Advertisement

ಮೋದಿಯವರ ಆಡಳಿತದಲ್ಲಿ ದೇಶ ಸುರಕ್ಷಿತವಾಗಿದೆ: ಉಮಾನಾಥ್ ಕೋಟ್ಯಾನ್

05:21 PM Apr 16, 2019 | keerthan |

ಮೂಡಬಿದ್ರೆ: ಕಳೆದ 5 ವರ್ಷದ ಸನ್ಮಾನ್ಯ ನರೇಂದ್ರ ಮೋದಿಯವರ ಆಡಳಿತದಲ್ಲಿ ದೇಶ ಸುರಕ್ಷಿತವಾಗಿದೆ. ವಿಶ್ವದಲ್ಲಿ ದೇಶದ ಘನತೆ ಗೌರವ ಮೆರೆದಿದೆ. ನೋಟ್ ಬ್ಯಾನ್ ಜಿ.ಎಸ್.ಟಿ ಯಂತಹ ದಿಟ್ಟ ನಿರ್ಧಾರದಿಂದ ದೇಶದ ಆರ್ಥಿಕ ವ್ಯವಸ್ಥೆ ಗಟ್ಟಿಯಾಗಿದೆ. ದೇಶದ ರಕ್ಷಣೆಗಾಗಿ ಸರ್ಜಿಕಲ್ ಸ್ಟ್ರೈಕ್, ಏರ್ ಸ್ಟ್ರೈಕ್ ಮೂಲಕ ಶತ್ರು ದೇಶ ಎಚ್ಚರಿಕೆ, ಅನ್ಯದೇಶದ ಜತೆ ಉತ್ತಮ ಬಾಂಧವ್ಯ, ಭಯೋತ್ಪಾದಕ ಚಟುವಟಿಕೆಗಳ ನಿಯಂತ್ರಣ, ಭ್ರಷ್ಟಾಚಾರ ರಹಿತ ಆಡಳಿತ, ಸಂಸದರ ಆಡಳಿತ ಗ್ರಾಮದ ಮೂಲಕ ಗಾಂಧೀಜಿಯವರ ರಾಮ ರಾಜ್ಯದ ಕಲ್ಪನೆಯ ಅನುಷ್ಠಾನ, ಜನಧನ್-ಸ್ವಚ್ಚ ಭಾರತದಿಂದ ತೊಡಗಿ ಆಯುಷ್ಮಾನ್ ಭಾರತ ಆರೋಗ್ಯ ವಿಮಾ ಯೋಜನೆಯವರಿಗೆ ಮಹಿಳೆಯರಿಗೆ ಸ್ವಾವಲಂಬಿ ಬದುಕು, ಮೂಲಭೂತ ಸೌಕರ್ಯಗಳ ಅಭಿವೃದ್ದಿ ಮುಂತಾದ ನೂರಾರು ಯೋಜನೆಗಳು, ಇವುಗಳಿಂದಾಗಿ ದೇಶದ ಜನತೆ ಮೋದಿಯವರನ್ನು ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಿಸಲು ಕಾತರಿಸುತ್ತಿದ್ದಾರೆ ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿದರು.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಹತ್ತು ವರ್ಷಗಳಿಂದ ಸಂಸದರಾಗಿರುವ ನಳೀನ್ ಕುಮಾರ್ ಕಟೀಲ್ ಒಬ್ಬ ಸಾಮಾನ್ಯ ಕಾರ್ಯಕರ್ತರಾಗಿ, ಸಂಸದರಾಗಿ, ಅಭಿವೃದ್ದಿಯ ಹರಿಕಾರನಾಗಿ, ತನ್ನ ಸಂಸದರ ಪ್ರದೇಶಾಭಿವೃದ್ದಿ ನಿಧಿಯನ್ನು ಸಮರ್ಪಕವಾಗಿ ಬಳಕೆ ಮಾಡಿದ ನಂ 1 ಸಂಸದನಾಗಿ ಪ್ರಧಾನಿಯವರ ಕಲ್ಪನೆಯ ಸಂಸದರ ಆದರ್ಶ ಗ್ರಾಮ ಯೋಜನೆಯ ಅನುಷ್ಠಾನದಲ್ಲಿ ರಾಜ್ಯದಲ್ಲೇ ಪ್ರಥಮ ಸಂಸದ ಎಂಬ ಹೆಗ್ಗಳಿಕೆಗೆ ಪಾತ್ರರಾಗಿ ಈ ಜಿಲ್ಲೆಯ ಹಾಗೂ ಕೇರಳ ರಾಜ್ಯದಲ್ಲಿಯೂ ಪಕ್ಷ ಸಂಘಟನೆಯ ಜವಾಬ್ದಾರಿಯನ್ನು ಸಮರ್ಥ ವಾಗಿ ನಿಭಾಯಿಸಿ, ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ-ಹೋರಾಟಗಳಿಗೆ ಮುಂಚೂಣಿಯಲ್ಲಿ ನಿಂತು ಹೋರಾಟವನ್ನು ಮಾಡಿ ಕಾರ್ಯಕರ್ತರ ಸಮಸ್ಯೆಗಳಿಗೆ ಧ್ವನಿಯಗಿ ಸ್ಪಂದಿಸಿದ್ದಾರೆ ಎಂದರು.

ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಈ ಜಿಲ್ಲೆಯಲ್ಲಿ ಏಳು ಶಾಸಕರನ್ನು ಭಾರತೀಯ ಜನತಾ ಪಾರ್ಟಿಯಿಂದ ಗೆಲ್ಲಿಸಿ ಜಿಲ್ಲೆಯ ಜನತೆ ಬಿ.ಜೆ.ಪಿ ಗೆ ಆರ್ಶೀವದಿಸಿದ್ದಾರೆ. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಈ ಜಿಲ್ಲೆಯನ್ನು ಮತ್ತಷ್ಟು ಅಭಿವೃದ್ದಿ ಪಡಿಸಲು ಈ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಮತ್ತೊಮ್ಮೆ ಗೆಲ್ಲಿಸುವಂತೆ ಜನತೆಯಲ್ಲಿ ವಿನಂತಿಸಿದರು.

ಈಗಾಗಲೇ ಮೂಡಬಿದ್ರೆ ಕ್ಷೇತ್ರದಲ್ಲಿ 2 ಹಂತದ ಮನೆ ಮನೆ ಪ್ರಚಾರ ಪೂರ್ಣಗೊಂಡಿದೆ. ಮೋದಿಯವರ ಮಂಗಳೂರು ಬೇಟಿಯ ಕಾರ್ಯಕ್ರಮ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ. ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿದೆ. ಮೂಡಬಿದ್ರೆ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ವಿಧಾನಸಭಾ ಚುನಾವಣೆಗಿಂತಲೂ ಹೆಚ್ಚಿನ ಅಂತರದ ಗೆಲುವು ಬಿ.ಜೆ.ಪಿಗೆ ಲಭಿಸಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು .

ಪತ್ರಿಕಾ ಗೋಷ್ಠಿಯಲ್ಲಿ ಕಿಶೋರ್ ರೈ , ಪ್ರಭಾ ಮಾಲಿನಿ , ಆರ್. ಸಿ. ನಾರಾಯಣ್ , ಸಂಧ್ಯಾ ವೆಂಕಟೇಶ್ , ಆದರ್ಶ್ ಶೆಟ್ಟಿ ಎಕ್ಕಾರ್ ಉಪಸ್ಥಿತರಿದ್ದರು .

Advertisement
Advertisement

Udayavani is now on Telegram. Click here to join our channel and stay updated with the latest news.

Next