Advertisement

ಕುತೂಹಲ ಮೂಡಿಸಿದ ಸೂರ್ಯ ವೃತ್ತ

01:29 PM Apr 15, 2021 | Team Udayavani |

ದೊಡ್ಡಬಳ್ಳಾಪುರ: ಯುಗಾದಿಹಬ್ಬದ ದಿನದಂದು ಸೂರ್ಯನ ಸುತ್ತಲೂ ವೃತ್ತದ ಆಕೃತಿಯೊಂದು ಆವರಿಸಿ, ಆಗಸದಲ್ಲಿ ಅಪರೂಪದ ವಿದ್ಯಮಾನವೊಂದು ಗೋಚರಿಸಿತು. ಸುಮಾರು 11ಗಂಟೆ ಸುಮಾರಿಗೆ ಆರಂಭವಾಗಿ ಸುಮಾರು 2 ಗಂಟೆಗಳ ಕಾಲ ಗೋಚರಿಸಿದ ಈ ವಿದ್ಯಮಾನವನ್ನುನೋಡಿದ ಜನ ಪುಳಕಿತರಾಗಿ ಮೊಬೈಲ್‌,ಕ್ಯಾಮೆರಾದಲ್ಲೂ ಸೆರೆ ಹಿಡಿದರು.

Advertisement

ವಾಟ್ಸ್‌ಆ್ಯಪ್‌ ಗ್ರೂಪ್‌ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಈ ಚಿತ್ರಗಳು ವೈರಲ್‌ ಆಗಿದ್ದವು. ಸೂರ್ಯನ ಸುತ್ತಲೂ ಆವರಿಸಿರುವ ಮೋಡದಲ್ಲಿ ಹುದುಗಿರುವ ಮಂಜುಗಡ್ಡೆ ಕಣಗಳ ಮೇಲೆ ಬೆಳಕು ಹರಿದ ಪರಿಣಾಮ ಆಕರ್ಷಕ ವೃತ್ತ ಗೋಚರಿಸಿದೆ. ಕಾಮನಬಿಲ್ಲು ಸೃಷ್ಟಿಯಾದಂತೆ ನಡೆದ ವಿದ್ಯಮಾನ ಇದಾಗಿದ್ದು ಬಣ್ಣಗಳಲ್ಲಿ ಮಾತ್ರ ವ್ಯತ್ಯಾಸ ಕಂಡುಬಂದಿದೆ.

ವಾತಾವರಣದಲ್ಲಿ ತೇವಾಂಶ ಹೆಚ್ಚು ಇರುವ ಮತ್ತು ಮಳೆ ಬರುವ ಮುನ್ಸೂಚನೆಯನ್ನುಇದು ನೀಡುತ್ತದೆ. ಮೋಡಗಳಲ್ಲಿರುವ ಮಂಜುಗಡ್ಡೆ ಹರಳುಗಳು ಸೂರ್ಯನಿಗೆ 22 ಡಿಗ್ರಿ ಅಥವಾ ಹೆಚ್ಚಿನ ಕೋನದಲ್ಲಿ ವಕ್ರೀ ಭವನಕ್ಕೀಡಾಗುತ್ತವೆ. ಸೂರ್ಯನ ಸುತ್ತ ವೃತ್ತಾಕಾರವಾಗಿ ಹರಡಿಕೊಳ್ಳುತ್ತವೆ.ಈ ಹರಳುಗಳ ಮೂಲಕ ಸೂರ್ಯನ ಬೆಳಕು ಹಾದುಹೋಗುವಾಗ, ಕಿರಣಕಾಮನಬಿಲ್ಲಿನ ಏಳು ಬಣ್ಣಗಳಾಗಿ ಚದುರಿ,ಆಕರ್ಷಕ ಕಾಮನಬಿಲ್ಲು ಗೋಚ ರಿಸುತ್ತದೆ. ಇದು ತೀರಾ ಅಪರೂಪವೇನಲ್ಲ ಎನ್ನುತ್ತಾರೆ ವಿಜ್ಞಾನಿಗಳು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next