Advertisement
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ದಸರಾ ಭಿತ್ತಿಚಿತ್ರ ಬಿಡುಗಡೆ ಗೊಳಿಸಿ ಮಾತನಾಡಿದ ಅವರು, ಗಾಳಿಪಟದ ಸಂಸ್ಕೃತಿಯನ್ನು ಎಲ್ಲರಿಗೂ ಪರಿಚಯಿಸುವ ಮೂಲಕ ಮಕ್ಕಳು ಹಾಗೂ ಯುವ ಜನತೆಯಲ್ಲಿ ಸೃಜನಶೀಲತೆ, ಸ್ಪರ್ಧಾತ್ಮಕ ಮನೋ ಭಾವ, ಚಿಂತನೆ ಬೆಳೆಸಲು ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ಸಂಯುಕ್ತಾಶ್ರಯ ದಲ್ಲಿ ಸೆ.29,30ರಂದು ಲಲಿತಮಹಲ್ ಹೆಲಿ ಪ್ಯಾಡ್ ಮೈದಾನದಲ್ಲಿ ಗಾಳಿಪಟ ಉತ್ಸವವ ಆಯೋಜಿಸಲಾಗಿದೆ. ಈ ಉತ್ಸವದಲ್ಲಿ ಮಂಗಳೂರು, ಮುಂಬೈ, ಅಹಮದಾಬಾದ್, ಸೂರತ್ ನಗರಗಳಿಂದ ವೃತ್ತಿ ನಿರತ ಗಾಳಿಪಟ ಹಾರಿಸುವವರು ಪಾಲ್ಗೊಳ್ಳಲಿದ್ದಾರೆ ಎಂದರು.
ವಿದ್ಯಾರ್ಥಿಗಳ ತಂಡಗಳಿಗೆ ಅ.10ರಿಂದ 17ರ ವರೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುವ ಯುವ ದಸರಾದಲ್ಲಿ ಕಾರ್ಯಕ್ರಮ ನೀಡಲು ಅವಕಾಶ ನೀಡಲಾಗುವುದು ಎಂದು ತಿಳಿಸಿದರು.
ಕಲಾತಂಡಗಳ ಮೆರವಣಿಗೆ: ಅ.14ರಂದು ಜಂಬೂಸವಾರಿ ಸಾಗುವ ಮಾರ್ಗದಲ್ಲಿ ಅರ ಮನೆಯಿಂದ ಬನ್ನಿಮಂಟಪ ಮೈದಾನದ ವರೆಗೆ ವಿವಿಧ ಕಲಾತಂಡಗಳ ಮೆರವಣಿಗೆ ಆಯೋಜಿಸಲಾಗಿದೆ. ಹೋಬಳಿ ಮಟ್ಟದಲ್ಲಿ ಗ್ರಾಮೀಣ ದಸರಾ ಆಯೋಜಿಸುವ ಸಂಬಂಧ ಅ.1ರಂದು ಶಾಸಕರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ ದಿನಾಂಕ ನಿಗದಿಪಡಿಸಲಾಗುವುದು ಎಂದರು. ದಸರಾ ಸಂದರ್ಭದಲ್ಲಿ ಅಂತಾರಾಜ್ಯ ಪ್ರವಾಸಿ ವಾಹನಗಳಿಗೆ ಪ್ರವೇಶ ತೆರಿಗೆ ವಿನಾಯಿತಿ ನೀಡುವ ಸಂಬಂಧ ಸರ್ಕಾರಕ್ಕೆ
ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇನ್ನೂ ಸರ್ಕಾರ ದಿಂದ ಆದೇಶವಾಗಿಲ್ಲ ಎಂದರು.
Related Articles
Advertisement
ಉಪ ಸಮಿತಿಗೆ ಹೆಸರು ಬಂದಿಲ್ಲನಾಡಹಬ್ಬ ದಸರಾ ಮಹೋತ್ಸವ ಆಚರಣೆ ಸಂಬಂಧ ರಚಿಸಲಾಗುವ 16 ಉಪ ಸಮಿತಿಗಳಿಗೆ ಇದೇ ಮೊದಲ ಬಾರಿಗೆ ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರನ್ನು ಸೇರಿಸಲು ಉತ್ಸುಕತೆ ತೋರಿಸುವ ಸಚಿವ ಜಿ.ಟಿ.ದೇವೇಗೌಡ ಅವರು, ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಮೂರು ಪಕ್ಷಗಳ ಅಧ್ಯಕ್ಷರುಗಳಿಗೆ ಪತ್ರ ಬರೆದು ಸಮಿತಿಗಳಿಗೆ ತಲಾ ಐದು ಹೆಸರುಗಳನ್ನು ನೀಡುವಂತೆ ಕೋರಿದ್ದರೂ ಈವರೆಗೆ ಯಾದ ಪಕ್ಷದವರೂ ಪಟ್ಟಿ ಕಳುಹಿಸಿಲ್ಲ. ಹೀಗಾಗಿ ಉಪ ಸಮಿತಿಗಳಿಗೆ ಜನಪ್ರತಿನಿಧಿಗಳನ್ನು ಸೇರಿಸುವ ಕಾರ್ಯ ವಿಳಂಬವಾಗಿದೆ. ಒಂದೆರಡು ದಿನಗಳಲ್ಲಿ ಈ ಕೆಲಸ ಆಗುತ್ತದೆ ಎಂದ ಸಚಿವರು, ಸ್ವತಃ ನಾನೇ ಶಾಸಕ ತನ್ವೀರ್ ಸೇಠ್ಠ್…ಗೆ ದೂರವಾಣಿ ಕರೆ ಮಾಡಲು ಪ್ರಯತ್ನಿಸಿದರೂ ಸಿಗುತ್ತಿಲ್ಲ ಎಂದು ಹೇಳಿದರು. ದಸರಾ ಹಿನ್ನೆಲೆಯಲ್ಲಿ ಮೈಸೂರು ನಗರದಲ್ಲಿ ಪಾಲಿಕೆ ಹಾಗೂ ಲೋಕೋಪಯೋಗಿ ಇಲಾಖೆ, ನಗರಾ ಭಿವೃದ್ಧಿಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ 216 ಕೋಟಿ ರೂ. ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹಣಕಾಸು ಇಲಾಖೆಯಿಂದ ಒಂದೆರಡು ದಿನಗಳಲ್ಲಿ ಒಪ್ಪಿಗೆ ಸಿಗಲಿದೆ.
ಜಿ.ಟಿ.ದೇವೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಮೈಸೂರು ಭಾಗದ ಪ್ರವಾಸೋದ್ಯಮ ರಾಯಭಾರಿಯಾಗಲು ಒಪ್ಪಿರುವ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರೊಂದಿಗೆ ಅ.4 ಅಥವಾ 5 ರಂದು ಸಭೆ ನಡೆಸಿ, ರಾಯಭಾರಿಯಾಗಿ ಬಳಸಿಕೊಳ್ಳುವ ಸಂಬಂಧ ರೂಪು ರೇಷೆ ಸಿದ್ದಪಡಿಸಲಾಗುವುದು.
ಸಾ.ರಾ.ಮಹೇಶ್, ಪ್ರವಾಸೋದ್ಯಮ ಸಚಿವ