ಬೆಂಗಳೂರು: ಸಂಪುಟದಲ್ಲಿ ಸ್ಥಾನಮಾನ ಸಿಗದೆ ಅತೃಪ್ತಗೊಂಡಿರುವ ಸತೀಶ್ ಜಾರಕಿಹೊಳಿ ಹಾಗೂ ಸಚಿವ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿರುವ ರಮೇಶ್ ಜಾರಕಿಹೊಳಿ ಸಹೋದರರ ನಡೆ ಕುತೂಹಲ ಮೂಡಿಸಿದೆ.
ಒಂದೆಡೆ, ಸತೀಶ್ ಜಾರಕಿಹೊಳಿ ಮತ್ತೆ ಸಂಪುಟಕ್ಕೆ ಬರಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದ್ದರೆ ಮತ್ತೂಂದೆಡೆ ಸಂಪುಟದಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳುವ ಸಲುವಾಗಿಯೇ ರಮೇಶ್ ಜಾರಕಿಹೊಳಿ 10 ಶಾಸಕರ ಜತೆ ಅಜ್ಮಿàರ್ ಪ್ರವಾಸ ಕೈಗೊಂಡಿದ್ದಾರೆ. ಇದು ಒಂದು ರೀತಿಯ ಶಕ್ತಿ ಪ್ರದರ್ಶನ ಎಂದು ಹೇಳಲಾಗುತ್ತಿದೆ.
ಈ ಮಧ್ಯೆ, ಉತ್ತರ ಕರ್ನಾಟಕಕ್ಕೆ ಉಪ ಮುಖ್ಯಮಂತ್ರಿ ಸ್ಥಾನದ ಬೇಡಿಕೆ ಇಟ್ಟಿರುವ ಸತೀಶ್ ಜಾರಕಿಹೊಳಿ ತಮ್ಮ ಬೆಂಬಲಿಗರಿಗೂ ಸಂಪುಟದಲ್ಲಿ ಸ್ಥಾನ ಕಲ್ಪಿಸಬೇಕು ಎಂದು ಬಿಗಿ ಪಟ್ಟು ಹಿಡಿದಿದ್ದಾರೆ. ಆಷಾಢ ಮಾಸದ ನಂತರ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಪ್ಪಿಗೆ ನೀಡಿರುವುದರಿಂದ ಅಲ್ಲಿವರೆಗೂ ಕಾದು ನೋಡಲು ಸತೀಶ್ ತೀರ್ಮಾನಿಸಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಹೈಕಮಾಂಡ್ ತಮ್ಮ ಬೇಡಿಕೆ ಈಡೇರಿಸದಿದ್ದರೆ ಸತೀಶ್ ಜಾರಕಿಹೊಳಿ ಯಾವ ನಿಲುವು ತಾಳುತ್ತಾರೆ ಎಂಬುದು ನಿಗೂಢವಾಗಿದೆ. ಮತ್ತೂಂದು ಮೂಲಗಳ ಪ್ರಕಾರ, ಅವರನ್ನು ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ಬಿಜೆಪಿ ನಾಯಕರು ಸತೀಶ್ ಜಾರಕಿಹೊಳಿ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿದೆ.
ಸತೀಶ್ ಬಿಜೆಪಿಗೆ ಹೋದರೆ ಬಿಜೆಪಿಯಲ್ಲಿರುವ ಅವರ ಮತ್ತೂಬ್ಬ ಸಹೋದರ ಬಾಲಚಂದ್ರ ಜಾರಕಿಹೊಳಿ ಅವರನ್ನು ಕಾಂಗ್ರೆಸ್‌ಗೆ ಸೆಳೆಯುವ ಪ್ರಯತ್ನ ಮತ್ತೂಂದು ಕಡೆ ನಡೆಯುತ್ತಿದೆ. ಅವರನ್ನು ಕಾಂಗ್ರೆಸ್‌ಗೆ ಕರೆತಂದು 2019ರ ಲೋಕಸಭೆ ಚುನಾವಣೆಗೆ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸುರೇಶ್ ಅಂಗಡಿ ವಿರುದಟಛಿ ಸ್ಪರ್ಧೆಗೆ ಇಳಿಸುವ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.
ಮೇಲ್ನೋಟಕ್ಕೆ ಕಾಂಗ್ರೆಸ್‌ನಲ್ಲಿರುವ ಜಾರಕಿಹೊಳಿ ಸಹೋದರರು ಗುಟ್ಟು ಬಿಟ್ಟು ಕೊಡುತ್ತಿಲ್ಲ. ಅಸಮಾಧಾನ ಸಹ ಹೊರ ಹಾಕುತ್ತಿಲ್ಲ. ಸಂಪುಟ ಸೇರ್ಪಡೆ ವಿಚಾರದಲ್ಲಿ 2 ವರ್ಷಗಳ ನಂತರ ನನಗೆ ಅವಕಾಶ ಕೊಡುವ ಭರವಸೆ ಸಿಕ್ಕಿದೆ. ಹೀಗಾಗಿ, ನಾನು ಕಾಯುತ್ತೇನೆ ಎಂದು ಸತೀಶ್ ಹೇಳಿದರೆ, ಸತೀಶ್ ಸಚಿವ ಸ್ಥಾನ ಬೇಕು ಎಂದರೆ ಬಿಟ್ಟು ಕೊಡಲು ಸಿದ್ಧ ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಇದರ ನಡುವೆಯೂ ಸಹೋದರರ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ ಎನ್ನಲಾಗಿದೆ.
ಒಟ್ಟಾರೆ, ಆಷಾಢ ಮಾಸದ ನಂತರ ಬೆಳಗಾವಿ ಮಟ್ಟಿಗೆ ಒಂದಷ್ಟು ರಾಜಕೀಯ ಬೆಳವಣಿಗೆಗಳು ನಡೆಯಲಿವೆ ಎಂದು ಹೇಳಲಾಗುತ್ತಿದ್ದು ಅದು ರಾಜ್ಯ ರಾಜಕಾರಣದ ಮೇಲೆ ಯಾವ ರೀತಿಯ ಪರಿಣಾಮ ಬೀರಲಿದೆ ಎಂಬುದು ಕಾದು ನೋಡಬೇಕಾಗಿದೆ.