Advertisement

ಮಂಗಳೂರಿಗೆ ಆಗಮಿಸಿದ ದಲಾಯಿ ಲಾಮ: ಟಿಬೇಟಿಯನ್ ಸಾಂಪ್ರದಾಯಿಕ ನೃತ್ಯದ ಮೂಲಕ ಸ್ವಾಗತ

09:46 AM Aug 30, 2019 | Team Udayavani |

ಮಂಗಳೂರು: ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲಾಯಿ ಲಾಮ ಅವರು ಗುರುವಾರ ಮಂಗಳೂರಿಗೆ ಆಗಮಿಸಿದ್ದಾರೆ. ಟಿಬೇಟಿಯನ್ ಸಾಂಪ್ರದಾಯಿಕ ನೃತ್ಯದ ಮೂಲಕ ಅವರನ್ನು ಸ್ವಾಗತಿಸಲಾಯಿತು‌.

Advertisement

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ದಲಾಯಿ ಲಾಮ ಅವರನ್ನು ಮಂಗಳೂರು ಉಪವಿಭಾಗಾಧಿಕಾರಿ ರವಿ ಚಂದ್ರ ನಾಯ್ಕ್, ಉಪ ಪೊಲೀಸ್ ಆಯುಕ್ತರಾದ ಅರುಣಾಂಶು ಗಿರಿ,ಲಕ್ಷ್ಮೀ ಗಣೇಶ್ ಅವರು ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಿದರು.

ದಲಾಯಿಲಾಮ ಆಗಮನದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ನಗರದ ಖಾಸಗಿ ಹೋಟೆಲ್ ನಲ್ಲಿ ತಂಗಿರುವ ಅವರನ್ನು ಭಾರೀ ಭದ್ರತೆಯಲ್ಲಿ ಝೀರೋ ಟ್ರಾಫಿಕ್ ನಲ್ಲಿ ವಿಮಾನ ನಿಲ್ದಾಣದಿಂದ ನಗರಕ್ಕೆ ಕರೆ ತರಲಾಯಿತು‌.

ಮೂರು ದಿನಗಳ ಕಾಲ ಮಂಗಳೂರು ನಗರದಲ್ಲಿ ತಂಗಲಿರುವ ದಲಾಯಿ ಲಾಮ ಅವರು ಆ. 30 ರಂದು ನಗರದ ಫಾದರ್ ಮುಲ್ಲರ್ ಸಭಾಂಗಣದಲ್ಲಿ ನಡೆಯುವ ನಯನ ಅಖಿಲ ಭಾರತ ಕ್ಯಾಥೊಲಿಕ್ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸುವರು. ಆ.31 ರಂದು ಅವರು ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next