಗತ್ತಿನ ಪುಣ್ಯಾತ್ಮ. ಆತನ ದೇಶಭಕ್ತಿಗೆ ಎಲ್ಲರೂ ಬೆರಗಾಗಿದ್ದಾರೆ. ಭಾರತದ ಹೆಸರನ್ನು ವಿಶ್ವದಲ್ಲಿಯೇ ಪಸರಿಸಬೇಕು ಎಂಬ ಮಹತ್ವಾಕಾಂಕ್ಷಿ ಮೋದಿ ಅವರದು. ಅವರ 5 ವರ್ಷದ ಆಡಳಿತದಲ್ಲಿ ಭಾರತ ಶ್ರೀಮಂತ ರಾಷ್ಟ್ರವಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಈ ಮೊದಲು ಭಾರತ ಭ್ರಷ್ಟಾಚಾರದಲ್ಲಿ 110ನೇ ಸ್ಥಾನದಲ್ಲಿತ್ತು. ಈಗ ಅದು 20ನೇ ಸ್ಥಾನಕ್ಕೆ ಬಂದಿದೆ ಎಂದರು.
ನಾನು ಸಂಸದನಾದ ಮೇಲೆ ಕಡಿಮೆ ಅವಧಿಯಲ್ಲಿಯೇ ಅನೇಕ ಕೆಲಸಗಳನ್ನು ಮಾಡಿದ್ದೇನೆ. ಈಗಾಗಲೇ ತುಮರಿ ಸೇತುವೆಗೆ ಟೆಂಡರ್ ಕರೆಯಲಾಗಿದೆ. ಶಿವಮೊಗ್ಗ ಜಿಲ್ಲೆಯನ್ನು ಪ್ರವಾಸಿ ಕೇಂದ್ರವನ್ನಾಗಿ ಮಾಡಲು ಎಲ್ಲ ರೀತಿಯ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಸಿಂಹಧಾಮ ಮೇಲ್ದರ್ಜೆಗೆ ಏರಿದೆ. ತುಮಕೂರಿನಿಂದ ಹೊನ್ನಾವರದವರೆಗೆ ಸುಮಾರು 4800 ಕೋಟಿ ರೂ.ವೆಚ್ಚದಲ್ಲಿ ಚತುಷ್ಪಥ ರಸ್ತೆಯಾಗಲಿದೆ ಎಂದರು. ಕೇಂದ್ರ ಸರ್ಕಾರದ ಅನೇಕ ಯೋಜನೆಗಳು ರಾಜ್ಯದಲ್ಲೂ ವಿಸ್ತಾರಗೊಂಡಿವೆ. ಸುಮಾರು 8 ಕೋಟಿ ಕುಟುಂಬಗಳಿಗೆ ಉಜ್ವಲ್ ಯೋಜನೆ ಉಪಯೋಗವಾಗಿದೆ. ರಾಷ್ಟ್ರದಲ್ಲಿ ಸುಮಾರು 12 ಕೋಟಿ ಜನರಿಗೆ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗಿದೆ. ಹೀಗೆ ಕೇಂದ್ರದ ಸಾಧನೆಗಳು ಸಾಕಷ್ಟು ಇವೆ. ಇವೆಲ್ಲವನ್ನು ಗಮನಿಸಿ ರಾಜ್ಯದಲ್ಲೂ ಕೂಡ ಬಿಜೆಪಿಯ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
Related Articles
Advertisement
ಕಳೆದ 5 ವರ್ಷಗಳಲ್ಲಿ ದೇಶವನ್ನು ಅಭಿವೃದ್ಧಿಪಥದತ್ತ ಕೊಂಡೊಯ್ದಿದ್ದಿದ್ದಾರೆ. ಭಾರತದ ಕೀರ್ತಿ ಹಬ್ಬಿದೆ. ಭ್ರಷ್ಟಾಚಾರ ಮುಕ್ತ ಆಡಳಿತವಿದೆ. ಅವರ ಕೈ ಜೋಡಿಸಬೇಕಾಗಿದೆ. ಹಾಗಾಗಿಯೇ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರವೂ ಸೇರಿದಂತೆ ಇಡೀ ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ಪ್ರಮುಖರಾದ ಡಿ.ಎಸ್. ಅರುಣ್, ಎಸ್.ಎನ್. ಚನ್ನಬಸಪ್ಪ, ಎನ್.ಜೆ. ಸುಭಾಶ್, ಜ್ಞಾನೇಶ್ವರ್, ಎನ್.ಜಿ. ನಾಗರಾಜ್, ಮೇಯರ್ ಲತಾ ಗಣೇಶ್ ಮತ್ತಿತರರು ಇದ್ದರು.