Advertisement

ದೇಶದ ಜನಸಂಖ್ಯೆ ನಿಯಂತ್ರಣ ಅವಶ್ಯ

09:54 AM Aug 03, 2020 | Suhan S |

ಮಾಗಡಿ: ಇರುವುದೊಂದೇ ಭೂಮಿ, ಈ ಭೂಮಿಯ ಸಂಪತ್ತಿನ ಸಮತೋಲನವನ್ನು ಕಾಪಾಡಬೇಕಾದರೆ ಜನಸಂಖ್ಯೆ ನಿಯಂತ್ರಣ ಅತ್ಯವಶ್ಯಕ ಎಂದು ತಾಪಂ ಅಧ್ಯಕ್ಷ ನಾರಾಯಣಪ್ಪ ತಿಳಿಸಿದರು.

Advertisement

ತಾಪಂ ಸಭಾಂಗಣದಲ್ಲಿ ಏರ್ಪಡಿಸಿದ್ದ ವಿಶ್ವ ಜನಸಂಖ್ಯೆ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ದಿನೇ ದಿನೆ ಜನಸಂಖ್ಯೆ ಸ್ಫೋಟಗೊಳ್ಳುತ್ತಿದೆ. ಜನಸಂಖ್ಯೆ ನಿಯಂತ್ರಣಕ್ಕೆ ಸರ್ಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸಿ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ ಎಂದರು. ವಿಜ್ಞಾನ, ತಂತ್ರಜ್ಞಾನದ ಮೂಲಕವೂ ಜನಸಂಖ್ಯೆ ನಿಯಂತ್ರಣಗೊಳಿಸುವಲ್ಲಿ ಶ್ರಮಿಸುತ್ತಿದೆ. ಜನರೂ ಇರುವ ಭೂಮಿ, ನೀರನ್ನು ಮಾಲಿನ್ಯಗೊಳಿಸದೆ ಸಮರ್ಪಕವಾಗಿ ಬಳಸಿಕೊಳ್ಳಬೇಕು. ಈ ಮೂಲಕ ಆರೋಗ್ಯ ಸುಧಾರಣೆಗೆ ಒತ್ತು ನೀಡಬೇಕೆಂದರು. ತಹಶೀಲ್ದಾರ್‌ ಬಿ.ಜಿ.ಶ್ರೀನಿವಾಸ್‌ ಪ್ರಸಾದ್‌, ಜನಸಂಖ್ಯೆ ಹೆಚ್ಚಾದಷ್ಟು ನಿರುದ್ಯೋಗ ಸಮಸ್ಯೆ ಉಂಟಾಗುತ್ತದೆ. ಸರ್ಕಾರವೂ ಸೌಕರ್ಯ ಒದಗಿಸಲಾಗದ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ಹೀಗಾಗಿ ಜನಸಂಖ್ಯೆ ನಿಯಂತ್ರಣಕ್ಕೆ ಎಲ್ಲರ ಸಹಕಾರ ಬೇಕಿದೆ ಎಂದು ಮನವಿ ಮಾಡಿದರು.

ತಾಪಂ ಇಒ ಟಿ.ಪ್ರದೀಪ್‌, ಅಭಿವೃದ್ಧಿಶೀಲ ರಾಷ್ಟ್ರವಾಗಬೇಕಾದರೆ ಜನಸಂಖ್ಯೆ ನಿಯಂತ್ರಣವಾಗಬೇಕು. ಈ ಕುರಿತು ಜನರಲ್ಲಿಯೂ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು. ಆರೋಗ್ಯ ಇಲಾಖೆ ತಾಲೂಕು ಆರೋಗ್ಯಾಧಿಕಾರಿ ಡಾ.ಸತೀಶ್‌, 2048ಕ್ಕೆ ಭಾರತ ಜನಸಂಖ್ಯೆಯಲ್ಲಿ ವಿಶ್ವದಲ್ಲಿಯೇ ಪ್ರಥಮ ಸ್ಥಾನಕ್ಕೆ ಏರಲಿದೆ ಎಂದರು.

ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಶಿಕ್ಷಣಾಧಿಕಾರಿ ಆರ್‌.ರಂಗನಾಥ್‌, ಆರೋಗ್ಯ ಸಹಾಯಕ ಶಿವಸ್ವಾಮಿ ಮತ್ತಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next