Advertisement

ಅತ್ಯಾಚಾರ ಮಾಡಿ ಬೆಂಕಿ ಹಚ್ಚಿದ ಪಾತಕಿ

10:32 PM Apr 08, 2023 | Team Udayavani |

ಜೈಪುರ: ದಲಿತ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ, ಬೆಂಕಿ ಹಚ್ಚಿರುವ ಘಟನೆ ರಾಜಸ್ಥಾನದ ಬಾರ್ಮರ್‌ ಜಿಲ್ಲೆಯಲ್ಲಿ ನಡೆದಿದೆ. ಶೇ.40ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿರುವ ಮಹಿಳೆಯನ್ನು ಜೋಧಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ಶಕೂರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಪಚ್‌ಪದ್ರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸಂತ್ರಸ್ತೆಯ ಮನೆಯ ಸಮೀಪವೇ ಆರೋಪಿ ಶಕೂರ್‌ ನೆಲೆಸಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದೇ ಇರುವ ಸಮಯದಲ್ಲಿ ಗುರುವಾರ ಮನೆಗೆ ನುಗ್ಗಿದ ಶಕೂರ್‌, ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ನಂತರ ಯಾವುದೋ ರಾಸಾಯನಿಕ ಎರಚಿ ಬೆಂಕಿ ಹಚ್ಚಿದ್ದಾನೆ. ಆರೋಪಿಯನ್ನು ಬಂಧಿಸಿದ್ದು, ಐಪಿಸಿ ಹಾಗೂ ಎಸ್‌ಸಿಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next