ಕೊರಟಗೆರೆ: ಯಾವುದೇ ರಾಷ್ಟ್ರವಾದರೂ ಮುಖ್ಯವಾಗಿ ಆರೋಗ್ಯವಂತಾಗಿದ್ದರೆ ಮತ್ತು ಅಕ್ಷರಸ್ಥರಿದ್ದರೆ ಮಾತ್ರ ಆ ದೇಶ ಬಲಿಷ್ಠಗೊಳ್ಳಲು ಸಾಧ್ಯ ಎಂದು ಮಾಜಿ ಉಪಮುಖ್ಯಮಂತ್ರಿ, ಶಾಸಕ ಡಾ.ಜಿ ಪರಮೇಶ್ವರ್ ತಿಳಿಸಿದರು.
ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತುಮಕೂರು ಮತ್ತು ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ತಾಲ್ಲೂಕು ಆರೋಗ್ಯಧಿಕಾರಿಗಳ ಕಛೇರಿ, ಹಾಗೂ ಸಾರ್ವಜನಿಕ ಆಸ್ಪತ್ರೆ ಇವರ ವತಿಯಿಂದ 75 ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ತಾಲ್ಲೂಕು ಮಟ್ಟದ ಆರೋಗ್ಯ ಮೇಳ ಹಾಗೂ ಆರೋಗ್ಯ ಕಾರ್ಯಕ್ರಮಗಳ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಭಾರತಕ್ಕೆ ಸ್ವಾತಂತ್ರ್ಯ ಬಂದಂತಹ ಸಂದರ್ಭದಲ್ಲಿ ಪಂಚವಾರ್ಷಿಕ ಯೋಜನೆಯಲ್ಲಿ ಶಿಕ್ಷಣ, ಆರೋಗ್ಯ, ಆಹಾರ, ಕೈಗಾರಿಕೆ, ಕೃಷಿ ಈ ವಿಚಾರಗಳಿಗೆ ನಾವು ಹೆಚ್ಚಿನ ಆಧ್ಯತೆಕೊಡುವುದಕ್ಕೆ ಅಂದೇ ಭಾರತ ಸರ್ಕಾರ ತೀರ್ಮಾನಿಸಿತ್ತು. ಪ್ರಪಂಚದಲ್ಲಿ ಇಷ್ಟೊಂದು ಇಷ್ಟೊಂದು ವ್ಯವಸ್ಥಿವಾಗಿದೆ ಎಂದರೆ ಅದು ನಮ್ಮ ಭಾರತ ದೇಶ ಒಂದೇ. ಅಂದೇ ಹೆಚ್ಚಿನ ಪ್ರಮಾಣವನ್ನು ಆರೋಗ್ಯಕ್ಕೆ ಒತ್ತುಕೊಡುವುದರ ಮುಖಾಂತರ ಸ್ವಾವಲಂಭಿಗಳಾಗಿದ್ದೇವೆ ಎಂದು ಹೇಳಿದರು.
