Advertisement

Brijesh Chowta ದೇಶಕ್ಕೆ ಸೈನಿಕನ ಮನಃಸ್ಥಿತಿಯ ಚಿಂತನೆ ಅಗತ್ಯ

10:34 PM Aug 14, 2024 | Team Udayavani |

ಸವಣೂರು: ಸೈನಿಕನ ಮಾನಸಿಕತೆಯು ವಿಶೇಷವಾಗಿದ್ದು, ದೇಶದ ವಿಚಾರ ಬಂದಾಗ ಸ್ವಾರ್ಥವನ್ನು ಮರೆತು ಇಡೀ ಸಮಾಜವನ್ನು ಒಂದಾಗಿ ಕೊಂಡೊಯ್ಯುವ ಮನೋಭಾವ ಸೈನಿಕರದ್ದಾಗಿದೆ. ಸೈನಿಕನಾದವ ಜೀವನಪೂರ್ತಿ ಅಂಥ ಮನಃಸ್ಥಿತಿಯನ್ನು ಬೆಳೆಸಿಕೊಳ್ಳುತ್ತಾನೆ. ಆದರೆ ಅದನ್ನು ಅರ್ಥ ಮಾಡಿಕೊಳ್ಳುವಲ್ಲಿ ಸಮಾಜ ವಿಫಲವಾಗಿದೆ. ದೇಶಕ್ಕೆ ಸೈನಿಕನ ಮನಃಸ್ಥಿತಿಯ ಚಿಂತನೆಯ ಅಗತ್ಯ ಇದೆ ಎಂದು ದ.ಕ. ಸಂಸದ ಕ್ಯಾ| ಬ್ರಿಜೇಶ್‌ ಚೌಟ ಹೇಳಿದರು.

Advertisement

ಅವರು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಸಭಾಂಗಣದಲ್ಲಿ ಬುಧವಾರ ಎಸ್‌.ಎನ್‌.ಆರ್‌. ರೂರಲ್‌ ಎಜ್ಯುಕೇಶನ್‌ ಟ್ರಸ್ಟ್‌ ಪ್ರವರ್ತಿತ, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸ್ಥಾಪಕ ಶೀಂಟೂರು ನಾರಾಯಣ ರೈಯವರ 13ನೇ ವರ್ಷದ ಸ್ಥಾಪಕರ ದಿನಾಚರಣೆ, ಶೀಂಟೂರು ಸ್ಮತಿ, ಶಿಷ್ಯವೇತನ ವಿತರಣೆ ಹಾಗೂ ಸಮ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸ್ವಾತಂತ್ರ್ಯ ಪೂರ್ವದಲ್ಲಿ ಸೈನಿಕರಾಗಿದ್ದ ಶೀಂಟೂರು ನಾರಾಯಣ ರೈ ಅವರ ಹೆಸರಿನಲ್ಲಿ ವಿದ್ಯಾದಾನ ಮಾಡುತ್ತಿರುವುದು ಪ್ರೇರಣಾದಾಯಿಯಾಗಿದೆ ಎಂದರು.

ಶೀಂಟೂರು ಸಂಸ್ಮರಣೆ ಮಾಡಿದ ಕಸಾಪ ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಚಂದ್ರಶೇಖರ ಪೇರಾಲು ಅವರು, ಶೀಂಟೂರು ನಾರಾಯಣ ರೈಗಳು ಯೋಧ, ಶಿಕ್ಷಕ, ಸಹಕಾರಿ, ಕೃಷಿಕ ಹೀಗೆ ಓರ್ವ ವ್ಯಕ್ತಿ ಹಲವು ಕ್ಷೇತ್ರಗಳಲ್ಲಿ ಸಾಧಕರಾಗಿದ್ದರು. ಸ್ವಾತಂತ್ರ್ಯ ಹೋರಾಟ ಮತ್ತು ಸಹಕಾರ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಅವರು ಸಹಕಾರ ಕ್ಷೇತ್ರದ ಬಗ್ಗೆ ಅಲ್ಲಲ್ಲಿ ಭಾಷಣ ಮಾಡುತ್ತಿದ್ದರು. ದೇಶಕ್ಕೆ ಸ್ವಾತಂತ್ರ್ಯ ನೀಡುತ್ತೇವೆ ಎಂಬ ಬ್ರಿಟಿಷರ ಭರವಸೆ ಮೇರೆಗೆ ಸೇನೆಗೆ ಸೇರಿಕೊಂಡಿದ್ದರು. ಇದು ಅವರ ಸ್ವಾತಂತ್ರ್ಯ ಪ್ರೇಮಕ್ಕೆ ಸಾಕ್ಷಿಯಾಗಿದೆ. ಸ್ವಾತಂತ್ರ್ಯದ ಬಳಿಕ ಗಾಂಧೀಜಿ ಪ್ರೇರಣೆಯಿಂದ ಕೃಷಿಯಲ್ಲಿ ತೊಡಗಿಕೊಂಡಿದ್ದರು. ಕೃಷಿಯಲ್ಲೂ ತಾಂತ್ರಿಕತೆ ಮತ್ತು ಸಹಕಾರ ತತ್ವವನ್ನು ಅಳವಡಿಸಿಕೊಂಡಿದ್ದರು. ಪುತ್ತೂರಿನ ಬೋರ್ಡ್‌ ಹೈಸ್ಕೂಲ್‌ನಲ್ಲಿ ಶಿಕ್ಷಕರಾಗಿದ್ದ ಸಂದರ್ಭದಲ್ಲಿ ಮೊದಲ ಬಾರಿಗೆ ಶಿಕ್ಷಕರ ದತ್ತಿನಿಧಿಯನ್ನು ಆರಂಭಿಸಿದ ಹೆಗ್ಗಳಿಕೆ ನಾರಾಯಣ ರೈಗಳಿಗೆ ಸಲ್ಲುತ್ತದೆ ಎಂದರು.

