Advertisement

ಕ್ರಿಮಿನಲ್‌ ಕೇಸ್‌ ನಿಯಂತ್ರಣ: ಪೊಲೀಸರು ವಿಫ‌ಲ

03:45 AM Jan 17, 2017 | Harsha Rao |

ಬೆಂಗಳೂರು: ಇತ್ತೀಚೆಗೆ ಮದ್ದೂರು ತಾಲೂಕಿನ ತೊಪ್ಪನಹಳ್ಳಿ ಗ್ರಾಮದಲ್ಲಿ ನಡೆದ ಸರಣಿ ಕೊಲೆ ಪ್ರಕರಣವನ್ನು
ಉದಾಹರಣೆಯಾಗಿ ಪ್ರಸ್ತಾಪಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯದಲ್ಲಿ ಅಪರಾಧ ಪ್ರಕರಣಗಳ
ನಿಯಂತ್ರಣದಲ್ಲಿ ಪೊಲೀಸ್‌ ವೈಫ‌ಲ್ಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement

ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಪೊಲೀಸ್‌ ಪ್ರಧಾನ ಕಚೇರಿಯಲ್ಲಿ ಸೋಮವಾರ ನಡೆದ ಪೊಲೀಸ್‌ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು. ಕೆಲವು ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ಪೊಲೀಸ್‌ ಇಲಾಖೆಗೆ ಕೆಟ್ಟ ಹೆಸರು ಬರುತ್ತಿದೆ. ಅದನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ ಎಂದು ಹಿರಿಯ ಅಧಿಕಾರಿಗಳಿಗೆ ತಾಕೀತು ಮಾಡಿದರು
ಎನ್ನಲಾಗಿದೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸ್‌ ಇಲಾಖೆ ಜನಸ್ನೇಹಿ ಇಲಾಖೆ. ಆದರೆ, ಕೆಲವು ಅಧಿಕಾರಿ ಮತ್ತು ಸಿಬ್ಬಂದಿಯಿಂದ ಇಲಾಖೆಗೆ ಕೆಟ್ಟ ಹೆಸರು ಬರುತ್ತಿದೆ. ಮದ್ದೂರಿನ ತೊಪ್ಪನಹಳ್ಳಿಯಲ್ಲಿ ನಡೆದ ಸರಣಿ ಕೊಲೆ ಪ್ರಕರಣದಲ್ಲಿ ಪೊಲೀಸರ ವೈಫ‌ಲ್ಯ ಎದ್ದು ಕಾಣುತ್ತಿದೆ. ಅಲ್ಲಿನ ಇನ್‌Õಪೆಕ್ಟರ್‌ ಮೊದಲೇ ಎಚ್ಚೆತ್ತಿದ್ದರೆ, ಸರಣಿ ಕೊಲೆ ತಡೆಯಬಹುದಿತ್ತು. ಘಟನೆಯಲ್ಲಿ ತಳಮಟ್ಟದ ಅಧಿಕಾರಿಯಿಂದ ಎಸ್ಪಿ ಹಂತದ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ.
ಇಲ್ಲಿ ಕೇವಲ ಇನ್ಸ್‌ಪೆಕ್ಟರ್‌ ದರ್ಜೆಯ ಅಧಿಕಾರಿಗಳನ್ನು ಮಾತ್ರ ಹೊಣೆ ಮಾಡಲು ಸಾಧ್ಯವಿಲ್ಲ ಎಂದು ಹರಿಹಾಯ್ದರು.
ಪೊಲೀಸ್‌ ಇಲಾಖೆಯನ್ನು ಕೆಲ ಸಾರ್ವಜನಿಕರು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ಕೆ.ಜಿ.ಹಳ್ಳಿಯಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವೇ ಸಾಕ್ಷಿ. ಇಂತಹ ಘಟನೆ ಮರುಕಳಿಸಬಾರದು ಎಂದು ಎಚ್ಚರಿಸಿದರು. ಕಮ್ಮನಹಳ್ಳಿ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪ್ರಕರಣ ದಾಖಲಾದ ಕೂಡಲೇ ಆರೋಪಿಗಳನ್ನು ಬಂಧಿಸಿರುವುದಕ್ಕೆ ಶ್ಲಾಘನೆ
ವ್ಯಕ್ತಪಡಿಸಿದರು.

ಬೆಂಗಳೂರಿನಂತಹ ಮಹಾನಗರಗಳಲ್ಲಿ ಅಪರಾಧ ಪ್ರಕರಗಳು ಹೆಚ್ಚು ನಡೆಯುತ್ತಿರುತ್ತವೆ. ರೌಡಿಗಳು, ಕಳ್ಳರ ಬಗ್ಗೆ ಆಯಾ ಠಾಣೆಯ ಸಿಬ್ಬಂದಿಗೆ ಮಾಹಿತಿ ಇರುತ್ತದೆ. ಸಿಬ್ಬಂದಿಯಿಂದ ಹಿಡಿದು ಡಿಸಿಪಿ ಮಟ್ಟದ ಅಧಿಕಾರಿವರೆಗೆ ರೌಡಿ ಮತ್ತು ಕಳ್ಳರ ಚಲನವಲನದ ಬಗ್ಗೆ ನಿರಂತರ ನಿಗಾ ಇಡಬೇಕು. ಆ ಮೂಲಕ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು
ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಸೂಚಿಸಿದರು. ಪೊಲೀಸರು ದಕ್ಷತೆ, ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ ಅಪರಾಧ ಪ್ರಕರಣಗಳನ್ನು ತಡೆಗಟ್ಟಬಹುದು. ಅಲ್ಲದೆ, ಅಪರಾಧಿಗಳಿಗೆ ಶಿಕ್ಷೆ ಕೊಡಿಸಬಹುದು.

ಜನಸ್ನೇಹಿ ಇಲಾಖೆಯಾಗಿರುವ ಪೊಲೀಸ್‌ ಇಲಾಖೆಯಲ್ಲಿ ಸಿಬ್ಬಂದಿ ಜನರ ನಂಬಿಕೆ, ವಿಶ್ವಾಸ ಗಳಿಸಬೇಕಾದರೆ ಜಾಗರೂಕರಾಗಿ ಕೆಲಸ ನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು.

Advertisement

ಮಾಧ್ಯಮಗಳಲ್ಲಿ ಅಪರಾಧ ಪ್ರಕರಣಗಳ ಮಾರಾಟವಾಗುತ್ತಿದೆ. ಸಾರ್ವಜನಿಕರು ಅಪರಾಧ ಪ್ರಕರಣಗಳ ಬಗ್ಗೆ ಪೊಲೀಸರಿಗೆ ದೂರು ನೀಡುವ ಬದಲು ಮಾಧ್ಯಮಗಳ ಮುಂದೆ ಹೋಗುತ್ತಿದ್ದಾರೆ ಎಂದು ಅವರು ಇದೇ ಸಂದರ್ಭದಲ್ಲಿ ಬೇಸರ ವ್ಯಕ್ತಪಡಿಸಿದರು.

ಗೃಹ ಸಚಿವ ಡಾ.ಜಿ.ಪರಮೇಶ್ವರ್‌, ಗೃಹ ಸಚಿವರ ಸಲಹೆಗಾರ ಕೆಂಪಯ್ಯ, ಡಿಜಿಪಿ ಓಂ ಪ್ರಕಾಶ್‌ ಸೇರಿದಂತೆ ಹಿರಿಯ
ಪೊಲೀಸ್‌ ಅಧಿಕಾರಿಗಳು ಹಾಜರಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next