ನಮ್ಮ ಕರ್ನಾಟಕ ರಾಜ್ಯದಲ್ಲಿ ಅಂದಾಜು ೬೦೦೦ ಖಾಸಗಿ ಆರೋಗ್ಯ ಕೇಂದ್ರಗಳು ಇವೆ. ಮೊದಲು ಇಷ್ಟೊಂದು ವ್ಯವಸ್ಥಿತವಾಗಿ ಇರಲಿಲ್ಲ. ಕೊರೊನಾ ಬಂದಂತಹ ಸಂದರ್ಭದಲ್ಲಿ ವೈದ್ಯರು, ಆಸ್ಪತ್ರೆ ಸಿಬ್ಬಂದಿಗಳಿಂದ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು ಪಟ್ಟಣ ಹಾಗೂ ತಾಲ್ಲೂಕಿನ ಗ್ರಾಮಗಳ ಮನೆ ಮನೆಗೆ ಹೋಗಿ ಕಾಯಿಲೆಗೆ ಬಗ್ಗೆ ತಿಳಿಸಿ ಅವರಿಗೆ ದೈರ್ಯ ತುಂತುವಂತಹ ಕೆಲಸ ಮಾಡುತ್ತಿದ್ದರು. ಅವರ ಕಾರ್ಯ ವೈಖರಿಯಂದಲೇ ನಾವು ಇಂದಿಗೂ ಆರೋಗ್ಯವಾಗಿರುವುದು. ಕೊರೊನಾ ಸಂದರ್ಭದಲ್ಲಿ ಸೋಂಕು ಹರಡುವಿಕೆ ಕಡಿಮೆಯಾಗಿದೆ ಅದು ಇವರಿಂದಲೇ ಮಾತ್ರ. ಇಂತಹ ಕಾರ್ಯಕ್ರಮ ತಾಲ್ಲೂಕಿನಲ್ಲಿ ವರ್ಷಕ್ಕೆ ೧ ಬಾರಿ ಮಾಡುವುದಕ್ಕಿಂತ ೩ರಿಂದ ೪ ಬಾರಿ ಕಾರ್ಯಕ್ರಮ ಆಯೋಜನೆ ಮಾಡಿದರೆ ಇನ್ನಷ್ಟು ಆರೋಗ್ಯವಂತರಾಗಿರಲು ಸಾಧ್ಯ, ಇಂದಿನ ಕಾರ್ಯಕ್ರಮವನ್ನು ಸಾರ್ವಜನಿಕರು ಸದ್ಭಳಕೆ ಮಾಡಿಕೊಂಡು ಆರೋಗ್ಯವಂತರಾಗಿ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಧುಗಿರಿ ಉಪವಿಭಾಗದ ಜಂಟಿ ನಿದೇರ್ಶಕರಾದ ಡಾ.ಮುರುಳಿಕೃಷ್ಣ ಮಾತನಾಡಿ, ಜನರು ತಮ್ಮ ಆರೋಗ್ಯದ ಬಗ್ಗೆ ಜಾಗೃತಿ ವಹಿಸಿ ಇಂತಹ ಆರೋಗ್ಯ ಮೇಳಗಳ ಸಹುಪಯೋಗ ಪಡೆದುಕೊಳ್ಳಿ ಎಂದರು.
ತಹಶೀಲ್ದಾರ್ ನಹೀದಾ ಜಮ್ ಜಮ್ ಮಾತನಾಡಿ, ದೇಶ ಹಾಗೂ ಸಮಾಜ ಸುಭದ್ರವಾಗಿರಲು ಆರೋಗ್ಯ ಬಹಳ ಮುಖ್ಯ ಈ ನಿಟ್ಟಿನಲ್ಲಿ ಸರ್ಕಾರ ಆರೋಗ್ಯ ಮೇಳ ಎಂಬ ಕಾರ್ಯಕ್ರಮವನ್ನು ಜಾರಿಗೊಳಿಸಿದೆ. ಪ್ರತಿಯೊಂದು ಖಾಯಿಲೆಗೂ ಇದರ ಸೂಕ್ತ ಚಿಕತ್ಸೆ ನೀಡಲಾಗುತ್ತದೆ ಇದನ್ನು ಸಾರ್ವಜನಿಕರು ಸದ್ಭಳಕೆ ಮಾಡಿಕೊಳ್ಳಿ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಶ್ರೀಕಾವ್ಯ ರಮೇಶ್ ಉಪಾಧ್ಯಕ್ಷೆ ಶ್ರೀಭಾರತಿ ಸಿದ್ದಮಲ್ಲಪ್ಪ, ತಾಪಂ ಕಾರ್ಯನಿರ್ವಾಹಣಾಧಿಕಾರಿ ದೊಡ್ಡಸಿದ್ದಯ್ಯ, ತಾಲ್ಲೂಕು ಆರೋಗ್ಯಧಿಕಾರಿ ಡಾ.ವಿಜಯ್‌ಕುಮಾರ್, ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಪುಷ್ವಾ. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅಂಬಿಕಾ, ಜಿಲ್ಲಾ ಸರ್ವೇಲೆನ್ಸ್ ಅಧಿಕಾರಿ ಡಾ.ಮೋಹನ್‌ದಾಸ್, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಕೇಶವರಾಜು, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಎನ್ ಪದ್ಮಿನಿ. ಹಾಗೂ ತಾಲ್ಲೂಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರು ಹಾಜರಿದ್ದರು.