ಈ ಸಂದರ್ಭ ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ನಿವೃತ್ತ ಮುಖ್ಯಗುರು ರೂಪಕಲಾ ಕೆ. ಅವರನ್ನು ಶೀಂಟೂರು ಸಮ್ಮಾನದೊಂದಿಗೆ ಗೌರವಿಸಲಾಯಿತು.

Advertisement

ಸೇನೆಗೆ ನೀಡುವ ಗೌರವಾರ್ಥ ಸಂಸದ ಕ್ಯಾ| ಬ್ರಿಜೇಶ್‌ ಚೌಟ ಅವರನ್ನು ಸನ್ಮಾನಿಸಲಾಯಿತು. ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾರ್ಥಿಗಳಾದ ಮಹಮ್ಮದ್‌ ಝಯಾನ್‌, ಮನ್ವಿತ್‌ ಎಚ್‌ ಆಚಾರ್ಯ, ಕೃಪಾಲಿ ಎಸ್‌.ಡಿ., ಜಶ್ವಿ‌ತ್‌ ಕೆ., ಆಝಿ¾ಯತ್‌ ಸಫಾ, ಕೆ. ಯಶಸ್ವಿ ರೈ, ಯಶ್ವಿ‌ನಿ ಪಿ. ಆರ್‌., ಶಿಲ್ಪಾ ಎನ್‌. ಮತ್ತು ಶೀಲಾ ಕೆ. ಡಿ. ಅವರಿಗೆ ಶೀಂಟೂರು ಶಿಷ್ಯವೇತನ ನೀಡಿ ಪುರಸ್ಕರಿಸಲಾಯಿತು.

ವಿದ್ಯಾರಶ್ಮಿ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿ‌ನ್‌ ಎಲ್‌. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ದ.ಕ. ಮತ್ತು ಉಡುಪಿ ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ನಡುಮನೆ, ಬಳ್ಳಾರಿ ಕುಮಾರಸ್ವಾಮಿ ಮಿನರಲ್‌ ಎಕ್ಸ್‌ಪೋರ್ಟ್ಸ್ ಮಾಲಕ ಮಲಾರುಬೀಡು ರವೀಂದ್ರನಾಥ ಆಳ್ವ, ಗುಜರಾತ್‌ನ ಗ್ರೀನ್‌ ಹೀರೋ ಆಫ್‌ ಇಂಡಿಯಾದ ಫಾರೆಸ್ಟ್‌ ಕ್ರಿಯೇಟರ್‌ನ ಸಹ ಸ್ಥಾಪಕ ಡಾ| ಆರ್‌.ಕೆ. ನಾಯರ್‌ ಮಾತನಾಡಿದರು.

ಸವಣೂರು ಎಸ್‌.ಎನ್‌.ಆರ್‌.ರೂರಲ್‌ ಎಜುಕೇಶನ್‌ ಟ್ರಸ್ಟ್‌ನ ವಿಶ್ವಸ್ಥರಾದ ಎನ್‌. ಸುಂದರ ರೈ ನಡುಮನೆ, ಸುಧಾಕರ ರೈ ಎನ್‌., ರಶ್ಮೀ ಅಶ್ವಿ‌ನ್‌ ಶೆಟ್ಟಿ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ| ನಾರಾಯಣ ಮೂರ್ತಿ ಕೆ., ವಿದ್ಯಾರಶ್ಮಿ ಸ್ವತಂತ್ರ ಪ.ಪೂ. ಕಾಲೇಜಿನ ಪ್ರಾಂಶುಪಾಲ ಸೀತಾರಾಮ ಕೇವಳ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಎಸ್‌. ಆಳ್ವ ಮತ್ತಿತರರು ಉಪಸ್ಥಿತರಿದ್ದರು.

ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಸಹಕಾರಿ ರತ್ನ ಸವಣೂರು ಕೆ. ಸೀತಾರಾಮ ರೈ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಎನ್‌. ಜಯಪ್ರಕಾಶ್‌ ರೈ ವಂದಿಸಿದರು. ಉಪನ್ಯಾಸಕಿ ಪ್ರತಿಭಾ ಎಸ್‌. ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next