Advertisement

ಕೃಷಿ ಸಾಲ ಮನ್ನಾ ಮಾಡಲು ಸಿಎಂಗೆ ಗಡುವು

10:55 AM May 28, 2017 | Team Udayavani |

ಬೆಂಗಳೂರು: ರೈತರು ಸಹಕಾರಿ ಸಂಘಗಳ ಮೂಲಕ ಪಡೆದ ಕೃಷಿ ಸಾಲ ಮನ್ನಾ ಮಾಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರಕ್ಕೆ ಗಡುವು ವಿಧಿಸಿದ್ದಾರೆ. ಜುಲೈ ಅಂತ್ಯದೊಳಗೆ ಸಾಲ ಮನ್ನಾ ಘೋಷಿಸದಿದ್ದರೆ ಬೆಂಗಳೂರಲ್ಲಿ ಲಕ್ಷಾಂತರ ರೈತರೊಡಗೂಡಿ ಬೃಹತ್‌ ಹೋರಾಟ ನಡೆಸುವ ಎಚ್ಚರಿಕೆ ನೀಡಿದ್ದಾರೆ.

Advertisement

ಬೆಂಗಳೂರು ಪ್ರಸ್‌ಕ್ಲಬ್‌ ಮತ್ತು ಬೆಂಗಳೂರು ವರದಿಗಾರರ ಒಕ್ಕೂಟ ಶನಿವಾರ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಬರಗಾಲಕ್ಕೂ ಸರಿಯಾಗಿ ಸ್ಪಂದಿಸುತ್ತಿಲ್ಲ, ರೈತರ ಜೀವನಾಡಿಯಾಗಿರುವ ನೀರಾವರಿ ಯೋಜನೆಗಳನ್ನೂ ನಿರ್ಲಕ್ಷಿಸುತ್ತಿದೆ. ಹೀಗಾಗಿ ಸರ್ಕಾರದ ಮೂಗು ಹಿಡಿದು ಸಾಲಮನ್ನಾ ಮಾಡಿಸಲಾಗುವುದು. ಅದು ಸಾಧ್ಯವಾಗದಿದ್ದರೆ ಜುಲೈ ಕೊನೇ ವಾರ ಬೆಂಗಳೂರಲ್ಲಿ ರೈತರ ಬೃಹತ್‌ ಪ್ರತಿಭಟನಾ ಸಮಾವೇಶ ನಡೆಸಿ ಸರ್ಕಾರದ ಕಣ್ತೆರೆಸಲಾಗುವುದೆಂದರು.

ಮುಂಬರುವ ಚುನಾವಣೆಯಲ್ಲಿ ಮತದಾರರು ಕಮಲಕ್ಕೆ ಆಶೀರ್ವದಿಸಿದರೆ ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಸಹಕಾರ ಬ್ಯಾಂಕ್‌ಗಳ ಮೂಲಕ ರೈತರ ಸಾಲ ಮನ್ನಾ ಘೋಷಣೆ ಮಾಡಲಾಗುವುದು ಎಂದು ಬಿಎಸ್‌ವೈ ಭರವಸೆ ನೀಡಿದರು. ಹಿಂದೆ ಬಿಜೆಪಿ-ಜೆಡಿಎಸ್‌ ಮೈತ್ರಿ ಸರ್ಕಾರದಲ್ಲಿ ನಾನು ಹಣಕಾಸು ಸಚಿವನಾಗಿದ್ದಾಗ ಒಮ್ಮೆ ಮತ್ತು ಬಿಜೆಪಿ ಸರ್ಕಾರದ ಅವಧಿಯಲ್ಲಿ ಒಂದು ಬಾರಿ ರೈತರ ಸಾಲಮನ್ನಾ ಮಾಡಲಾಗಿತ್ತು. ಆಗ ನಾವು ಕೇಂದ್ರದತ್ತ ಕೈತೋರಿಸಿರಲಿಲ್ಲ. ಇತ್ತೀಚೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಗಳೂ ಕೇಂದ್ರದತ್ತ ಬೊಟ್ಟು ಮಾಡದೆ ರೈತರ
ಸಾಲಮನ್ನಾ ಮಾಡಿದ್ದಾರೆ. ಈ ವಿಚಾರವನ್ನು ಸಿದ್ದರಾಮಯ್ಯ ಅರ್ಥ ಮಾಡಿಕೊಳ್ಳಬೇಕು ಎಂದರು.

ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಮಾಡಿದ ಸಾಲ ಮನ್ನಾ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಈ ಅಧಿಕಾರ ರಾಜ್ಯ
ಸರ್ಕಾರಕ್ಕಿಲ್ಲ. ಬಿಜೆಪಿ ಸರ್ಕಾರದಲ್ಲಿ ತಾವು ಮುಖ್ಯಮಂತ್ರಿಯಾದ ಬಳಿಕ ಸಹಕಾರ ಬ್ಯಾಂಕ್‌ಗಳಲ್ಲಿ ರೈತರು ಮಾಡಿದ ಸಾಲ ಮನ್ನಾ ಮಾಡಿ, ಬಳಿಕ ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮತ್ತು ಪ್ರಧಾನಿಯವರ ಜತೆ ಮಾತನಾಡುವುದಾಗಿ ತಿಳಿಸಿದರು.

ಸರ್ಕಾರಕ್ಕೆ ದಾರಿದ್ರé ಬಂದಿದೆಯಾ?: ರಾಜ್ಯ ಪ್ರವಾಸದ ವೇಳೆ ದಲಿತರ ಕೇರಿಗಳಿಗೆ ಭೇಟಿ ನೀಡುವುದು, ಅವರ
ಮನೆಯಲ್ಲಿ ಊಟ ಮಾಡುವುದು, ಬರ ಪರಿಸ್ಥಿತಿ ಅಧ್ಯಯನ ಮಾಡುತ್ತಿರುವುದರ ಬಗ್ಗೆ ಕೇವಲವಾಗಿ ಮಾತನಾಡುತ್ತಿದ್ದಾರೆ. ದಲಿತರ ಕೇರಿಯಲ್ಲಿ ವಾಸ ಮಾಡುವವರಿಗೆ ಸರಿಯಾದ ಮನೆ, ನಿವೇಶನಗಳಿಲ್ಲ. ಇನ್ನೊಂದೆಡೆ ಜಾನುವಾರುಗಳಿಗೆ ಮೇವು ಬೇಕಾದಷ್ಟು ಒದಗಿಸುತ್ತಿಲ್ಲ. ಬಡವರು, ದಲಿತರ ಪರ ಕೆಲಸ ಮಾಡದಿರುವಷ್ಟು ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ದಾರಿದ್ರé ಬಂದಿದೆಯೇ? ಸಿದ್ದರಾಮಯ್ಯ ಅವರು ಹೆಲಿಕಾಪ್ಟರ್‌ನಿಂದ ಇಳಿದು ಈ ಜನರ ಕಷ್ಟ ನೋಡಲಿ ಎಂದು ಸಲಹೆ ಮಾಡಿದರು.

Advertisement

ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆರೋಪಗಳ ಪಟ್ಟಿಯನ್ನೇ ಬಿಡುಗಡೆ ಮಾಡಿದ ಬಿಎಸ್‌ವೈ, ಕೇಂದ್ರದಲ್ಲಿ ಮೋದಿ ಸರ್ಕಾರ
ಅಧಿಕಾರಕ್ಕೆ ಬಂದ ಮೇಲೆ ಇದುವರೆಗೆ ರಾಜ್ಯಕ್ಕೆ ಬಿಡುಗಡೆ ಮಾಡಿದ ಅನುದಾನ, ತೆರಿಗೆ ಹಂಚಿಕೆ, ಸಹಾಯಧನ, ಬರ
ಪರಿಹಾರ ಮೊತ್ತದ ಅಂಕಿ ಅಂಶಗಳನ್ನು ಬಹಿರಂಗಪಡಿಸಿದರು. ರಾಜ್ಯ ಸರ್ಕಾರದ ವಿರುದ್ಧ ರಾಜ್ಯವ್ಯಾಪಿ ಜನಜಾಗೃತಿ
ಮೂಡಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next